• search
  • Live TV
ಕೋಲ್ಕತಾ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಕೊರೊನಾ ಸೋಂಕು: ಮೇ 30ರವರೆಗೆ ಪಶ್ಚಿಮ ಬಂಗಾಳದಲ್ಲಿ ಲಾಕ್‌ಡೌನ್ ವಿಸ್ತರಣೆ

|

ಕೋಲ್ಕತ್ತಾ, ಮೇ 15: ಕೊರೊನಾ ಸೋಂಕು ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ಮೇ 30ರವರೆಗೂ ಲಾಕ್‌ಡೌನ್ ವಿಸ್ತರಿಸಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರ್ಧರಿಸಿದ್ದಾರೆ.

ಶುಕ್ರವಾರ ಒಂದೇ ದಿನ ಸಾವನ್ನಪ್ಪಿದ 139 ಮಂದಿಯ ಪೈಕಿ ಐದು ಪ್ರಮುಖ ವೈದ್ಯರೂ ಕೂಡ ಸೇರಿದ್ದಾರೆ. ಹೀಗಾಗಿ ಇಂದು ಸಭೆ ನಡೆಸಿದ ಸರ್ಕಾರ ಮತ್ತೆ 15 ದಿನಗಳ ಲಾಕ್ಡೌನ್ ಮುಂದುವರೆಸಲಿದೆ ಎಂದು ಬಂಗಾಳ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ. ಅಲ್ಲದೆ ಲಾಕ್ ಡೌನ್ ಅನ್ನು ಮತ್ತಷ್ಟು ಸಮರ್ಥವಾಗಿ ಜಾರಿಗೆ ತರಲು ಮತ್ತಷ್ಟು ಕಠಿಣ ನಿಯಮಗಳನ್ನು ಜಾರಿ ಮಾಡಲಾಗುತ್ತದೆ ಎಂದೂ ಹೇಳಲಾಗಿದೆ.

ಮಮತಾ ಬ್ಯಾನರ್ಜಿ ಕಿರಿಯ ಸಹೋದರ ಕೊರೊನಾ ಸೋಂಕಿಗೆ ಬಲಿಮಮತಾ ಬ್ಯಾನರ್ಜಿ ಕಿರಿಯ ಸಹೋದರ ಕೊರೊನಾ ಸೋಂಕಿಗೆ ಬಲಿ

ಬಂಗಾಳದಲ್ಲಿ ಶುಕ್ರವಾರ ಕೂಡ ದೈನಂದಿನ ಸೋಂಕು ಪ್ರಕರಣಗಳ ಸಂಖ್ಯೆ 20 ಸಾವಿರ ಗಡಿ ದಾಟಿದ್ದು, 136 ಮಂದಿ ಸೋಂಕಿತರು ಬಲಿಯಾಗಿದ್ದಾರೆ. ಶುಕ್ರವಾರ ಒಂದೇ ದಿನ 20,846 ಹೊಸ ಸೋಂಕು ಪ್ರಕರಣಗಳು ದಾಖಲಾಗಿದ್ದು ಆ ಮೂಲಕ ಒಟ್ಟಾರೆ ಸೋಂಕಿತರ ಸಂಖ್ಯೆ 10,94,802ಕ್ಕೆ ಏರಿಕೆಯಾಗಿದೆ. ಅಂತೆಯೇ ಕೋವಿಡ್‌ಗೆ ಬಲಿಯಾದವರ ಸಂಖ್ಯೆ ಕೂಡ 12,993ಕ್ಕೆ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರ ಕಿರಿಯ ಸಹೋದರ ಆಶಿಮ್ ಬ್ಯಾನರ್ಜಿಯವರು ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ.

ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ಆಶಿಮ್ ಬ್ಯಾನರ್ಜಿಯವಕು ಕೋಲ್ಕತಾದ ಮೆಡಿಕಾ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಇಂದು ಕೊನೆಯುಸಿರೆಳೆದಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ.

English summary
In the wake of rising coronavirus cases, the Mamata Banerjee-led West Bengal government on Saturday extended the lockdown till May 30.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X