ಪಶ್ಚಿಮ ಬಂಗಾಳ: ಚುನಾವಣಾ ಅಧಿಕಾರಿ ನಿಗೂಢ ರೀತಿಯಲ್ಲಿ ಕಣ್ಮರೆ

ಕೋಲ್ಕತಾ, ಏಪ್ರಿಲ್ 20: ಪಶ್ಚಿಮ ಬಂಗಾಳದ ಚುನಾವಣಾ ಅಧಿಕಾರಿಗಳಲ್ಲಿ ಒಬ್ಬರಾದ ಅರ್ನಾಬ್ ರಾಯ್ ಎಂಬುವವರು ನಾಡಿಯಾ ಜಿಲ್ಲೆಯಿಂದ ಗುರುವಾರದಿಂದ ನಾಪತ್ತೆಯಾಗಿದ್ದಾರೆ.

ಪೊಲೀಸರು ಶುಕ್ರವಾರ ರಾತ್ರಿ ಎಫ್‌ಐಆರ್ ದಾಖಲಿಸಿಕೊಂಡಿತ್ತು ತನಿಖೆ ಆರಂಭಿಸಿದ್ದಾರೆ. ಹಿರಿಯ ಪೊಲೀಸ್ ಅಧಿಕಾರಿಗಳ ಪ್ರಕಾರ ಅರ್ನಾಬ್ ಅವರು ನಾಡಿಯಾದ ಶಾಂತಿಪುರದಲ್ಲಿ ಕಡೆಯ ಬಾರಿಗೆ ಕಾಣಿಸಿದ್ದರು. ಅವರ ಎರಡೂ ಮೊಬೈಲ್ ಫೋನ್‌ಗಳು ಸ್ವಿಚ್‌ಆಫ್ ಆಗಿವೆ.

Lok Sabha elections 2019 west bengal nadia evm incharge arnab roy missing

30 ವರ್ಷದ ಅರ್ನಾಬ್ ರಾಯ್ ಅವರು ರಾಣಘಾಟ್ ಲೋಕಸಭೆ ಕ್ಷೇತ್ರದ ಇವಿಎಂ ಮತ್ತು ವಿವಿಪ್ಯಾಟ್‌ಗಳ ಮೇಲುಸ್ತುವಾರಿ ಅಧಿಕಾರಿಯಾಗಿದ್ದರು. ಪೊಲೀಸರು ಅವರ ಮೊಬೈಲ್ ಫೋನ್ ಸಿಗ್ನಲ್‌ಗಳನ್ನು ಟ್ರ್ಯಾಕ್ ಮಾಡುತ್ತಿದ್ದು, ಪ್ರದೇಶದ ಸುತ್ತಮುತ್ತಲಿನ ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ.

ಅವರು ಕಣ್ಮರೆಯಾಗಿದ್ದರು ಚುನಾವಣೆಗೆ ಸಂಬಂಧಿಸಿದ್ದಲ್ಲ. ಅವರ ಸ್ಥಾನಕ್ಕೆ ಬೇರೊಬ್ಬ ಅಧಿಕಾರಿಯನ್ನು ನೇಮಿಸಲಾಗಿದೆ ಎಂದು ಚುನಾವಣಾಧಿಕಾರಿಗಳು ತಿಳಿಸಿದ್ದಾರೆ.

'ತಮ್ಮ ಪತಿ ಯಾವುದೇ ಮಾನಸಿಕ ಖಿನ್ನತೆಯಿಂದ ಬಳಲುತ್ತಿರಲಿಲ್ಲ. ಮತ್ತು ನಮ್ಮ ನಡುವೆ ತುಂಬ ಆರೋಗ್ಯಕರ ಬಾಂಧವ್ಯ ಇತ್ತು' ಎಂದು ಅವರ ಪತ್ನಿ ಸಾಮಾಜಿಕ ಜಾಲತಾಣಗಳಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+