ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪಶ್ಚಿಮ ಬಂಗಾಳಕ್ಕೆ ಉಚಿತವಾಗಿ ಕೊರೊನಾ ಲಸಿಕೆ: ಮಮತಾ ಘೋಷಣೆ

|
Google Oneindia Kannada News

ಕೋಲ್ಕತ್ತಾ, ಜನವರಿ 10: ಪಶ್ಚಿಮ ಬಂಗಾಳಕ್ಕೆ ಉಚಿತವಾಗಿ ಕೊರೊನಾ ಲಸಿಕೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಭರವಸೆ ನೀಡಿದ್ದಾರೆ.

ಮೊದಲ ಹಂತದಲ್ಲಿ ಮೂರು ಕೋಟಿ ಮುಂಚೂಣಿ ಕಾರ್ಯಕರ್ತರಿಗೆ, ನಂತರ 50 ವರ್ಷಕ್ಕೂ ಮೇಲ್ಪಟ್ಟ 27 ಕೋಟಿ ಜನರಿಗೆ ಲಸಿಕೆ ನೀಡಲಾಗುತ್ತದೆ. ಕೊರೋನಾವೈರಸ್ ವಿರುದ್ಧದ ಹೋರಾಟದಲ್ಲಿ ದೇಶದಲ್ಲಿ ಇದು ಮಹತ್ವದ ಮೈಲುಗಲ್ಲು ಆಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೊಗಳಿದ್ದಾರೆ.

ಮಮತಾಗೆ ಹಿನ್ನಡೆ, ಕ್ರೀಡಾ ಸಚಿವ ಲಕ್ಷ್ಮಿ ರತನ್ ಶುಕ್ಲಾ ರಾಜೀನಾಮೆಮಮತಾಗೆ ಹಿನ್ನಡೆ, ಕ್ರೀಡಾ ಸಚಿವ ಲಕ್ಷ್ಮಿ ರತನ್ ಶುಕ್ಲಾ ರಾಜೀನಾಮೆ

ಪಶ್ಚಿಮ ಬಂಗಾಳದ ಎಲ್ಲ ಜನರಿಗೂ ಉಚಿತವಾಗಿ ಕೊರೊನಾ ಲಸಿಕೆ ಲಭ್ಯವಾಗುವಂತೆ ರಾಜ್ಯ ಸರ್ಕಾರ ಸಿದ್ಧತೆ ಮಾಡುತ್ತಿರುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಭಾನುವಾರ ಹೇಳಿದ್ದಾರೆ.

Mamata Banerjee Announces Free COVID Vaccine For West Bengal

ಕೇರಳ, ತಮಿಳುನಾಡು, ಮಧ್ಯ ಪ್ರದೇಶ ಸೇರಿದಂತೆ ಹಲವು ರಾಜ್ಯಗಳು, ತಮ್ಮ ಜನರಿಗೆ ಉಚಿತವಾಗಿ ಕೋವಿಡ್-19 ಲಸಿಕೆ ನೀಡುವುದಾಗಿ ತಿಳಿಸಿವೆ. ಜನವರಿ 16 ರಿಂದ ದೇಶದಲ್ಲಿ ಕೋವಿಡ್-19 ಲಸಿಕೆ ಆರಂಭಿಸಲಾಗುವುದು ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ಈ ಪುಟಾಣಿಯ ತೊದಲು ನುಡಿ ಕೇಳಿ ಮೂರು ವರ್ಷವಾಯಿತುಈ ಪುಟಾಣಿಯ ತೊದಲು ನುಡಿ ಕೇಳಿ ಮೂರು ವರ್ಷವಾಯಿತು

ಯಾವುದೇ ಶುಲ್ಕವಿಲ್ಲದೆ ಉಚಿತವಾಗಿ ರಾಜ್ಯದಲ್ಲಿನ ಎಲ್ಲಾ ಜನರಿಗೆ ಕೋವಿಡ್- 19 ಲಸಿಕೆ ನೀಡಲು ರಾಜ್ಯ ಸರ್ಕಾರ ಎಲ್ಲಾ ಸಿದ್ದತೆ ಮಾಡುತ್ತಿರುವುದನ್ನು ಸಂತೋಷದಿಂದ ತಿಳಿಸುತ್ತಿರುವುದಾಗಿ ಬ್ಯಾನರ್ಜಿ ನುಡಿದಿದ್ದಾರೆ.

English summary
West Bengal Chief Minister Mamata Banerjee on Sunday (January 10) announced free coronavirus vaccine for people of West Bengal. The announcement from the Chief Minister comes ahead of the state assembly election, which is scheduled to be held in coming months.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X