ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮಮತಾ ಬ್ಯಾನರ್ಜಿಗೆ 24 ಗಂಟೆ ಚುನಾವಣಾ ಪ್ರಚಾರಕ್ಕೆ ನಿಷೇಧ

|
Google Oneindia Kannada News

ಕೋಲ್ಕತ್ತಾ, ಏಪ್ರಿಲ್ 12: ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿರುವ ಹಿನ್ನೆಲೆಯಲ್ಲಿ ಚುನಾವಣಾ ಆಯೋಗವು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಗೆ 24 ಗಂಟೆಗಳ ಕಾಲ ಚುನಾವಣಾ ಪ್ರಚಾರಕ್ಕೆ ನಿಷೇಧ ವಿಧಿಸಿದೆ.

ಮುಸ್ಲಿಂ ಮತಗಳ ಕ್ರೂಢೀಕರಣ ಮತ್ತು ಕೇಂದ್ರ ಭದ್ರತಾ ಪಡೆಗಳ ವಿರುದ್ಧ ಸಂಘರ್ಷಕ್ಕಿಳಿಯುವಂತೆ ಜನರಿಗೆ ಕರೆ ನೀಡಿದ ಆರೋಪದ ಮೇಲೆ, ಮಮತಾ ಬ್ಯಾನರ್ಜಿ ಅವರಿಗೆ ಸ್ಪಷ್ಟನೆ ಕೋರಿ ಚುನಾವಣಾ ಆಯೋಗ ನೋಟಿಸ್ ಜಾರಿ ಮಾಡಿತ್ತು.

ಪಶ್ಚಿಮ ಬಂಗಾಳದಲ್ಲಿ ದೀದಿ ಕ್ಲೀನ್ ಬೋಲ್ಡ್: ಪ್ರಧಾನಿ ಮೋದಿಪಶ್ಚಿಮ ಬಂಗಾಳದಲ್ಲಿ ದೀದಿ ಕ್ಲೀನ್ ಬೋಲ್ಡ್: ಪ್ರಧಾನಿ ಮೋದಿ

ಮಹತ್ವದ ಬೆಳವಣಿಗೆಯೊಂದರಲ್ಲಿ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದ ಮೇಲೆ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಹಾಗೂ ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರ ಚುನಾವಣಾ ಪ್ರಚಾರದ ಮೇಲೆ 24 ಗಂಟೆಗಳ ನಿಷೇಧ ಹೇರಲಾಗಿದೆ.

Mamata Banerjee Banned From Campaigning For 24 Hours

ಏಪ್ರಿಲ್ 12ರ 8 ಗಂಟೆಯಿಂದ ಏಪ್ರಿಲ್ 13ರ ರಾತ್ರಿ 8 ಗಂಟೆಯವರೆಗೆ ಮಮತಾ ಅವರ ಚುನಾವಣಾ ಪ್ರಚಾರಕ್ಕೆ ನಿರ್ಬಂಧ ವಿಧಿಸಿ ಆಯೋಗ ಆದೇಶ ಹೊರಡಿಸಿದೆ.

ಮಮತಾ ಬ್ಯಾನರ್ಜಿ ಅವರು ಕೇಂದ್ರದ ಪಡೆಗಳಿಗೆ ಮುತ್ತಿಗೆ ಹಾಕುವಂತೆ ಕರೆ ನೀಡಿದ್ದೇ ಕೂಚ್ ಬಿಹಾರದಲ್ಲಿ ಜನರು ಸಿಐಎಸ್‌ಎಫ್ ಮೇಲೆ ದಾಳಿಗೆ ಉಂದಾಗಲು ಕಾರಣ ಎಂದು ಕೇಂದ್ರ ಸಚಿವ ಅಮಿತ್ ಶಾ ಆರೋಪಿಸಿದ್ದರು.

ಮಮತಾ ಬ್ಯಾನರ್ಜಿ ಈ ನೋಟಿಸ್‌ಗೆ ಸೂಕ್ತ ಉತ್ತರ ನೀಡದ ಕಾರಣ, ಅವರ ಚುನಾವಣಾ ಪ್ರಚಾರದ ಮೇಲೆ 24 ಗಂಟೆಗಳ ನಿರ್ಬಂಧ ವಿಧಿಸಲಾಗಿದೆ.

ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ಸುನೀಲ್ ಅರೋರಾ ಇಂದು ನಿವೃತ್ತಿ ಹೊಂದಿದ್ದು, ತಮ್ಮ ನಿವೃತ್ತಿ ದಿನವೇ ಮಮತಾ ಬ್ಯಾನರ್ಜಿ ಚುನಾವಣಾ ಪ್ರಚಾರದ ಮೇಲೆ 24 ಗಂಟೆಗಳ ನಿರ್ಬಂಧ ವಿಧಿಸುವ ನಿರ್ಧಾರಕ್ಕೆ ಸುನೀಲ್ ಅರೋರಾ ಸಹಿ ಮಾಡಿದ್ದಾರೆ.

English summary
Mamata Banerjee was banned from campaigning in Bengal for 24 hours this evening over speeches that the Election Commission said violated the poll code.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X