ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪಶ್ಚಿಮ ಬಂಗಾಳ ಅಭಿವೃದ್ಧಿ ಕುರಿತು ಅಮಿತ್ ಶಾ ವಿರುದ್ಧ ಮಮತಾ ವಾಗ್ದಾಳಿ

|
Google Oneindia Kannada News

ಕೋಲ್ಕತಾ, ಡಿಸೆಂಬರ್ 21: ಪಶ್ಚಿಮ ಬಂಗಾಳದ ಅಭಿವೃದ್ಧಿ ಕುರಿತು ಅಮಿತ್ ಶಾ ವಿರುದ್ಧ ಮಮತಾ ಬ್ಯಾನರ್ಜಿ ವಾಗ್ದಾಳಿ ನಡೆಸಿದ್ದಾರೆ.

ನಾನು ಅಮಿತ್-ಜಿ ಅವರಿಗೆ ಹೇಳಲು ಬಯಸುತ್ತೇನೆ. ನೀವು ಕೇಂದ್ರ ಗೃಹ ಸಚಿವರು. ನಿಮ್ಮ ಪಕ್ಷದ ಕಾರ್ಯಕರ್ತರು ಒದಗಿಸಿದ ಸುಳ್ಳನ್ನು ಪರಿಶೀಲಿಸದೆ ಬಹಿರಂಗವಾಗಿ ಹೇಳುವುದು ಸರಿಯಲ್ಲ ಎಂದಿದ್ದಾರೆ.

ಬಂಗಾಳದಲ್ಲಿ ಬಿಜೆಪಿ ಎರಡಂಕಿ ದಾಟಿದರೂ ಟ್ವಿಟ್ಟರ್ ತ್ಯಜಿಸುತ್ತೇನೆ: ಪ್ರಶಾಂತ್ ಕಿಶೋರ್ ಶಪಥಬಂಗಾಳದಲ್ಲಿ ಬಿಜೆಪಿ ಎರಡಂಕಿ ದಾಟಿದರೂ ಟ್ವಿಟ್ಟರ್ ತ್ಯಜಿಸುತ್ತೇನೆ: ಪ್ರಶಾಂತ್ ಕಿಶೋರ್ ಶಪಥ

ರಾಜ್ಯದ ಅಭಿವೃದ್ಧಿಗೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸುಳ್ಳು ಹೇಳುತ್ತಿದ್ದಾರೆ ಎಂದಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು, ರಾಜ್ಯದ ಸ್ಥಾನದ ಕುರಿತು ಅವರು ನೀಡಿದ ಅಂಕಿಅಂಶ ಸುಳ್ಳಿನ ಕಸ ಎಂದು ವಾಗ್ದಾಳಿ ನಡೆಸಿದ್ದಾರೆ.

Mamata Banerjee Hits Out At Amit Shah Over Bengals Development

ಇದೇ ವೇಳೆ ಅಧಿಕೃತ ಸಭೆಗಾಗಿ ಡಿಸೆಂಬರ್ 28 ರಂದು ಬಿರ್ಭಮ್ ಜಿಲ್ಲೆಗೆ ಭೇಟಿ ನೀಡುವುದಾಗಿ ಮತ್ತು ಮರುದಿನ ರೋಡ್ ಶೋ ನಡೆಸುವುದಾಗಿ ಮಮತಾ ಬ್ಯಾನರ್ಜಿ ತಿಳಿಸಿದ್ದಾರೆ.

ಅಮಿತ್ ಶಾ ಅವರ ಹೇಳಿಕೆಗಳಿಗೆ ಸಂಬಂಧಿಸಿದಂತೆ ನಾನು ಇಂದು ಎರಡು ವಿಷಯಗಳ ಬಗ್ಗೆ ಮಾತ್ರ ಮಾತನಾಡುತ್ತೇನೆ, ನಾಳೆ ಆ ಬಗ್ಗೆ ಸಂಪೂರ್ಣ ಮಾಹಿತಿ ನೀಡುತ್ತೇನೆ. ನಾವು ಉದ್ಯಮದಲ್ಲಿ ಶೂನ್ಯ ಎಂದು ಅವರು ಹೇಳಿದ್ದಾರೆ. ಆದರೆ ಸಣ್ಣ ಕೈಗಾರಿಕೋದ್ಯಮದಲ್ಲಿ ಪಶ್ಚಿಮ ಬಂಗಾಳ ಪ್ರಥಮ ಸ್ಥಾನದಲ್ಲಿದೆ.

ಮತ್ತೊಂದು ವಿಚಾರ ಎಂದರೆ, ನಾವು ಗ್ರಾಮೀಣ ರಸ್ತೆಗಳನ್ನು ನಿರ್ಮಿಸಿಲ್ಲ ಎಂದು ಹೇಳಿದ್ದಾರೆ. ಆದರೆ ಗ್ರಾಮೀಣ ರಸ್ತೆ ನಿರ್ಮಾಣದಲ್ಲಿ ನಾವೇ ನಂಬರ್ ಒನ್ ಎಂದು ಕೇಂದ್ರ ಸರ್ಕಾರವೇ ಹೇಳಿದೆ ಎಂದರು.

English summary
West Bengal Chief Minister Mamata Banerjee on Monday accused Home Minister Amit Shah of speaking untruth on the development of the state, describing the figures given by him on the position of the state on various parameters as "garbage of lies".
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X