ಅಕ್ರಮ ಆಸ್ತಿ ಆರೋಪ: ರಾಬರ್ಟ್ ವಾದ್ರಾ ಬೆಂಬಲಕ್ಕೂ ಬಂದ ಮಮತಾ ಬ್ಯಾನರ್ಜಿ
ಕೋಲ್ಕತಾ, ಫೆಬ್ರವರಿ 7: ವಿದೇಶದಲ್ಲಿ ಬೇನಾಮಿ ಆಸ್ತಿ ಮತ್ತು ಅಕ್ರಮ ಹಣ ವರ್ಗಾವಣೆ ಆರೋಪ ಎದುರಿಸುತ್ತಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಭಾವ ರಾಬರ್ಟ್ ವಾದ್ರಾ ಅವರ ಪರ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬ್ಯಾಟಿಂಗ್ ಮಾಡಿದ್ದಾರೆ.
ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಜತೆಗೂಡಿ ಬಿಜೆಪಿಯನ್ನು ಎದುರಿಸಲು ಸಿದ್ಧರಾಗಿರುವ ಮಮತಾ, ಪ್ರಕರಣದಲ್ಲಿ ಇಡಿ ಎದುರು ವಿಚಾರಣೆಗೆ ಹಾಜರಾಗಿದ್ದ ರಾಬರ್ಟ್ ವಾದ್ರಾಗೆ ಬೆಂಬಲ ವ್ಯಕ್ತಪಡಿಸಿದ್ದಾರೆ.
ಶಾರದಾ ಚಿಟ್ ಫಂಡ್ ಹಗರಣದಲ್ಲಿ ಸಿಬಿಐನಿಂದ ವಿಚಾರಣೆಗೆ ಒಳಪಡಬೇಕಿರುವ ಪೊಲೀಸ್ ಆಯುಕ್ತರ ರಕ್ಷಣೆಗೆ ಮಮತಾ ಧಾವಿಸಿದ್ದು, ತೀವ್ರ ಚರ್ಚೆಗೆ ಗ್ರಾಸವಾಗಿತ್ತು.
ಕೋಲ್ಕತಾ ಪೊಲೀಸ್ ಆಯುಕ್ತ ರಾಜೀವ್ ಕುಮಾರ್ ಅವರನ್ನು ಬಂಧಿಸಲು ತೆರಳಿದ್ದ ಸಿವಿಐ ಅಧಿಕಾರಿಗಳನ್ನೇ ಮಮತಾ ಸರ್ಕಾರ ಬಂಧಿಸಿತ್ತು. ಬಳಿಕ ಮಮತಾ ಕೇಂದ್ರ ಸರ್ಕಾರದ ವಿರುದ್ಧ ಧರಣಿ ನಡೆಸಿದ್ದರು. ಬಿಜೆಪಿ ನೇತೃತ್ವದ ಸರ್ಕಾರವು ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡು ರಾಜಕೀಯ ಸೇಡು ತೀರಿಸಿಕೊಳ್ಳುತ್ತಿದೆ ಎಂದು ಆರೋಪಿಸಿದ್ದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಸೇರಿದಂತೆ ಮಹಾಮೈತ್ರಿಕೂಟದ ಎಲ್ಲ ಪಕ್ಷಗಳೂ ಮಮತಾ ಬ್ಯಾನರ್ಜಿ ಅವರ ಬೆಂಬಲಕ್ಕೆ ಧಾವಿಸಿದ್ದವು. ಈಗ ಅದಕ್ಕೆ ಪ್ರತಿಯಾಗಿ ಮಮತಾ, ಕಾಂಗ್ರೆಸ್ ಪರ ನಿಂತಿರುವುದಾಗಿ ಹೇಳಿಕೊಂಡಿದ್ದಾರೆ.

ನಾವೆಲ್ಲ ಒಗ್ಗಟ್ಟಾಗಿದ್ದೇವೆ
'ಇದೇನು ಗಂಭೀರವಾದ ಪ್ರಕರಣವಲ್ಲ. ಏನೂ ಇಲ್ಲ, ಎಲ್ಲರಿಗೂ ಮಾಮೂಲಿಯಂತೆ ನೋಟಿಸ್ ಕಳುಹಿಸುವುದು ಸಾಮಾನ್ಯ. ನಾವು ಜತೆಯಾಗಿ ನಿಂತಿದ್ದೇವೆ, ನಾವು ಒಗ್ಗಟ್ಟಾಗಿದ್ದೇವೆ' ಎಂದು ಮಮತಾ ಕಾಂಗ್ರೆಸ್ ಮತ್ತು ವಾದ್ರಾ ಬೆಂಬಲಕ್ಕೆ ನಿಂತಿದ್ದಾರೆ.
ಕೇಂದ್ರ ಸರ್ಕಾರವು ಚುನಾವಣೆಗೂ ಮುನ್ನ ಉದ್ದೇಶಪೂರ್ವಕವಾಗಿ ಈ ರೀತಿ ಮಾಡುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

ಮಮತಾಗೂ ಬೆಂಬಲ ದೊರಕಿತ್ತು
ಸಿಬಿಐ ವಿವಾದದಲ್ಲಿ ಮಮತಾ ಬ್ಯಾನರ್ಜಿ ಕೇಂದ್ರ ಸರ್ಕಾರಕ್ಕೆ ಸೆಡ್ಡು ಹೊಡೆದಾಗ ಬಿಜೆಪಿ ಅಧಿಕಾರದ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿದ್ದ ಕಾಂಗ್ರೆಸ್, ಮಮತಾ ಅವರಿಗೆ ಬೆಂಬಲ ನೀಡಿತ್ತು. 'ನಾನು ಮಮತಾ ದೀದಿ ಅವರೊಂದಿದೆ ಮಾತನಾಡಿದ್ದೇನೆ. ನಿಮ್ಮೊಂದಿಗೆ ಹೆಗಲಿಗೆ ಹೆಗಲಾಗಿರುತ್ತೇವೆ ಎಂದು ಅವರಿಗೆ ತಿಳಿಸಿದ್ದೇನೆ. ಬಂಗಾಳದಲ್ಲಿ ನಡೆಯುತ್ತಿರುವುದು ಮೋದಿ ಮತ್ತು ಬಿಜೆಪಿ ಸರ್ಕಾರ ಭಾರತದ ಸಂಸ್ಥೆಗಳ ಮೇಲೆ ನಡೆಸುತ್ತಿರುವ ದಾಳಿಯ ಉದಾಹರಣೆ. ಎಲ್ಲ ವಿರೋಧಪಕ್ಷಗಳೂ ಒಂದಾಗಿ ಫ್ಯಾಸಿಸ್ಟ್ ಶಕ್ತಿಗಳನ್ನು ಸೋಲಿಸುತ್ತವೆ' ಎಂದು ರಾಹುಲ್ ಹೇಳಿದ್ದರು.

ರಾಬರ್ಟ್ ವಾದ್ರಾ ವಿಚಾರಣೆ
ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿರುವ ಪ್ರಿಯಾಂಕಾ ಗಾಂಧಿ ಪತಿ ರಾಬರ್ಟ್ ವಾದ್ರಾ ಜಾರಿ ನಿರ್ದೇಶನಾಲಯದ ಮುಂದೆ ಬುಧವಾರ ವಿಚಾರಣೆಗೆ ಹಾಜರಾಗಿದ್ದರು. ಎಸ್‌ಪಿಜಿ ಭದ್ರತೆಯೊಂದಿಗೆ ಬಂದಿದ್ದ ರಾಬರ್ಟ್ ವಾದ್ರಾ ಅವರ ಜತೆ ಪ್ರಿಯಾಂಕಾ ಗಾಂಧಿ ಕೂಡ ಇದ್ದರು. ವಾದ್ರಾ ಅವರು ಕಚೇರಿಗೆ ತೆರಳಿದ ಬಳಿಕ ಪ್ರಿಯಾಂಕಾ ಭದ್ರತಾ ವಾಹನಗಳೊಂದಿಗೆ ತೆರಳಿದ್ದರು. ಸುಮಾರು 5 ಗಂಟೆಗಳ ಕಾಲ ವಾದ್ರಾ ಅವರನ್ನು ವಿಚಾರಣೆಗೆ ಒಳಪಡಿಸಿತ್ತು. ಗುರುವಾರವೂ ಅವರ ವಿಚಾರಣೆ ಮುಂದುವರಿಯಲಿದೆ.

ವಾದ್ರಾ ವಿರುದ್ಧ ಆರೋಪಗಳೇನು?
ಗುರುಗ್ರಾಮದಲ್ಲಿ ಡಿಎಲ್‌ಎಫ್ ಮತ್ತು ಓಂಕಾರೇಶ್ವರ ಪ್ರಾಪರ್ಟೀಸ್ ಮೂಲಕ ಗುರುಗ್ರಾಮದಲ್ಲಿ ಅಕ್ರಮ ಭೂ ಖರೀದಿ ಮತ್ತು ವಾದ್ರಾ ಅವರ ಕಂಪೆನಿಯಾದ ಸ್ಕೈಲೈಟ್ ಹಾಸ್ಪಿಟಾಲಿಟಿ ಮೂಲಕ ಅಕ್ರಮ ಹಣ ವರ್ಗಾವಣೆ ಮಾಡಿದ್ದು ಹಾಗೂ ವಿದೇಶಗಳಲ್ಲಿ ಬೇನಾಮಿ ಆಸ್ತಿ ಹೊಂದಿರುವ ಪ್ರಕರಣಗಳು ವಾದ್ರಾ ಮೇಲಿದ್ದು, ಅವುಗಳ ವಿಚಾರಣೆ ನಡೆಸಲಾಗುತ್ತಿದೆ.
ಲಂಡನ್ ಮತ್ತು ಇತರೆಡೆ ಅಕ್ರಮ ಆಸ್ತಿ ಹೊಂದಿದ್ದಾರೆ ಎಂಬ ಆರೋಪ ವಾದ್ರಾ ಮೇಲಿದೆ. 2005-2010 ರ ಅವಧಿಯಲ್ಲಿ ಸುಮಾರು ಐದಕ್ಕೂ ಹೆಚ್ಚು ಮನೆಗಳನ್ನು ವಾದ್ರಾ ಖರೀದಿಸಿದ್ದು, ಅವುಗಳಲ್ಲಿ ಎರಡು ಐಷಾರಾಮಿ ವಿಲ್ಲಾ ಬೆಲೆಯೇ 83 ಕೋಟಿ ರೂ. ಇದೆ ಎನ್ನಲಾಗಿದೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications