ಮೋದಿ ಪ್ರಮಾಣವಚನ ಸಮಾರಂಭಕ್ಕೆ ಹಾಜರಾಗಲಿರುವ ಮಮತಾ

Recommended Video

      ಮೋದಿ ಪ್ರಧಾನಿಯಾಗೋದನ್ನ ನೋಡಲು ಮಮತಾ ಹೋಗ್ತಾರಾ..? | Oneindia kannada

      ಕೋಲ್ಕತಾ, ಮೇ 28: ಗುರುವಾರ ನಡೆಯಲಿರುವ ಪ್ರಧಾನಿ ನರೇಂದ್ರ ಮೋದಿ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಜರಾಗಲಿದ್ದಾರೆ.

      ಲೋಕಸಭೆ ಚುನಾವಣೆಯಲ್ಲಿ ಭರ್ಜರಿ ಬಹುಮತದೊಂದಿಗೆ ಮತ್ತೆ ಅಧಿಕಾರಕ್ಕೆ ಬಂದಿರುವ ಎನ್‌ಡಿಎ ಮೈತ್ರಿಕೂಟದ ನರೇಂದ್ರ ಮೋದಿ ಅವರು ಎರಡನೆಯ ಅವಧಿಗೆ ಮೇ 30ರಂದು ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಸಮಾರಂಭಕ್ಕೆ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳನ್ನು ಆಹ್ವಾನಿಸಲಾಗಿದೆ.

      ಮೋದಿ ಮತ್ತು ಬಿಜೆಪಿ ವಿರುದ್ಧ ವ್ಯಾಪಕ ವಾಗ್ದಾಳಿ ನಡೆಸುವ ಜತೆಯಲ್ಲಿ ಆಕ್ರೋಶ ಹೊರಹಾಕುತ್ತಿದ್ದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಕೂಡ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಳ್ಳಲು ನಿರ್ಧರಿಸಿದ್ದಾರೆ.

      mamata banerjee said she will attend oath taking ceremony of PM narendra Modi

      'ನಾನು ಇತರೆ ರಾಜ್ಯಗಳ ಮುಖ್ಯಮಂತ್ರಿಗಳ ಜತೆಗೆ ಕೂಡ ಮಾತನಾಡಿದ್ದೇನೆ. ಅದು ಪ್ರಮಾಣ ವಚನ ಸ್ವೀಕಾರ ಸಮಾರಂಭವಾಗಿರುವುದರಿಂದ ನಾವು ಅದರಲ್ಲಿ ಪಾಲ್ಗೊಳ್ಳುವ ಬಗ್ಗೆ ನಿರ್ಧರಿಸಿದ್ದೇವೆ. ಖಂಡಿತವಾಗಿಯೂ ನಾನು ಅಲ್ಲಿಗೆ ಹೋಗುತ್ತೇನೆ' ಎಂದು ಅವರು ತಿಳಿಸಿದರು.

      ಕಳೆದ ಹಲವು ತಿಂಗಳಿನಿಂದ ಕೇಂದ್ರ ಸರ್ಕಾರದೊಂದಿಗೆ ತೀವ್ರ ಸಂಘರ್ಷ ನಡೆಸಿದ್ದ ಮಮತಾ ಬ್ಯಾನರ್ಜಿ ಅವರು, ಚುನಾವಣೆ ಸಂದರ್ಭದಲ್ಲಿ ಬಿಜೆಪಿ ವಿರುದ್ಧ ತೀವ್ರ ಹರಿಹಾಯ್ದಿದ್ದರು. ಆದರೆ, ಚುನಾವಣೆಯಲ್ಲಿ ಅವರು ನಿರೀಕ್ಷಿಸಿರದ ರೀತಿಯಲ್ಲಿ ಸೋಲಿನ ಆಘಾತ ಎದುರಿಸಿದ್ದರು. ಅದರ ಬೆನ್ನಲ್ಲೇ ಟಿಎಂಸಿಯ ನಾಯಕರು, ಕೌನ್ಸಿಲರ್‌ಗಳು ಬಿಜೆಪಿ ಸೇರ್ಪಡೆಯಾಗಿದ್ದರು. ಈ ಎಲ್ಲ ಬೆಳವಣಿಗೆಗಳಿಂದ ಕುದಿಯುತ್ತಿರುವ ಮಮತಾ ಅವರು ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸುವುದಿಲ್ಲ ಎನ್ನಲಾಗಿತ್ತು.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+