• search
  • Live TV
ಕೋಲ್ಕತಾ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ರಾಷ್ಟ್ರೀಯ ನಗದೀಕರಣ ಯೋಜನೆಯನ್ನು ಖಂಡಿಸಿದ ಮಮತಾ ಬ್ಯಾನರ್ಜಿ

|
Google Oneindia Kannada News

ಕೋಲ್ಕತ್ತಾ, ಆಗಸ್ಟ್ 25: ಆಸ್ತಿಗಳು ದೇಶಕ್ಕೆ ಸೇರಿದ್ದು, ಮೋದಿ ಅಥವಾ ಬಿಜೆಪಿಯದ್ದಲ್ಲ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುಡುಗಿದ್ದಾರೆ. ಕೇಂದ್ರ ಸರ್ಕಾರದ ರಾಷ್ಟ್ರೀಯ ನಗದೀಕರಣ ಯೋಜನೆಯನ್ನು ಖಂಡಿಸಿದ ಅವರು, ಇದು ದೇಶಕ್ಕೆ ಸೇರಿದ ಆಸ್ತಿಗಳನ್ನು ಮಾರಾಟ ಮಾಡುವ ಕುತಂತ್ರವಾಗಿದೆ ಎಂದು ಆರೋಪಿಸಿದ್ದಾರೆ.

ಈ ನಿರ್ಧಾರವನ್ನು ನಾವು ಖಂಡಿಸುತ್ತೇವೆ, ಈ ಆಸ್ತಿಗಳು ದೇಶಕ್ಕೆ ಸೇರಿದ್ದಾಗಿವೆ. ಇದು ಪ್ರಧಾನಿ ನರೇಂದ್ರ ಮೋದಿ ಅಥವಾ ಬಿಜೆಪಿಗೆ ಸೇರಿದ್ದಲ್ಲ, ಕೇಂದ್ರ ಸರ್ಕಾರ ತಮ್ಮ ಇಚ್ಛೆಯಂತೆ ದೇಶದ ಆಸ್ತಿಯನ್ನು ಮಾರಾಟ ಮಾಡಲು ಸಾಧ್ಯವಿಲ್ಲ ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಈ ಜನವಿರೋಧಿ ನೀತಿಯ ವಿರುದ್ಧ ಇಡೀ ದೇಶವೇ ಒಗ್ಗಟ್ಟಾಗಿ ಹೋರಾಡಬೇಕು ಎಂದರು. ಬಿಜೆಪಿಗೆ ನಾಚಿಕೆಯಾಗಬೇಕು, ರಾಷ್ಟ್ರದ ಆಸ್ತಿಯನ್ನು ಮಾರಾಟ ಮಾಡುವ ಹಕ್ಕನ್ನು ಅವರಿಗೆ ಯಾರೂ ನೀಡಿಲ್ಲ, ಇಡೀ ದೇಶವೇ ಇದರ ವಿರುದ್ಧ ಹೋರಾಡಲಿದೆ.

ಎನ್‌ಎಂಪಿಯನ್ನು ಆಘಾತಕಾರಿ ಹಾಗೂ ದುರದೃಷ್ಟಕರ ನೀತಿ ಎಂದು ಹೇಳಿರುವ ತೃಣಮೂಲ ಕಾಂಗ್ರೆಸ್ ನಾಯಕಿ ಮಮತಾ, ದೇಶದ ಆಸ್ತಿಗಳನ್ನು ಮಾರಾಟ ಮಾಡುವ ಮೂಲಕ ಸಿಗುವ ಹಣವನ್ನು ಚುನಾವಣೆಗಳಲ್ಲಿ ಬಿಜೆಪಿಯು ವಿರೋಧ ಪಕ್ಷಗಳ ವಿರುದ್ಧ ಬಳಕೆ ಮಾಡಲಿದೆ ಎಂದಿದ್ದಾರೆ.

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸೋಮವಾರ 'ರಾಷ್ಟ್ರೀಯ ನಗದೀಕರಣ ಯೋಜನೆ'(ಎನ್‌ಎಂಪಿ) ಘೋಷಿಸಿದ್ದಾರೆ.

6 ಲಕ್ಷ ಕೋಟಿ ರೂಪಾಯಿ ಮೌಲ್ಯದ ಮೂಲಸೌಕರ್ಯಗಳ ಪಟ್ಟಿಯನ್ನು ಕೇಂದ್ರ ಸರ್ಕಾರ ಅಂತಿಮಗೊಳಿಸಿದ್ದು. ಈ ಪಟ್ಟಿಯಲ್ಲಿ ಪ್ರಮುಖವಾಗಿ ರಸ್ತೆಗಳು, ರೈಲ್ವೆ ಹಾಗೂ ವಿದ್ಯುತ್ ಗ್ರಿಡ್‌ಗಳೂ ಸೇರಿವೆ. ಆದರೆ ಭೂಮಿ ಮಾರಾಟ ಈ ಪಟ್ಟಿಯಲ್ಲಿ ಸೇರಿಲ್ಲ ಎಂದು ನಿರ್ಮಲಾ ಸೀತಾರಾಮನ್ ಅವರು ಹೇಳಿದ್ದಾರೆ.

ಕೇಂದ್ರ ಸರ್ಕಾರವು ರಾಷ್ಟ್ರೀಯ ನಗದೀಕರಣ ಯೋಜನೆ ಅಡಿ 2022ರ ಹಣಕಾಸು ವರ್ಷದಿಂದ 2025 ರ ಹಣಕಾಸು ವರ್ಷದವರೆ ಮುಂದಿನ ನಾಲ್ಕು ವರ್ಷಗಳಲ್ಲಿ ಮೂಲಸೌಕರ್ಯ ಆಸ್ತಿಗಳನ್ನು ಮಾರಾಟ ಮಾಡಲಿದೆ ಎಂದು ನಿರ್ಮಲಾ ಸೀತಾರಾಮನ್ ಅವರು ತಿಳಿಸಿದ್ದಾರೆ.

ಎನ್ಎಂಪಿ ಸರ್ಕಾರದ ಬ್ರೌನ್ಫೀಲ್ಡ್ ಮೂಲಸೌಕರ್ಯ ಸ್ವತ್ತುಗಳ ನಾಲ್ಕು ವರ್ಷಗಳ ಪೈಪ್‌ಲೈನ್ ಅನ್ನು ಒಳಗೊಂಡಿದೆ. ಕೇಂದ್ರ ಬಜೆಟ್ 2021-22 ರಲ್ಲಿ, ಸರ್ಕಾರವು ಮೂಲಸೌಕರ್ಯಕ್ಕಾಗಿ ನವೀನ ಮತ್ತು ಪರ್ಯಾಯ ಹಣಕಾಸು ಸಂಗ್ರಹಿಸುವ ಸಾಧನವಾಗಿ ಆಸ್ತಿ ಗಳಿಕೆಯ ಮೇಲೆ ಹೆಚ್ಚಿನ ಒತ್ತು ನೀಡಿತು ಮತ್ತು ಹಲವಾರು ಪ್ರಮುಖ ಘೋಷಣೆಗಳನ್ನು ಒಳಗೊಂಡಿದೆ.

"ರಾಷ್ಟ್ರೀಯ ನಗದೀಕರಣ ಪೈಪ್‌ಲೈನ್ ಅನ್ನು ಯಶಸ್ವಿಯಾಗಿಸಲು ನಾವು ಸಂಪೂರ್ಣವಾಗಿ ಬದ್ಧರಾಗಿದ್ದೇವೆ. ಉತ್ತಮ ಕಾರ್ಯಾಚರಣೆ ಮತ್ತು ನಿರ್ವಹಣೆಗಾಗಿ ಖಾಸಗಿ ವಲಯಕ್ಕೆ ಪ್ರವೇಶಿಸುವುದು ಬಹಳ ಮುಖ್ಯ ಎಂದು ನಾವು ಭಾವಿಸುತ್ತೇವೆ. ಮತ್ತು ಅದಕ್ಕಾಗಿ ನಾವು ಕಷ್ಟಪಟ್ಟು ಕೆಲಸ ಮಾಡಲು ಬದ್ಧರಾಗಿದ್ದೇವೆ. " ಎಂದು ಇದೇ ಸಂದರ್ಭದಲ್ಲಿ ನೀತಿ ಆಯೋಗದ ಸಿಇಒ ಅಮಿತಾಭ್ ಕಾಂತ್ ಹೇಳಿದ್ದಾರೆ.

English summary
West Bengal Chief Minister Mamata Banerjee on Wednesday slammed the Centre over its National Monetisation Pipeline (NMP) policy, claiming that it is a ploy to sell assets that belong to the country and not to Prime Minister Narendra Modi or the BJP.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X