ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೃಷಿ ಕಾಯ್ದೆ ಹಿಂಪಡೆಯದಿದ್ದರೆ ದೇಶಾದ್ಯಂತ ಪ್ರತಿಭಟನೆಯ ಎಚ್ಚರಿಕೆ ನೀಡಿದ ಮಮತಾ

|
Google Oneindia Kannada News

ಕೋಲ್ಕತ್ತಾ, ಡಿಸೆಂಬರ್ 03:ಕೇಂದ್ರ ಸರ್ಕಾರದ ಹೊಸ ಕೃಷಿ ಕಾಯ್ದೆಗಳನ್ನು ಹಿಂಪಡೆಯದಿದ್ದರೆ ದೇಶಾದ್ಯಂತ ಪ್ರತಿಭಟನೆ ಮಾಡುವುದಾಗಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಎಚ್ಚರಿಕೆ ನೀಡಿದ್ದಾರೆ.

ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರು ಸರಣಿ ಟ್ವೀಟ್ ಗಳ ಮೂಲಕ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ರೈತರ ಮತ್ತು ಅವರ ಜೀವನ ಹಾಗೂ ಜೀವನೋಪಾಯದ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ದೀದಿ, ಕೇಂದ್ರ ಸರ್ಕಾರ ರೈತ ವಿರೋಧಿ ಮಸೂದೆಗಳನ್ನು ಹಿಂತೆಗೆದುಕೊಳ್ಳಬೇಕು. ಅವರು ತಕ್ಷಣ ಹಾಗೆ ಮಾಡದಿದ್ದರೆ, ನಾವು ರಾಜ್ಯ ಮತ್ತು ದೇಶದಾದ್ಯಂತ ಆಂದೋಲನ ನಡೆಸುತ್ತೇವೆ.

ರೈತರಿಗಾಗಿ 'ಪದ್ಮವಿಭೂಷಣ ಗೌರವ' ಹಿಂತಿರುಗಿಸಿದ ಪ್ರಕಾಶ್ ಸಿಂಗ್ ಬಾದಲ್ ರೈತರಿಗಾಗಿ 'ಪದ್ಮವಿಭೂಷಣ ಗೌರವ' ಹಿಂತಿರುಗಿಸಿದ ಪ್ರಕಾಶ್ ಸಿಂಗ್ ಬಾದಲ್

ಮೊದಲಿನಿಂದಲೂ ನಾವು ಈ ರೈತ ವಿರೋಧಿ ಮಸೂದೆಗಳನ್ನು ಬಲವಾಗಿ ವಿರೋಧಿಸುತ್ತಿದ್ದೇವೆ ಎಂದು ಟ್ವೀಟ್ ಮಾಡಿದ್ದಾರೆ.

ಕೇಂದ್ರ ಸರ್ಕಾರ ಇಂದು ದೆಹಲಿಯಲ್ಲಿ ಪ್ರತಿಭಟನಾನಿರತ ರೈತ ಪ್ರತಿನಿಧಿಗಳೊಂದಿಗೆ ಮತ್ತೊಂದು ಸುತ್ತಿನ ಮಾತುಕತೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಮಮತಾ ಬ್ಯಾನರ್ಜಿ ಈ ಟ್ವೀಟ್ ಮಾಡಿದ್ದಾರೆ.

ಡಿಸೆಂಬರ್ 4 ರಂದು ಸಭೆ

ಡಿಸೆಂಬರ್ 4 ರಂದು ಸಭೆ

"ನಾವು ಡಿಸೆಂಬರ್ 4, ಶುಕ್ರವಾರದಂದು ಅಖಿಲ ಭಾರತ ತೃಣಮೂಲ ಕಾಂಗ್ರೆಸ್ ಸಭೆ ಕರೆದಿದ್ದೇವೆ. ಅಗತ್ಯ ಸರಕುಗಳ ಕಾಯ್ದೆ ಸಾಮಾನ್ಯ ಜನರ ಮೇಲೆ ಹೇಗೆ ಪರಿಣಾಮ ಬೀರುತ್ತಿದೆ ಮತ್ತು ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಲು ಹೇಗೆ ಕಾರಣವಾಗುತ್ತದೆ ಎಂದು ಚರ್ಚಿಸುತ್ತೇವೆ. ಕೇಂದ್ರ ಸರ್ಕಾರ ಈ ಜನ ವಿರೋಧಿ ಕಾನೂನನ್ನು ಹಿಂತೆಗೆದುಕೊಳ್ಳಬೇಕು" ಎಂದು ದೀದಿ ಮತ್ತೊಂದು ಟ್ವೀಟ್ ನಲ್ಲಿ ಒತ್ತಾಯಿಸಿದ್ದಾರೆ.

ಪದ್ಮವಿಭೂಷಣ ಪ್ರಶಸ್ತಿ ಹಿಂದಿರುಗಿಸಿದ ಪ್ರಕಾಶ ಸಿಂಗ್

ಪದ್ಮವಿಭೂಷಣ ಪ್ರಶಸ್ತಿ ಹಿಂದಿರುಗಿಸಿದ ಪ್ರಕಾಶ ಸಿಂಗ್

ಶಿರೋಮಣಿ ಅಕಾಲಿದಳ ಮುಖ್ಯಸ್ಥ ಮತ್ತು ಪಂಜಾಬ್ ಮಾಜಿ ಮುಖ್ಯಮಂತ್ರಿ ಪ್ರಕಾಶ ಸಿಂಗ್ ಬಾದಲ್ ಅವರು ತಮ್ಮ ಪದ್ಮವಿಭೂಷಣ ಪ್ರಶಸ್ತಿಯನ್ನು ಹಿಂದಿರುಗಿಸುವ ಮೂಲಕ ಸರ್ಕಾರದ ಕೃಷಿ ಕಾನೂನುಗಳಿಗೆ ವಿರೋಧ ವ್ಯಕ್ತಪಡಿಸಿದ್ದಾರೆ.

ದೆಹಲಿಯಲ್ಲಿ ಅಮರಿಂದರ್ ಸಿಂಗ್, ಅಮಿತ್ ಶಾ ಭೇಟಿ

ದೆಹಲಿಯಲ್ಲಿ ಅಮರಿಂದರ್ ಸಿಂಗ್, ಅಮಿತ್ ಶಾ ಭೇಟಿ

ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಕೃಷಿ ಸಂಬಂಧಿತ ಕಾಯ್ದೆ ವಿರುದ್ಧ ರೈತರ ಹೋರಾಟದ ನಡುವೆ ಪಂಜಾಬ್ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಜೊತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಚರ್ಚೆ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ. ಡಿಸೆಂಬರ್.03ರ ಗುರುವಾರ ನಡೆಯಲಿರುವ ಸಭೆಯಲ್ಲೇ ಕೇಂದ್ರ ಸರ್ಕಾರವು ಅಂತಿಮ ತೀರ್ಮಾನ ತೆಗೆದುಕೊಳ್ಳಬೇಕು ಎಂದು ರೈತ ಮುಖಂಡರು ಈಗಾಗಲೇ ಷರತ್ತು ವಿಧಿಸಿದ್ದಾರೆ. ನವೆಂಬರ್.26ರಿಂದ ರೈತರ ಪ್ರತಿಭಟನೆ ಆರಂಭಗೊಂಡಿದ್ದು, ಇದುವರೆಗೂ ನಡೆಸಿದ ಮೂರು ಸಂಧಾನ ಸಭೆಗಳು ವಿಫಲವಾಗಿವೆ.

ಏಳನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ

ಏಳನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ

ಕೇಂದ್ರ ಸರ್ಕಾರವು ಜಾರಿಗೊಳಿಸಿರುವ ಕೃಷಿ ಕಾಯ್ದೆಯನ್ನು ಹಿಂಪಡೆಯಬೇಕೆಂದು ರೈತರು ನಡೆಸುತ್ತಿರುವ ಹೋರಾಟವು 7ನೇ ದಿನಕ್ಕೆ ಕಾಲಿಟ್ಟಿದೆ. ಕೊರೊನಾ ಸೋಂಕಿನ ಕ ಪಿಡುಗಿನ ನಡುವೆಯೂ ಸಪ್ಟೆಂಬರ್ ನಲ್ಲಿ ನಡೆದ ಸಂಸತ್ ಅಧಿವೇಶನದಲ್ಲಿ ವಿವಾದಾತ್ಮಕ ಮಸೂದೆಯನ್ನು ಅಂಗೀಕರಿಸಲಾಗಿತ್ತು. ಕೇಂದ್ರ ಸರ್ಕಾರದ ಕ್ರಮವನ್ನು ಖಂಡಿಸಿ ನವೆಂಬರ್.26ರಂದು ರೈತರು ದಿಲ್ಲಿ ಚಲೋ ಪ್ರತಿಭಟನೆ ಕೈಗೊಂಡರು. ಕಳೆದ ಶುಕ್ರವಾರ ದೆಹಲಿ ಗಡಿ ಪ್ರದೇಶವನ್ನು ಪ್ರವೇಶಿಸಿದ ರೈತರು ಕೇಂದ್ರ ಸರ್ಕಾರಕ್ಕೆ ತಮ್ಮ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿದರು.

English summary
West Bengal Chief Minister Mamata Banerjee on Thursday threatened to launch a country-wide agitation if the "anti-farmer" new farm laws were not withdrawn.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X