ಪಶ್ಚಿಮ ಬಂಗಾಳಕ್ಕೆ ಮೋದಿ ಭೇಟಿ ದಿನವೇ, ಮಮತಾ ಬ್ಯಾನರ್ಜಿಯಿಂದ ಬೃಹತ್ ಪ್ರತಿಭಟನೆ
ಕೋಲ್ಕತ್ತಾ, ಮಾರ್ಚ್ 07: ಪಶ್ಚಿಮ ಬಂಗಾಳ ವಿಧಾನಸಭೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಇಂದು ಆಗಮಿಸುತ್ತಿದ್ದು, ಇದೇ ದಿನವೇ ಸಿಎಂ ಮಮತಾ ಬ್ಯಾನರ್ಜಿ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದ್ದಾರೆ.
ಎಲ್‌ಪಿಜಿ ಬೆಲೆ ಏರಿಕೆ ವಿರುದ್ಧ ಸಿಲಿಗುರಿಯಲ್ಲಿ ಪಾದಯಾತ್ರೆ ನಡೆಸಿ, ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಲಿದ್ದಾರೆ. ಈ ಪ್ರತಿಭಟನೆಯಲ್ಲಿ ಮಹಿಳೆಯರೇ ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗಲಿದ್ದಾರೆ.
ಈ ಮೊದಲು ಮಮತಾ ಬ್ಯಾನರ್ಜಿ ಬೈಕ್ ಜಾಥಾ ನಡೆಸಿ, ತೈಲ ಬೆಲೆ ಏರಿಕೆ ವಿರುದ್ಧ ಹೋರಾಟ ನಡೆಸಿದ್ದರು. ಈ ಬಾರಿ ಎಲ್‌ಪಿಜಿ ಬೆಲೆ ಏರಿಕೆ ವಿರೋಧಿಸಿ ಪಾದಯಾತ್ರೆ ನಡೆಸುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡುತ್ತಿರುವ ದಿನವೇ ಪ್ರತಿಭಟನೆ ಕೈಗೊಳ್ಳಲು ಮುಂದಾಗಿದ್ದಾರೆ.

ಮಮತಾ ಬ್ಯಾನರ್ಜಿ ಎಲ್‌ಪಿಜಿ ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ ಹಮ್ಮಿಕೊಂಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಕೋಲ್ಕತ್ತಾದಲ್ಲಿ ನಡೆಸುತ್ತಿರುವ ಮೊದಲ ಪ್ರಚಾರಸಭೆ ಇದಾಗಿದೆ. ಬ್ರಿಗೇಡ್ ಪರೇಡ್ ಗ್ರೌಂಡ್‌ನಲ್ಲಿ ಮೋದಿ ಪ್ರಚಾರ ಸಭೆ ನಡೆಸಲಿದ್ದಾರೆ.
ತೃಣಮೂಲ ಕಾಂಗ್ರೆಸ್ ಮಾಜಿ ರಾಜ್ಯಸಭಾ ಸದಸ್ಯ ನಟ ಮಿಥುನ್ ಚಕ್ರವರ್ತಿ ಅವರು ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ಇಂದು ಕೋಲ್ಕತ್ತಾದ ಬ್ರಿಗೇಡ್ ಪೆರೇಡ್ ಮೈದಾನದಲ್ಲಿ ವೇದಿಕೆ ಹಂಚಿಕೊಳ್ಳುವ ಸಾಧ್ಯತೆ ಇದೆ.
ಫೆಬ್ರವರಿ 16 ರಂದು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರ ಮುಂಬೈ ಬಂಗಲೆಯಲ್ಲಿ ಅವರನ್ನು ಭೇಟಿಯಾದ ಕೆಲವು ದಿನಗಳ ನಂತರ ಈ ಬೆಳವಣಿಗೆ ನಡೆದಿದೆ.ಆದಾಗ್ಯೂ, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆಡಳಿತದ ವಿರುದ್ಧ ಪಕ್ಷವು ನಿಯೋಜಿಸಲಿರುವ ಹಲವು ಪ್ರಮುಖ ಮುಖಗಳಲ್ಲಿ ಮಿಥುನ್ ಚಕ್ರವರ್ತಿ ಕೂಡ ಒಬ್ಬರು ಎಂದು ಬಿಜೆಪಿಯ ಮೂಲಗಳು ತಿಳಿಸಿವೆ.












Click it and Unblock the Notifications