• search
 • Live TV
ಕೋಲ್ಕತಾ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

3ನೇ ಬಾರಿಗೆ ಮಮತಾ ಬ್ಯಾನರ್ಜಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ: ಮೇ 5 ರಂದು ಪ್ರಮಾಣವಚನ

|

ಕೋಲ್ಕತ್ತಾ, ಮೇ 03: ಮಮತಾ ಬ್ಯಾನರ್ಜಿ ಮೂರನೇ ಬಾರಿಗೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿಯಾಗಲಿದ್ದು, ಮೇ 5 ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ತೃಣಮೂಲ ಕಾಂಗ್ರೆಸ್ ಮುಂದಿನ ಮುಖ್ಯಮಂತ್ರಿಯಾಗಿ ಮಮತಾ ಬ್ಯಾನರ್ಜಿ ಅವರನ್ನೇ ಆಯ್ಕೆ ಮಾಡಿದ್ದು, ಸತತ ಮೂರನೇ ಬಾರಿಗೆ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ ಎನ್ನುವ ಮಾಹಿತಿ ಲಬ್ಯವಾಗಿದೆ.

ಮಮತಾ ಬ್ಯಾನರ್ಜಿ ಅವರು ನಂದಿ ಗ್ರಾಮದಲ್ಲಿ ಶಿಷ್ಯ ಸುವೇಂದು ಅಧಿಕಾರಿ ವಿರುದ್ಧ ಸೋಲು ಅನುಭವಿಸಿದ್ದರು. ಆದರೆ ಟಿಎಂಸಿಗೆ ಬಹುಮತ ಬಂದಿರುವ ಕಾರಣ ಮತ್ತೆ ಮುಖ್ಯಮಂತ್ರಿ ಹುದ್ದೆಗೇರುವ ಅವಕಾಶ ದೀದಿಗೆ ಕೂಡಿಬಂದಿದೆ.

ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಇಂದು ಸಂಜೆ 7 ಗಂಟೆಗೆ ಪಶ್ಚಿಮ ಬಂಗಾಳದ ರಾಜ್ಯಪಾಲ ಜಗದೀಪ್ ಧನ್‌ಖಡ್ ಅವರನ್ನು ಭೇಟಿ ಮಾಡಲಿದ್ದು, ಸರ್ಕಾರ ರಚನೆಗೆ ಸಂಬಂಧಿಸಿದಂತೆ ಮನವಿ ಮಾಡಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ನಂದಿಗ್ರಾಮದಲ್ಲಿ ಸೋಲೊಪ್ಪಿಕೊಂಡ್ರು, ಬಂಗಾಳ ಗೆದ್ದ ಮಮತಾ
ಆಡಳಿತಾರೂಢ ಟಿಎಂಸಿ ಪಕ್ಷವು ವಿಧಾನಸಭೆ ಚುನಾವಣೆಯಲ್ಲಿ 292 ಸ್ಥಾನಗಳ ಪೈಕಿ 212 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ, ಈ ಮೂಲಕ ಮಮತಾ ಬ್ಯಾನರ್ಜಿ ಸತತ ಮೂರನೇ ಅವಧಿಗೆ ಅಧಿಕಾರ ಉಳಿಸಿಕೊಂಡಿದ್ದಾರೆ.

   ಸದ್ಯದಲ್ಲೇ ರಾಷ್ಟ್ರೀಯ ಪಕ್ಷಗಳ ವಿರುದ್ಧ JDS ಸೆಟೆದು ನಿಲ್ಲುತ್ತೆ ಅಂದ್ರು ಎಚ್ ಡಿ ಕುಮಾರಸ್ವಾಮಿ

   ಆದರೆ ತೀವ್ರ ಜಿದ್ದಾಜಿದ್ದಿಯ ನಂದಿಗ್ರಾಮದಲ್ಲಿ ಸುವೇಂದು ಅಧಿಕಾರಿ ವಿರುದ್ಧ ಸೋಲು ಅನುಭವಿಸಿದ್ದಾರೆ.
   77 ಕ್ಷೇತ್ರಗಳಲ್ಲಿ ಗೆಲುವು ದಾಖಲಿಸಿರುವ ಬಿಜೆಪಿಯು ವಿರೋಧ ಪಕ್ಷವಾಗಿ ರೂಪುಗೊಂಡಿದೆ.

   English summary
   TMC elects Mamata Banerjee As Its legislative party leader. To take oath for the third time as CM of West Bengal on 5th May.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X