ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

3ನೇ ಬಾರಿ ಸಿಎಂ ಆಗಿ ಮಮತಾ ಬ್ಯಾನರ್ಜಿ ಇಂದು ಪ್ರಮಾಣ ವಚನ

|
Google Oneindia Kannada News

ಕೋಲ್ಕತ್ತ, ಮೇ 05; ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟವಾಗಿದೆ. ಟಿಎಂಸಿ 210 ಕ್ಷೇತ್ರಗಳಲ್ಲಿ ಜಯಗಳಿಸುವ ಮೂಲಕ ರಾಜ್ಯದಲ್ಲಿ ಸರ್ಕಾರ ರಚನೆ ಮಾಡಲಿದೆ. ಮಮತಾ ಬ್ಯಾನರ್ಜಿ 3ನೇ ಬಾರಿಗೆ ರಾಜ್ಯದ ಮುಖ್ಯಮಂತ್ರಿಯಾಗಲಿದ್ದಾರೆ.

ಮಂಗಳವಾರ ಮಮತಾ ಬ್ಯಾನರ್ಜಿ ರಾಜ್ಯಪಾಲ ಜಗದೀಪ್ ಧನ್‌ಕರ್ ಭೇಟಿ ಮಾಡಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಪ್ರಮಾಣ ವಚನ ಸಮಾರಂಭದ ಕುರಿತು ಮಾತುಕತೆ ನಡೆಸಿದರು. ರಾಜಭವನದಲ್ಲಿ ಬುಧವಾರ ಬೆಳಗ್ಗೆ 10.45ಕ್ಕೆ ಪ್ರಮಾಣ ವಚನ ಸಮಾರಂಭ ನಡೆಯಲಿದೆ.

ನಂದಿಗ್ರಾಮ; ಮರು ಮತ ಎಣಿಕೆ ಬೇಡಿಕೆ ತಳ್ಳಿ ಹಾಕಿದ ಆಯೋಗ ನಂದಿಗ್ರಾಮ; ಮರು ಮತ ಎಣಿಕೆ ಬೇಡಿಕೆ ತಳ್ಳಿ ಹಾಕಿದ ಆಯೋಗ

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ ಸೋತಿದ್ದಾರೆ. ಆದರೆ ಪಕ್ಷ ಬಹುಮತ ಪಡೆದ ಕಾರಣ ಅವರು 3ನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನವನ್ನು ಸ್ವೀಕರಿಸಲಿದ್ದಾರೆ. ಮುಖ್ಯಮಂತ್ರಿಯಾದ ಆರು ತಿಂಗಳ ಒಳಗೆ ಅವರು ವಿಧಾನಸಭೆ ಅಥವ ಪರಿಷತ್ ಸದಸ್ಯರಾಗಿ ಆಯ್ಕೆಯಾಗಬೇಕಿದೆ.

ಪಶ್ಚಿಮ ಬಂಗಾಳ: ಕಣಕ್ಕಿಳಿದ ಸಿನಿ ತಾರೆಯರಲ್ಲಿ ಗೆದ್ದವರೆಷ್ಟು?ಪಶ್ಚಿಮ ಬಂಗಾಳ: ಕಣಕ್ಕಿಳಿದ ಸಿನಿ ತಾರೆಯರಲ್ಲಿ ಗೆದ್ದವರೆಷ್ಟು?

Mamata Banerjee To Take Oath As West Bengal CM 3rd Time

ಕೋವಿಡ್ ಕಾರಣದಿಂದಾಗಿ ಪ್ರಮಾಣ ವಚನ ಸಮಾರಂಭ ಸರಳವಾಗಿ ನಡೆಯಲಿದೆ. ಕೆಲವೇ ಗಣ್ಯರಿಗೆ ಮಾತ್ರವೇ ಸಮಾರಂಭಕ್ಕೆ ಆಹ್ವಾನ ನೀಡಲಾಗಿದೆ. ರಾಜಭವನದ ಹೊರಗೆ ಸಹ ಟಿಎಂಸಿ ಕಾರ್ಯಕರ್ತರು ಜಮಾವಣೆಗೊಳ್ಳದಂತೆ ಸೂಚನೆ ನೀಡಲಾಗಿದೆ.

 ಪಶ್ಚಿಮ ಬಂಗಾಳದಲ್ಲಿ ವಿಜಯ ಪತಾಕೆ; ವೈರಲ್ ಆಯ್ತು ಮಮತಾ ಹಳೇ ಫೋಟೊ ಪಶ್ಚಿಮ ಬಂಗಾಳದಲ್ಲಿ ವಿಜಯ ಪತಾಕೆ; ವೈರಲ್ ಆಯ್ತು ಮಮತಾ ಹಳೇ ಫೋಟೊ

ಪಶ್ಚಿಮ ಬಂಗಾಳ ವಿಧಾನಸಭೆಯಲ್ಲಿ 294 ಸ್ಥಾನಗಳಿವೆ. ಇವುಗಳಲ್ಲಿ 292 ಸ್ಥಾನಗಳಿಗೆ ಮಾತ್ರ ಚುನಾವಣೆ ನಡೆದಿದೆ. ಕೋವಿಡ್ ಕಾರಣದಿಂದಾಗಿ ಅಭ್ಯರ್ಥಿಗಳು ಮೃತಪಟ್ಟ ಕಾರಣ ಎರಡು ಕ್ಷೇತ್ರದ ಚುನಾವಣೆ ಮುಂದೂಡಲಾಗಿದೆ. ಈ ಕ್ಷೇತ್ರದಲ್ಲಿ ಮಮತಾ ಬ್ಯಾನರ್ಜಿ ಚುನಾವಣೆಗೆ ಸ್ಪರ್ಧಿಸುವ ಸಾಧ್ಯತೆ ಇದೆ.

ಟಿಎಂಸಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಶಾಸಕರು ಮಮತಾ ಬ್ಯಾನರ್ಜಿ ಅವರನ್ನು ಶಾಸಕಾಂಗ ಪಕ್ಷದ ನಾಯಕಿಯಾಗಿ ಆಯ್ಕೆ ಮಾಡಿದ್ದಾರೆ. ನಂದಿಗ್ರಾಮ ಕ್ಷೇತ್ರದಲ್ಲಿ ಚುನಾವಣಾ ಕಣಕ್ಕಿಳಿದಿದ್ದ ಮಮತಾ ಬ್ಯಾನರ್ಜಿ ಬಿಜೆಪಿಯ ಸುವೇಂದು ಅಧಿಕಾರಿ ವಿರುದ್ದ ಸೋಲು ಕಂಡಿದ್ದಾರೆ.

English summary
TMC supremo Mamata Banerjee will be sworn-in as West Bengal chief minister for a third term on Wednesday. Function will be held at 10.45 am at Raj Bhawan and due to Covid situation limited audience invited.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X