ಮಮತಾ ಬ್ಯಾನರ್ಜಿ ಉತ್ತಮ ಪ್ರಧಾನಿಯಾಗಬಲ್ಲರು: ಯಶವಂತ್ ಸಿನ್ಹಾ

ಕೋಲ್ಕತ್ತಾ, ಡಿಸೆಂಬರ್ 10: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ನಾಯಕಿ, ಮಮತಾ ಬ್ಯಾನರ್ಜಿ ಅವರಿಗೆ ಉತ್ತಮ ಪ್ರಧಾನಿಯಾಗುವ ಎಲ್ಲ ಲಕ್ಷಣಗಳೂ ಇವೆ ಎಂದು ಬಿಜೆಪಿ ಮಾಜಿ ಮುಖಂಡ ಯಶವಂತ್ ಸಿನ್ಹಾ ಹೇಳಿದರು.

ಕೋಲ್ಕತ್ತಾದಲ್ಲಿ ಭಾನುವಾರ ತೃಣಮೂಲ ಕಾಂಗ್ರೆಸ್ ಆಯೋಜಿಸಿದ್ದ 'ಐಡಿಯಾ ಆಫ್ ಬಾಂಗ್ಲಾ' ಎಂಬ ಟಾಕ್ ಶೋ ವೊಂದರಲ್ಲಿ ಪಾಲ್ಗೊಂಡಿದ್ದ ಅವರು, 'ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ವಿವಿಧ ಸಂಸ್ಥೆಗಳನ್ನು ಹಾಳುಗೆಡವುತ್ತಿದ್ದಾರೆ. ಕೇಂದ್ರ ಮಂತ್ರಿಮಂಡಲವನ್ನೂ ಹಾಳುಗೆಡವುತ್ತಿದ್ದಾರೆ' ಎಂದು ಆರೋಪಿಸಿದರು.

"ಪ್ರಧಾನಿ ಮೋದಿ ಹಲವು ಮಹತ್ವದ ನಿರ್ಧಾರಗಳನ್ನು ಸಂಪುಟದ ಗಮನಕ್ಕೆ ತರದೆ ತೆಗೆದುಕೊಂಡಿದ್ದಾರೆ. ಅದು ರಫೇಲ್ ಡೀಲ್ ಇರಬಹುದು, ಅಪನಗದೀಕರಣವಿರಬಹುದು" ಎಂದು ಅಟಲ್ ಬಿಹಾರಿ ವಾಜಪೇಯಿ ಅವರ ಸರ್ಕಾರದಲ್ಲಿ ಹಣಕಾಸು ಮತ್ತು ವಿದೇಶಾಂಗ ವ್ಯವಹಾರಗಳ ಸಚಿವರಾಗಿದ್ದ ಸಿನ್ಹಾ ದೂರಿದರು.

Mamata Banerjee will be a good prime minister: Yashwant Sinha

"ಅಪನಗದೀಕರಣವೆಂಬುದು ಒಂದು ದುರಂತ" ಎಂದ ಅವರು, ನಂತರ ಟಿಎಂಸಿ ಮುಖಂಡೆ ಮಮತಾ ಬ್ಯಾನರ್ಜಿ ಅವರು ಉತ್ತಮ ಪ್ರಧಾನಿಯಾಗಬಲ್ಲ ಎಲ್ಲಾ ಲಕ್ಷಣಗಳನ್ನೂ ಹೊಂದಿದ್ದಾರೆ ಎಂದರು.

2019 ರ ಲೋಕಸಭಾ ಚುನಾವಣೆಯ ಅವಧಿಯಲ್ಲಿ ಪಶ್ಚಿಮ ಬಂಗಾಳ ಮತ್ತು ಟಿಎಂ ಸಿ ಮಹತ್ವದ ಪಾತ್ರ ವಹಿಸಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+