ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮಮತಾ ಬ್ಯಾನರ್ಜಿ ಇನ್ನು ಚುನಾವಣಾ ಪ್ರಚಾರ ನಡೆಸುವುದಿಲ್ಲ: ಟಿಎಂಸಿ

|
Google Oneindia Kannada News

ಕೋಲ್ಕತಾ, ಏಪ್ರಿಲ್ 19: ಮಮತಾ ಬ್ಯಾನರ್ಜಿ ಪಶ್ಚಿಮ ಬಂಗಾಳದಲ್ಲಿ ಇನ್ನುಮುಂದೆ ಚುನಾವಣಾ ಪ್ರಚಾರ ನಡೆಸುವುದಿಲ್ಲ ಎಂದು ಟಿಎಂಸಿ ಹೇಳಿದೆ.

ಇನ್ನು ಬಂಗಾಳ ರಾಜ್ಯದಲ್ಲಿ ಹೆಚ್ಚುತ್ತಿರುವ ಕೋವಿಡ್-19 ಸೋಂಕು ಪ್ರಕರಣಗಳ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿರುವ ಸಿಎಂ ಮಮತಾ ಬ್ಯಾನರ್ಜಿ, ತನ್ನ ಪಕ್ಷವು ಕೋಲ್ಕತಾದಲ್ಲಿ ಸಣ್ಣ ಸಭೆಗಳನ್ನು ನಡೆಸಲಿದೆ. ಉಳಿದ ಮೂರು ಹಂತಗಳಲ್ಲಿ ಚುನಾವಣೆ ನಡೆಯುವ ಜಿಲ್ಲೆಗಳಲ್ಲಿ ಕಿರು ಭಾಷಣಗಳನ್ನು ಮಾಡುವೆ ಎಂದು ಹೇಳಿದರು.

ಈ ಬಗ್ಗೆ ಟ್ವೀಟ್ ಮಾಡಿರುವ ತೃಣಮೂಲ ಕಾಂಗ್ರೆಸ್ ಸಂಸದ ಡೆರೆಕ್ ಒಬ್ರಿಯಾನ್, 'ಮಮತಾ ಬ್ಯಾನರ್ಜಿ ಇನ್ನು ಮುಂದೆ ಕೋಲ್ಕತಾದಲ್ಲಿ ಚುನಾವಣಾ ಪ್ರಚಾರ ನಡೆಸುವುದಿಲ್ಲ. ರಾಜ್ಯ ರಾಜಧಾನಿಯಲ್ಲಿ ನಡೆಯುವ ಪ್ರಚಾರದ ಕೊನೆಯ ದಿನವಾದ ಎಪ್ರಿಲ್ 26ರಂದು ಸಾಂಕೇತಿಕವಾಗಿ ಸಭೆ ನಡೆಸಲಿದ್ದಾರೆ ಎಂದು ಹೇಳಿದ್ದಾರೆ.

Mamata Banerjee Will Not Campaign In Kolkata Anymore: Derek OBrien

ಕೋವಿಡ್-19 ಸೋಂಕು ಹಿನ್ನಲೆಯಲ್ಲಿ ಎಲ್ಲ ಜಿಲ್ಲೆಗಳಲ್ಲಿ ನಿಗದಿಯಾಗಿರುವ ಪ್ರಚಾರ ಸಮಯವನ್ನು ಸಮಯವನ್ನು ಕಡಿತಗೊಳಿಸಲಾಗಿದ್ದು, ಹೀಗಾಗಿ ಮಮತಾ ಬ್ಯಾನರ್ಜಿ ಅವರ ಪ್ರಚಾರ ಸಮಯವನ್ನು ಕೇವಲ 30 ನಿಮಿಷಕ್ಕೆ ನಿರ್ಬಂಧಿಸಲಾಗಿದೆ ಎಂದು ಟಿಎಂಸಿ ರಾಜ್ಯಸಭಾ ಸಂಸದ ಒಬ್ರಿಯಾನ್ ಟ್ವಿಟರ್ ನಲ್ಲಿ ತಿಳಿಸಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಒಟ್ಟು 8 ಹಂತಗಳಲ್ಲಿ ಚುನಾವಣೆ ನಡೆಯುತ್ತಿದ್ದು, ಈಗಾಗಲೇ ಐದು ಹಂತಗಳು ಪೂರ್ಣಗೊಂಡಿದ್ದು, ಮೇ 2 ರಂದು ಫಲಿತಾಂಶ ಹೊರಬೀಳಲಿದೆ.

English summary
West Bengal Chief Minister Mamata Banerjee will not campaign any further in Kolkata, said All India Trinamool Congress (TMC) leader Derek O’Brien in a tweet on Sunday night.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X