• search
  • Live TV
ಕೋಲ್ಕತಾ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಅಮಿತ್ ಶಾ ಇವಿಯಂ ಒಳಗೆ ಇಣುಕಿ ನೋಡಿದ್ದಾರಾ?: ಮಮತಾ ವ್ಯಂಗ್ಯ

|

ಕೋಲ್ಕತ್ತಾ, ಮಾರ್ಚ್ 28: ಅಮಿತ್ ಶಾ ಅವರು ಇವಿಯಂ ಒಳಗೆ ಇಣುಕಿ ನೋಡಿದ್ದಾರೆಯೇ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವ್ಯಂಗ್ಯವಾಡಿದ್ದಾರೆ.

ಅಮಿತ್ ಶಾ ಅವರು ಪಶ್ಚಿಮ ಬಂಗಾಳದಲ್ಲಿ ನಡೆದ ಮೊದಲ ಹಂತದ ಚುನಾವಣೆಯಲ್ಲಿ 30 ಕ್ಷೇತ್ರಗಳಲ್ಲಿ 26ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದರು.

ಬಂಗಾಳ, ಅಸ್ಸಾಂನಲ್ಲಿ ಶಾಂತಿಯುತ ಮತದಾನ, ಬಿಜೆಪಿ ಗೆಲುವಿನ ಮುನ್ಸೂಚನೆ: ಅಮಿತ್ ಶಾ

ಅದನ್ನು ಪ್ರಶ್ನಿಸಿರುವ ಮಮತಾ ಬ್ಯಾನರ್ಜಿ ಮೊದಲ ಹಂತದಲ್ಲಿ ಮತದಾನ ನಡೆದ 30 ಸ್ಥಾನಗಳಲ್ಲಿ 26 ಸ್ಥಾನಗಳನ್ನು ಗೆಲ್ಲುತ್ತೇವೆ ಎಂದು ಗೃಹ ಸಚಿವರು ಹೇಳಿದ್ದಾರೆ.

ನೀವು ಇವಿಯಂ ಒಳಗೆ ಇಣುಕಿ ನೋಡಿದ್ದೀರಾ, ಎಲ್ಲಾ 30 ಸ್ಥಾನಗಳನ್ನು ಬಿಜೆಪಿ ಗೆಲ್ಲುತ್ತದೆ ಎಂದು ನೀವು ಯಾಕೆ ಹೇಳಲಿಲ್ಲ.

ಉಳಿದ ಸೀಟುಗಳನ್ನು ಕಾಂಗ್ರೆಸ್ ಎಡಪಕ್ಷಗಳು ಗೆಲ್ಲುತ್ತವೆಯೇ ಮೇ 2ರ ವರೆಗೆ ಕಾಯೋಣ, ಆಗ ಟಿಎಂಸಿ ಗೆದ್ದಿರುತ್ತದೆ. ಹೊರಗಿನವರು ಬಂಗಾಳವನ್ನು ಆಳಲು ಸಾಧ್ಯವಿಲ್ಲ ಎಂದು ಹೇಳಿದರು.

ಪಶ್ಚಿಮ ಬಂಗಾಳ ಹಾಗೂ ಅಸ್ಸಾಂನಲ್ಲಿ ಶಾಂತಿಯುತ ಮತದಾನ ನಡೆದಿರುವುದು ಬಿಜೆಪಿ ಗೆಲುವಿನ ಮುನ್ಸೂಚನೆಯಾಗಿದೆ ಎಂದು ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯು ಪಶ್ಚಿಮ ಬಂಗಾಳದಲ್ಲಿ 200ಕ್ಕಿಂತಲೂ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ. ನಮಗೆ ಮತನೀಡಿದ ಪಶ್ಚಿಮ ಬಂಗಾಳ ಹಾಗೂ ಅಸ್ಸಾಂಜನತೆಗೆ ಧನ್ಯವಾದಗಳು ಈ ಬಾರಿ ಚುನಾವಣೆಯಲ್ಲಿ ನಾವೇ ಗೆಲುವು ಸಾಧಿಸುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಹಲವು ವರ್ಷಗಳ ಬಳಿಕ ಪಶ್ಚಿಮ ಬಂಗಾಳದಲ್ಲಿ ಯಾವುದೇ ಹಿಂಸಾಚಾರವಿಲ್ಲದೆ ಮತದಾನ ನಡೆದಿದೆ. ಬಿಜೆಪಿಗೆ ಮತ ನೀಡಿರುವ ಪಶ್ಚಿಮ ಬಂಗಾಳದ ಮಹಿಳೆಯರಿಗೆ ಕೃತಜ್ಞತೆ ಸಲ್ಲಿಸುತ್ತೇನೆ.

ಈ ಬಾರಿ ಪಶ್ಚಿಮ ಬಂಗಾಳ ಹಾಗೂ ಅಸ್ಸಾಂ ಚುನಾವಣೆಯಲ್ಲಿ ಉತ್ಸಾಹವಿತ್ತು, ಚುನಾವಣೆ ಮುಗಿದ ಬಳಿಕ ಅಮಿತ್ ಶಾ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರೊಂದಿಗೆ ಮಾತುಕತೆ ನಡೆಸಿದ್ದರು.

English summary
Deriding Union Home Minister Amit Shah’s assertion that the BJP will win 26 of the 30 seats for which polling was held in the first phase of West Bengal assembly elections, Trinamool Congress supremo Mamata Banerjee said that “the people’s verdict will be evident after votes are counted
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X