ನಂದಿಗ್ರಾಮದಲ್ಲಿ ಮಮತಾ ಬ್ಯಾನರ್ಜಿ ಭರ್ಜರಿ ರೋಡ್ ಶೋ
ಕೋಲ್ಕತ್ತಾ, ಮಾರ್ಚ್ 27: ಪಶ್ಚಿಮ ಬಂಗಾಳ ವಿಧಾನಸಭೆಗೆ ಎರಡನೇ ಹಂತದ ಚುನಾವಣೆ ಹೊಸ್ತಿಲಿನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷದ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಭರ್ಜರಿ ರೋಡ್ ಶೋ ನಡೆಸಿದ್ದಾರೆ.
ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪ್ರಚಾರದ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು. ಈ ಘಟನೆಯ ಬಳಿಕ ಮೊದಲ ಬಾರಿಗೆ ನಂದಿಗ್ರಾಮ್ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ವ್ಹೀಲ್ ಚೇರ್ ನಲ್ಲಿ ಕುಳಿತುಕೊಂಡೇ ದೀದಿ ಪ್ರಚಾರ ನಡೆಸಿದರು.
#WATCH | West Bengal Chief Minister Mamata Banerjee holds a 'padyatra' in Nandigram. pic.twitter.com/eOjiUoVWTm
— ANI (@ANI) March 29, 2021
ಏಪ್ರಿಲ್ 1ರಂದು ನಡೆಯುವ ಎರಡನೇ ಹಂತದ ಚುನಾವಣೆಯಲ್ಲಿ ನಂದಿಗ್ರಾಮ್ ವಿಧಾನಸಭಾ ಕ್ಷೇತ್ರವು ತೀವ್ರ ಕುತೂಹಲ ಕೆರಳಿಸಿದೆ. ಡಿಸೆಂಬರ್ ತಿಂಗಳಿನಲ್ಲಿ ಟಿಎಂಸಿ ತೊರೆದು ಬಿಜೆಪಿಗೆ ಸೇರ್ಪಡೆಯಾದ ಸುವೇಂದು ಅಧಿಕಾರಿಗೆ ಟಿಕೆಟ್ ನೀಡಲಾಗಿದೆ. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸ್ಪರ್ಧಿಸುವ ಕಣದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸುವೇಂದು ಅಧಿಕಾರಿ ಪೈಪೋಟಿಗೆ ಇಳಿದಿದ್ದಾರೆ.
ರೋಡ್ ಶೋನಲ್ಲಿ ಸಾವಿರಾರು ಕಾರ್ಯಕರ್ತರು:
ನಂದಿಗ್ರಾಮ್ ವಿಧಾನಸಭಾ ಕ್ಷೇತ್ರದ ಖುದಿರಮ್ ಮೊದ್ ನಿಂದ ಠಾಕೂರ್ ಚೌಕ್ ವರೆಗೂ ರೋಡ್ ಶೋ ನಡೆಸಲಾಯಿತು. ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಡೆಸಿದ ರೋಡ್ ಶೋನಲ್ಲಿ ಸಾವಿರಾರು ಟಿಎಂಸಿ ಕಾರ್ಯಕರ್ತರು ಮತ್ತು ಸಾರ್ವಜನಿಕರು ಭಾಗಿಯಾಗಿದ್ದರು.
"ದೀದಿಗೆ 50,000 ಮತಗಳಿಂದ ಸೋಲು":
ನಂದಿಗ್ರಾಮ್ ವಿಧಾನಸಭಾ ಕ್ಷೇತ್ರದಲ್ಲಿ ಟಿಎಂಸಿ ಅಭ್ಯರ್ಥಿ ಆಗಿರುವ ಮಮತಾ ಬ್ಯಾನರ್ಜಿ ಅವರನ್ನು ಈ ಬಾರಿ 50,000 ಮತಗಳಿಂದ ಬಿಜೆಪಿ ಸೋಲಿಸಲಿದೆ ಎಂದು ಬಿಜೆಪಿ ಅಭ್ಯರ್ಥಿ ಸುವೇಂದು ಅಧಿಕಾರಿ ಸವಾಲು ಹಾಕಿದ್ದಾರೆ.
ಬಂಗಾಳದಲ್ಲಿ ಬಿಜೆಪಿಯ ಮೈಂಡ್ ಗೇಮ್ ಕೆಲಸ ಮಾಡಲ್ಲ: ಟಿಎಂಸಿಯ ಡೆರೆಕ್ ಒಬ್ರಿಯನ್
ಪಶ್ಚಿಮ ಬಂಗಾಳದಲ್ಲಿ ಎಂಟು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಮಾರ್ಚ್ 27ರಂದು ರಾಜ್ಯದ 30 ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ನಡೆದಿದೆ. ಇದರ ಬಳಿಕ ಏಪ್ರಿಲ್ 1, ಏಪ್ರಿಲ್ 6, ಏಪ್ರಿಲ್ 10, ಏಪ್ರಿಲ್ 17, ಏಪ್ರಿಲ್ 22, ಏಪ್ರಿಲ್ 26 ಮತ್ತು ಏಪ್ರಿಲ್ 29ರಂದು ಮತದಾನ ನಡೆಯಲಿದೆ. ಚುನಾವಣೆಯ ಅಂತಿಮ ಫಲಿತಾಂಶ ಮೇ 2ರಂದು ಹೊರ ಬೀಳಲಿದೆ.