• search
  • Live TV
ಕೋಲ್ಕತಾ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ವೈದ್ಯಕೀಯ ಆಕ್ಸಿಜನ್: 2 ದಿನದಲ್ಲಿ 2ನೇ ಬಾರಿ ಪ್ರಧಾನಿಗೆ ದೀದಿ ಪತ್ರ

|

ಕೋಲ್ಕತ್ತಾ, ಮೇ 07: ಕೊರೊನಾವೈರಸ್ ರೋಗಿಗಳ ಚಿಕಿತ್ಸೆಗೆ ಅಗತ್ಯವಾಗಿರುವ ವೈದ್ಯಕೀಯ ಆಮ್ಲಜನಕ ಪೂರೈಸುವಂತೆ ಒಂದು ವಾರದಲ್ಲಿ ಎರಡನೇ ಬಾರಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪತ್ರ ಬರೆದಿದ್ದಾರೆ.

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಆಗಿ ಮೂರನೇ ಬಾರಿ ಪ್ರಮಾಣವಚನ ಸ್ವೀಕರಿಸಿದ ಮಮತಾ ಬ್ಯಾನರ್ಜಿ, ವೈದ್ಯಕೀಯ ಆಮ್ಲಜನಕ ಒದಗಿಸುವಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರುತ್ತಿದೆ. ಸದ್ಯ ಪ್ರತಿನಿತ್ಯ ಕೊವಿಡ್-19 ರೋಗಿಗಳಿಗೆ 470 ಮೆಟ್ರಿಕ್ ಟನ್ ಆಮ್ಲಜನಕದ ಅಗತ್ಯವಿದೆ. ಈ ಪ್ರಮಾಣವು 550 ಮೆಟ್ರಿಕ್ ಟನ್ ಆಗುವ ನಿರೀಕ್ಷೆಯಿದೆ ಎಂದು ತಿಳಿಸಿದ್ದಾರೆ.

ಸಿಎಂ ಆಗಿ 24 ಗಂಟೆಯೂ ಕಳೆದಿಲ್ಲ ಆಗಲೇ ಕೇಂದ್ರ ತಂಡ ಬರುತ್ತಿದೆ: ಮಮತಾ ಸಿಎಂ ಆಗಿ 24 ಗಂಟೆಯೂ ಕಳೆದಿಲ್ಲ ಆಗಲೇ ಕೇಂದ್ರ ತಂಡ ಬರುತ್ತಿದೆ: ಮಮತಾ

ಕೊರೊನಾವೈರಸ್ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದಂತೆ ಅಗತ್ಯ ವೈದ್ಯಕೀಯ ಸೌಲಭ್ಯಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ. ರಾಜ್ಯದಲ್ಲಿ 24 ಗಂಟೆಗೆ 470 ಮೆಟ್ರಿಕ್ ಟನ್ ವೈದ್ಯಕೀಯ ಆಮ್ಲಜನಕವನ್ನು ಕೊವಿಡ್-19 ಸೋಂಕಿತರ ಚಿಕಿತ್ಸೆಗೆ ಬಳಸಲಾಗುತ್ತಿದೆ. ಮುಂದಿನ ಆರೇಳು ದಿನಗಳಲ್ಲಿ ಒಂದು ದಿನಕ್ಕೆ ಕನಿಷ್ಠ 550 ಮೆಟ್ರಿಕ್ ಟನ್ ಆಮ್ಲಜನಕ ಬೇಕಾಗುತ್ತದೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.


ಕೇಂದ್ರ ಆರೋಗ್ಯ ಅಧಿಕಾರಿಗಳೊಂದಿಗೆ ಚರ್ಚೆ:

ಕೊರೊನಾವೈರಸ್ ಪರಿಸ್ಥಿತಿ ಮತ್ತು ವೈದ್ಯಕೀಯ ಸೌಲಭ್ಯಗಳಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ಹಿರಿಯ ಅಧಿಕಾರಿಗಳು ಮತ್ತು ಕೇಂದ್ರ ಆರೋಗ್ಯ ಕಾರ್ಯದರ್ಶಿಗಳೊಂದಿಗೆ ಪಶ್ಚಿಮ ಬಂಗಾಳ ಸರ್ಕಾರದ ಕಾರ್ಯದರ್ಶಿ ವಿಷಯ ಪ್ರಸ್ತಾಪಿಸಿದ್ದಾರೆ ಎಂದು ಸಿಎಂ ಮಮತಾ ಬ್ಯಾನರ್ಜಿ ಸ್ಪಷ್ಟಪಡಿಸಿದ್ದಾರೆ.

ಕಳೆದ 10 ದಿನಗಳಲ್ಲಿ ಕೇಂದ್ರ ಸರ್ಕಾರ ವೈದ್ಯಕೀಯ ಆಮ್ಲಜನಕದ ಹಂಚಿಕೆ ಪ್ರಮಾಣವನ್ನು 230 ಮೆಟ್ರಿಕ್ ಟನ್ ನಿಂದ 306 ಮೆಟ್ರಿಕ್ ಟನ್್ಗೆ ಹೆಚ್ಚಿಸಿದೆ. ಆದರೆ ಬಂಗಾಳಕ್ಕೆ ಮಾತ್ರ 308 ಮೆಟ್ರಿಕ್ ಟನ್ ಆಮ್ಲಜನಕವನ್ನು ಸೀಮಿತಗೊಳಿಸಲಾಗಿದೆ. ರಾಜ್ಯದಲ್ಲಿ ಪ್ರಸ್ತುತ 560 ಮೆಟ್ರಿಕ್ ಟನ್ ಆಮ್ಲಜನಕವನ್ನು ಉತ್ಪಾದಿಸಲಾಗುತ್ತಿದ್ದು, ಈ ಪೈಕಿ 470 ಮೆಟ್ರಿಕ್ ಟನ್ ಆಮ್ಲಜನಕವನ್ನು ಬಳಕೆ ಮಾಡಿಕೊಳ್ಳಲಾಗುತ್ತಿದೆ.

ಪಶ್ಚಿಮ ಬಂಗಾಳದಲ್ಲಿ ಕೊರೊನಾವೈರಸ್ ಆತಂಕ:

ರಾಜ್ಯದಲ್ಲಿ ಪ್ರತಿನಿತ್ಯ 18 ಸಾವಿರಕ್ಕೂ ಹೆಚ್ಚು ಕೊರೊನಾವೈರಸ್ ಸೋಂಕಿತ ಪ್ರಕರಣಗಳು ಪತ್ತೆಯಾಗುತ್ತಿವೆ. ಕಳೆದ 24 ಗಂಟೆಗಳಲ್ಲಿ 18,431 ಮಂದಿಗೆ ಕೊವಿಡ್-19 ಸೋಂಕು ತಗುಲಿದ್ದು, ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 9,35,066ಕ್ಕೆ ಏರಿಕೆಯಾಗಿದೆ. ಒಂದು ದಿನದಲ್ಲಿ 117 ಜನರು ಪ್ರಾಣ ಬಿಟ್ಟಿದ್ದು, ಸಾವಿನ ಸಂಖ್ಯೆ 11,964ಕ್ಕೆ ಏರಿಕೆಯಾಗಿದೆ. ಇದರ ಹೊರತಾಗಿ ರಾಜ್ಯದಲ್ಲಿ 1,22,774 ಸಕ್ರಿಯ ಪ್ರಕರಣಗಳಿವೆ.

English summary
"Medical Oxygen Demand Will Rise To 550 Tonnes In Next Week": Mamata Banerjee Letter To PM Modi.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X