ಲಾಕ್ ಡೌನ್ ವಿಸ್ತರಣೆ; ಜುಲೈ 1ರಿಂದ ಮೆಟ್ರೋ ಸಂಚಾರ ಆರಂಭ
ಕೋಲ್ಕತ್ತಾ, ಜೂನ್ 26 : "ಜುಲೈ 1ರಿಂದ ಮೆಟ್ರೋ ರೈಲು ಸೇವೆ ಆರಂಭಿಸುವ ಕುರಿತು ಅಧಿಕಾರಿಗಳ ಜೊತೆ ಮಾತುಕತೆ ನಡೆಸಲಾಗುತ್ತದೆ" ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.
Recommended Video
ಶುಕ್ರವಾರ ಪತ್ರಿಕಾಗೋಷ್ಠಿ ನಡೆಸಿದ ಮಮತಾ ಬ್ಯಾನರ್ಜಿ, "ಕೊರೊನಾ ವೈರಸ್ ಸೋಂಕು ಹರಡದಂತೆ ತಡೆಯಲು ಜುಲೈ 31ರ ತನಕ ಲಾಕ್ ಡೌನ್ ವಿಸ್ತರಣೆ ಮಾಡಲಾಗಿದೆ" ಎಂದರು.
"ಜುಲೈ 31ರ ತನಕ ಲಾಕ್ ಡೌನ್ ಇದ್ದರೂ ಬೆಳಗ್ಗೆ 5 ರಿಂದ ರಾತ್ರಿ 10 ಗಂಟೆಯ ತನಕ ವಿನಾಯಿತಿ ನೀಡಲಾಗುತ್ತದೆ. 10 ಗಂಟೆ ಬಳಿಕ ಕರ್ಫ್ಯೂ ಜಾರಿಗೊಳಿಸಲಾಗುತ್ತದೆ" ಎಂದು ಸ್ಪಷ್ಟಪಡಿಸಿದರು.

"ಲಾಕ್ ಡೌನ್ ಅವಧಿಯಲ್ಲಿ ರೈಲುಗಳ ಸಂಚಾರಕ್ಕೆ ಅವಕಾಶ ನೀಡಿಲ್ಲ. ಮೆಟ್ರೋ ಸೇವೆ ಆರಂಭಿಸುವ ಕುರಿತು ಅಧಿಕಾರಿಗಳ ಜೊತೆ ಮಾತುಕತೆ ನಡೆಸಲಾಗುತ್ತದೆ. ಮೆಟ್ರೋದಲ್ಲಿ ಸಾಮಾಜಿಕ ಅಂತರ ಕಾಪಾಡುವ ಭರವಸೆ ನೀಡಿದರೆ ಅವಕಾಶ ನೀಡಲಾಗುತ್ತದೆ" ಎಂದು ಮಮತಾ ಬ್ಯಾನರ್ಜಿ ಹೇಳಿದರು.
ಪಶ್ಚಿಮ ಬಂಗಾಳದಲ್ಲಿ ಇದುವರೆಗೂ 16,190 ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ದಾಖಲಾಗಿವೆ. 610 ಜನರು ಮೃತಪಟ್ಟಿದ್ದಾರೆ. ಕೇಂದ್ರ ಗೃಹ ಇಲಾಖೆ ಘೋಷಣೆ ಮಾಡಿರುವ 5ನೇ ಹಂತದ ಲಾಕ್ ಡೌನ್ (ಅನ್ ಲಾಕ್ 1) ಜೂನ್ 30ರ ತನಕ ಜಾರಿಯಲ್ಲಿರುತ್ತದೆ. ಬಳಿಕ ರಾಜ್ಯದಲ್ಲಿ ಜುಲೈ 31ರ ತನಕ ಲಾಕ್ ಡೌನ್ ಜಾರಿಯಲ್ಲಿರುತ್ತದೆ.












Click it and Unblock the Notifications