ಮುಖ್ಯಮಂತ್ರಿಗಳ ಸಭೆಯಲ್ಲೇ ಮೋದಿಗೆ ತಿರುಗೇಟು ನೀಡಿದ ಮಮತಾ ಬ್ಯಾನರ್ಜಿ

ನವದೆಹಲಿ, ಕೋಲ್ಕತ್ತಾ ಮೇ 11: ಕೊರೊನಾ ಸಂಬಂಧ, ಪ್ರಧಾನಿ ನರೇಂದ್ರ ಮೋದಿ ಕರೆದಿದ್ದ ಮುಖ್ಯಮಂತ್ರಿಗಳ ಸಭೆಯಲ್ಲೇ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಕೇಂದ್ರ ಸರಕಾರಕ್ಕೆ ಬಿಸಿ ಮುಟ್ಟಿಸಿದ್ದಾರೆ.

Recommended Video

      ಇವರು ದೀದಿ ನಾಡಿನ ಟ್ರಾಫಿಕ್ ಪೊಲೀಸ್..! | Mamata Banerjee

      ಸೋಮವಾರ, ಮಧ್ಯಾಹ್ನ ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆದ ಮುಖ್ಯಮಂತ್ರಿಗಳ ಸಭೆಯಲ್ಲಿ ಪ್ರಧಾನಿ ಮೋದಿ, ಕೇಂದ್ರ ಗೃಹಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾಗವಹಿಸಿದ್ದರು.

      ವಿಡಿಯೋ ಸಂವಾದದಲ್ಲಿ, ಪಶ್ಚಿಮ ಬಂಗಾಳದ ಪರಿಸ್ಥಿತಿಯನ್ನು ವಿವರಿಸುತ್ತಾ ಮಮತಾ ಬ್ಯಾನರ್ಜಿ, "ಇಡೀ ದೇಶ ಸಂದಿಗ್ದ ಪರಿಸ್ಥಿತಿಯಲ್ಲಿದೆ. ಇಂತಹ ಸಮಯದಲ್ಲಿ ಕೇಂದ್ರ ಸರಕಾರ ರಾಜಕೀಯ ಮಾಡಬಾರದು"ಎಂದು ನೇರವಾಗಿ ಸಭೆಯಲ್ಲಿ ಹೇಳಿದರು.

      Modi Government Shouldnt Do Politics At This Crucial Time: Mamata Banerjee

      "ನಾವು ಕೈಲಾದ ಪ್ರಯತ್ನಗಳನ್ನು ಮಾಡುತ್ತಿದ್ದೇವೆ. ಅಂತರಾಷ್ಟ್ರೀಯ ಮತ್ತು ಇತರ ದೊಡ್ಡ ರಾಜ್ಯಗಳ ಗಡಿಯನ್ನು ನಾವು ಹಂಚಿಕೊಂಡಿದ್ದೇವೆ. ಕೇಂದ್ರ ಸರಕಾರ, ದೇಶದ ಎಲ್ಲಾ ರಾಜ್ಯಗಳಿಗೆ ಸಮನಾದ ಪ್ರಾಮುಖ್ಯತೆಯನ್ನು ನೀಡಬೇಕು. ಭಾರತ ಒಂದು ದೇಶವಾಗಿ ಕೊರೊನಾವನ್ನು ಹಿಮ್ಮೆಟ್ಟಿಸಬೇಕು" ಎಂದು ಮಮತಾ ಬ್ಯಾನರ್ಜಿ ಸಭೆಯಲ್ಲಿ ಅಭಿಪ್ರಾಯ ಪಟ್ಟರು.

      "ಮಮತಾ ಬ್ಯಾನರ್ಜಿ ಸರಕಾರ ಬಿಡುಗಡೆ ಮಾಡಿದ ಆರೋಗ್ಯ ಬುಲೆಟಿನ್ ನಲ್ಲಿ ಹಲವು ವ್ಯತ್ಯಾಸಗಳಿವೆ. ರಹಸ್ಯವಾಗಿ ನಡೆಸಿದ ಅಂತ್ಯಕ್ರಿಯೆಯ ಬಗ್ಗೆಯೂ ಮಾಹಿತಿಯಿಲ್ಲ. ಇದರಿಂದ ಸರಕಾರ ಘೋಷಿಸುವ ಪರಿಹಾರದಲ್ಲೂ ಗೊಂದಲವಾಗುವ ಸಾಧ್ಯತೆಯಿಲ್ಲದಿಲ್ಲ" ಎಂದು ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯ್ ವರ್ಗೀಯಾ, ಮಮತಾಗೆ ಪತ್ರ ಬರೆದಿದ್ದರು.

      ಇದಲ್ಲದೇ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಮಮತಾಗೆ ಪತ್ರ ಬರೆದು, ವಲಸೆ ಕಾರ್ಮಿಕರನ್ನು ಕರೆತರುವ ವಿಚಾರದಲ್ಲಿ ಪಶ್ಚಿಮ ಬಂಗಾಳ ಸಂಪೂರ್ಣ ವಿಫಲವಾಗಿದೆ ಎಂದು ಪತ್ರ ಬರೆದಿದ್ದರು.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+