ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪಶ್ಚಿಮ ಬಂಗಾಳ ಚುನಾವಣೆ: ಮಮತಾ ಸುವೇಂದು ಕದನದಲ್ಲಿ ಗೆಲ್ಲುವವರು ಯಾರು?

|
Google Oneindia Kannada News

ಕೋಲ್ಕತ್ತಾ,ಮೇ 02: ಪಂಚರಾಜ್ಯ ಚುನಾವಣೆಯಲ್ಲಿ ಅತ್ಯಂತ ಹೆಚ್ಚು ಗಮನಸೆಳೆಯುತ್ತಿರುವ ಕ್ಷೇತ್ರವೆಂದರೆ ಪಶ್ಚಿಮ ಬಂಗಾಳದ ನಂದಿಗ್ರಾಮ.

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಹಾಗೂ ಅವರ ಮಾಜಿ ಆಪ್ತ ಸುವೇಂದು ಅಧಿಕಾರಿ ನಡುವೆ ನಂದಿಗ್ರಾಮದಲ್ಲಿ ಚುನಾವಣಾ ಕದನ ನಡೆಯುತ್ತಿದೆ.

Live Updates: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ, ಟಿಎಂಸಿ ನೇರ ಪೈಪೋಟಿLive Updates: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ, ಟಿಎಂಸಿ ನೇರ ಪೈಪೋಟಿ

ತನ್ನ ಅತ್ಯಾಪ್ತ ಶಾಸಕ ಬಿಜೆಪಿ ಸೇರಿದ್ದಾರೆ ಎನ್ನುವ ಕೋಪಕ್ಕೆ ಸುವೇಂದು ಅಧಿಕಾರಿ ಕ್ಷೇತ್ರಕ್ಕೆ ಬಂದು ಮಮತಾ ಬ್ಯಾನರ್ಜಿ ಸ್ಪರ್ಧಿಸಿದ್ದಾರೆ. ಹೀಗಾಗಿ ಜತೆಗೆ ನಂದಿಗ್ರಾಮದಲ್ಲಿ ಮಮತಾ ಬ್ಯಾನರ್ಜಿ ಸೋಲುತ್ತಾರೆ ಹಾಗೂ ಪಶ್ಚಿಮ ಬಂಗಾಳದಲ್ಲಿ ಕೂಡ ಸೋಲುತ್ತಾರೆ ಎಂದು ಬಿಜೆಪಿ ಚುನಾವಣಾ ಪ್ರಚಾರ ಮಾಡಿತ್ತು.

Nandigram Assembly Election 2021 Results: Mamata Banerjee Vs Suvendu Adhikari - Who Will Win

ಆದರೆ ಮಮತಾ ಬ್ಯಾನರ್ಜಿ ಮಾತ್ರ ಬೇರೆ ಕ್ಷೇತ್ರದಲ್ಲಿ ನಿಲ್ಲದೆ ನಂದಿಗ್ರಾಮದಲ್ಲಿ ನಾಮಪತ್ರ ಸಲ್ಲಿಸಿದ್ದರು, ಹೀಗಾಗಿ ನಂದಿಗ್ರಾಮದ ಫಲಿತಾಂಶದ ಮೇಲೆ ದೇಶದ ಜನತೆಯ ಕಣ್ಣಿದೆ.
ನಂದಿಗ್ರಾಮದಲ್ಲಿ ಈ ಹಿಂದೆ ಸುವೇಂದು ಅಧಿಕಾರಿ ತಂದೆ ಶಾಸಕರಾಗಿದ್ದರು ಈಗ ಸತತ ಮೂರು ಬಾರಿ ಸುವೇಂದು ಅಧಿಕಾರಿ ಶಾಸಕರಾಗಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಒಟ್ಟು 8 ಹಂತಗಳಲ್ಲಿ ಮತದಾನ ನಡೆದಿದೆ, ಇಂದು ಚುನಾವಣಾ ಫಲಿತಾಂಶ ಹೊರಬೀಳಲಿದೆ.

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ಫಲಿತಾಂಶ ದೇಶದಲ್ಲಿ ಕುತೂಹಲ ಮೂಡಿಸಿದೆ. ಅಸ್ಸಾಂ, ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಪುದುಚೇರಿ ರಾಜ್ಯಗಳಲ್ಲಿ ವಿವಿಧ ಹಂತಗಳಲ್ಲಿ ಮತದಾನ ನಡೆದಿದ್ದು, ಇಂದು ಮತ ಎಣಿಕೆ ನಡೆಯುತ್ತಿದೆ.

ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ರಾಜ್ಯಗಳಲ್ಲಿ ಬಿರುಸಿನ ಪ್ರಚಾರವನ್ನು ನಡೆಸುವ ಮೂಲಕ ವಿಧಾನಸಭೆ ಚುನಾವಣೆ ಕುರಿತು ರಾಷ್ಟ್ರಮಟ್ಟದಲ್ಲಿ ಕುತೂಹಲ ಮೂಡುವಂತೆ ಮಾಡಿದೆ.

ಪಶ್ಚಿಮ ಬಂಗಾಳದಲ್ಲಿ ಮೋದಿ ಮ್ಯಾಜಿಕ್ ನಡೆಯಲಿದೆಯೋ, ದೀದಿ ಹ್ಯಾಟ್ರಿಕ್ ಬಾರಿಸಲಿದ್ದಾರೆಯೋ? ಎಂದು ಜನರು ಕಾಯುತ್ತಿದ್ದಾರೆ. ಅಸ್ಸಾಂ ಮತ್ತು ಕೇರಳ ಚುನಾವಣೆ ಫಲಿತಾಂಶ ಸಹ ಪ್ರಕಟವಾಗುತ್ತಿದೆ.

English summary
West Bengal Nandigram Election Results 2021: Suvendu Adhikari vs Mamata Banergee Who will win the biggest prestige battle of Bengal?
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X