"ಮೋದಿ, ಮಮತಾ ಒಂದೇ ನಾಣ್ಯದ ಎರಡು ಮುಖಗಳು"

ಕೋಲ್ಕತ್ತಾ, ಏಪ್ರಿಲ್ 14: ಪ್ರಧಾನಿ ನರೇಂದ್ರ ಮೋದಿ ಹಾಗೂ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಒಂದೇ ನಾಣ್ಯದ ಎರಡು ಮುಖಗಳು ಎಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದಿನ್ ಓವೈಸಿ ಟೀಕಿಸಿದ್ದಾರೆ.

ಪಶ್ಚಿಮ ಬಂಗಾಳದ ಅಸನೋಲ್ ಜಿಲ್ಲೆಯಲ್ಲಿ ನಡೆದ ಚುನಾವಣಾ ಸಮಾವೇಶದಲ್ಲಿ ಮಾತನಾಡಿದ ಓವೈಸಿ, "ಮಮತಾ ಬ್ಯಾನರ್ಜಿಗೂ ನರೇಂದ್ರ ಮೋದಿಗೂ ಯಾವುದೇ ವ್ಯತ್ಯಾಸ ಇಲ್ಲ. ಅವರಿಬ್ಬರೂ ಒಂದೇ ನಾಣ್ಯದ ಎರಡು ಮುಖಗಳು" ಎಂದು ಹೇಳಿದ್ದಾರೆ.

Narendra Modi And Mamata Are Two Sides Of Same Coin Says Owaisi

"ಅವರಿಬ್ಬರೂ ಅಣ್ಣ ತಂಗಿಯರು. ಇಬ್ಬರೂ ತಮ್ಮ ಹೇಳಿಕೆಗಳಿಂದ ಜನರನ್ನು ಮೂರ್ಖರನ್ನಾಗಿ ಮಾಡುತ್ತಿದ್ದಾರಷ್ಟೆ. ಕಳೆದ ಹತ್ತು ವರ್ಷಗಳಲ್ಲಿ ತೃಣಮೂಲ ಕಾಂಗ್ರೆಸ್ ಮುಸ್ಲಿಮರಿಗಾಗಿ ಏನು ಮಾಡಿದೆ ಎಂದು ಪಟ್ಟಿ ಮಾಡಲಿ" ಎಂದು ಸವಾಲು ಹಾಕಿದರು.

ಪಶ್ಚಿಮ ಬಂಗಾಳದಲ್ಲಿ 294 ಕ್ಷೇತ್ರಗಳಿಗೆ ಎಂಟು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಈಗಾಗಲೇ ನಾಲ್ಕು ಹಂತಗಳ ಮತದಾನ ನಡೆದಿದೆ. ಬಿಜೆಪಿ ಹಾಗೂ ತೃಣಮೂಲ ಕಾಂಗ್ರೆಸ್ ನಡುವೆ ಜಟಾಪಟಿ ಇದ್ದು, ರಾಜ್ಯದಲ್ಲಿ ಚುನಾವಣೆ ಸಂದರ್ಭ ಅಹಿತಕರ ಘಟನೆಗಳೂ ಸಂಭವಿಸಿವೆ. ಮೇ 2ರಂದು ಫಲಿತಾಂಶ ಹೊರಬೀಳಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+