Breaking: ಪಶ್ಚಿಮ ಬಂಗಾಳದಲ್ಲಿ ಶೀಘ್ರವೇ ಎನ್‌ಇಪಿ ಜಾರಿ
ಕೋಲ್ಕತ್ತಾ, ಜುಲೈ 24; ಹೊಸ ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ)ಯನ್ನು ಜಾರಿಗೊಳಿಸಲು ಕೇಂದ್ರವು ಸರ್ಕಾರವು ಪಶ್ಚಿಮ ಬಂಗಾಳ ರಾಜ್ಯ ಸರ್ಕಾರದ ಜತೆಗೆ ಈಗಾಗಲೇ ಮಾತುಕತೆ ನಡೆಸಿದೆ. ಆದಷ್ಟು ಶೀಘ್ರವೇ ಈ ರಾಜ್ಯದಲ್ಲಿ ಎನ್‌ಇಪಿ ಜಾರಿಗೆ ಬರಲಿದೆ ಎಂದು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ತಿಳಿಸಿದ್ದಾರೆ.
ಭಾನುವಾರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಪಶ್ಚಿಮ ಬಂಗಾಳದಲ್ಲಿ ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಅಳವಡಿಸುವಲ್ಲಿ ಇರುವ ತೊಂದರೆಗಳ ಬಗ್ಗೆ ಕೇಂದ್ರ ಸರ್ಕಾರ ರಾಜ್ಯ ಸರ್ಕಾರದೊಂದಿಗೆ ಚರ್ಚಿಸುತ್ತಿದೆ. ಈಗಾಗಲೇ ಕೆಲವು ಹಂತಗಳ ಚರ್ಚೆ ಆಗಿದೆ. ಶಿಕ್ಷಣ ನೀತಿ ಅಳವಡಿಕೆಯಲ್ಲಿ ಯಾವುದೇ ಅಡ್ಡಿಗಳಿದ್ದರು ಅವನ್ನು ಸರಿಪಡಿಸುವುದಾಗಿ ಕೇಂದ್ರ ಸರ್ಕಾರ ಸಜ್ಜಾಗಿದೆ ಎಂದು ಹೇಳಿದರು.
ನೂತನ ಶಿಕ್ಷಣ ನೀತಿ ಅಳವಡಿಕೆಯಿಂದ ಉದ್ಯೋಗ ಸೃಷ್ಟಿ ಸಾಧ್ಯವಾಗಲಿದೆ. ನೀತಿ ಆಧುನಿಕ ಮತ್ತು ಸಮಕಾಲೀನವಾಗಿದೆ. ಎಲ್ಲಾ ಮಧ್ಯಸ್ಥಗಾರರು ನೀತಿ ಜಾರಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ. ಹೀಗಿದ್ದರು. ಈ ರಾಜ್ಯದಲ್ಲಿ ಯಾಕೆ ಶಿಕ್ಷಣ ನೀತಿಗೆ ವಿರೋಧ ಇದೆ ಎಂಬುದು ತಿಳಿಯುತ್ತಿಲ್ಲ ಎಂದು ಅವರು ವಿಷಾದ ವ್ಯಕ್ತಪಡಿಸಿದರು.

ಈಗಾಗಲೇ ಪಶ್ಚಿಮ ಬಂಗಾಳ ರಾಜ್ಯ ಸರ್ಕಾರ ನೂತನ ಶಿಕ್ಷಣ ನೀತಿಯನ್ನು ಪರೀಕ್ಷಿಸಲು ಹತ್ತು ಮಂದಿ ಸದಸ್ಯರ ಸಮಿತಿ ರಚಿಸಿತ್ತು. ರಾಜ್ಯದಲ್ಲಿ ಶಿಕ್ಷಣ ನೀತಿ ಜಾರಿ ಅಗತ್ಯ ಕುರಿತು ಚರ್ಚಿಸಿತ್ತು. 10 ಜನರ ನೇತೃತ್ವದ ಪರಿಶೀಲನಾ ಸಮಿತಿಯು ಎಇಪಿಯನ್ನು ವಿವಿಧ ಹಂತಗಳಲ್ಲಿ ಸಮಗ್ರವಾಗಿ ಪರಿಶೀಲಿಸುತ್ತದೆ ಎಂದು ರಾಜ್ಯ ಶಿಕ್ಷಣ ಸಚಿವ ಬ್ರತ್ಯಾ ಬಸು ತಿಳಿಸಿದ್ದಾರೆ.
ರಾಜ್ಯದಲ್ಲಿ ಎರಡು ವರ್ಷಗಳ ನಂತರ 10 ಹಾಗೂ 12ನೇ ತರಗತಿಗಳನ್ನು ಆಫ್‌ಲೈನ್ ಮೋಡ್‌ನಲ್ಲಿ ಯಶಸ್ವಿಯಾಗಿ ನಡೆಸಲಾಗಿದೆ. ಅಲ್ಲದೇ 45 ದಿನಗಳಲ್ಲಿ ಫಲಿತಾಂಶಗಳನ್ನು ಪ್ರಕಟಿಸಿದ್ದಕ್ಕಾಗಿ ಸಿಬಿಎಸ್‌ಇ ಅಧಿಕಾರಿಗಳಿಗೆ ಶಿಕ್ಷಣ ಮಂತ್ರಿ ಧರ್ಮೇಂದ್ರ ಪ್ರಧಾನ್ ಅವರು ಅಭಿನಂದನೆ ತಿಳಿಸಿದರು. ಜತೆಗೆ 10 ಹಾಗೂ 12ನೇ ತರಗತಿಯ ಫಲಿತಾಂಶದಲ್ಲಿ ಈ ಭಾರೀ ಬಾಲಕಿಯರೇ ಮೇಲುಗೈ ಸಾಧಿಸಿರುವುದು ಹೆಮ್ಮಯ ವಿಷಯವಾಗಿದೆ ಎಂದು ಅವರು ತಿಳಿಸಿದ್ದಾರೆ.












Click it and Unblock the Notifications