ಅಲ್ಪಸಂಖ್ಯಾತರ ಮತ ಕಬಳಿಸಲು ಬೇರೆ ಪಕ್ಷಕ್ಕೆ ಬಿಜೆಪಿ ಬೆಂಬಲ; ಮಮತಾ
ಕೋಲ್ಕತ್ತಾ, ಮಾರ್ಚ್ 25: ವಿಧಾನಸಭಾ ಚುನಾವಣೆಯಲ್ಲಿ ಅಲ್ಪಸಂಖ್ಯಾತರ ಮತಗಳನ್ನು ಕಬಳಿಸಲು ಬಿಜೆಪಿ ರಾಜ್ಯದಲ್ಲಿ ಹೊಸ ರಾಜಕೀಯ ಪಕ್ಷವನ್ನು ಬೆಂಬಲಿಸುತ್ತಿದೆ ಎಂದು ಮಮತಾ ಬ್ಯಾನರ್ಜಿ ಗುರುವಾರ ಆರೋಪಿಸಿದ್ದಾರೆ.
ಯಾವುದೇ ಪಕ್ಷದ ಅಥವಾ ವ್ಯಕ್ತಿಯ ಹೆಸರನ್ನು ಹೇಳದೇ ಆರೋಪಿಸಿದ ಅವರು, ಸೌತ್ 24 ಪರಗಣ ಜಿಲ್ಲೆಯಲ್ಲಿ ನಡೆದ ಚುನಾವಣಾ ಮೆರವಣಿಗೆಯಲ್ಲಿ ಆ ಪಕ್ಷದ ಸಂಸ್ಥಾಪಕರು ಬಿಜೆಪಿಯಿಂದ ಹಣವನ್ನೂ ಪಡೆದುಕೊಂಡಿದ್ದಾರೆ ಎಂದು ದೂರಿದರು.
ರೋಚಕ ಕಾರಣ: 2 ಮನೆ ಬಾಡಿಗೆ ಪಡೆದ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ!
ಬಿಜೆಪಿ ಬೆಂಬಲದೊಂದಿಗೆ ರಾಜ್ಯದಲ್ಲಿ ಹೊಸ ಪಕ್ಷ ಕಾಣಿಸಿಕೊಂಡಿದೆ. ಬಿಜೆಪಿಗೆ ಅಲ್ಪಸಂಖ್ಯಾತರ ಮತಗಳನ್ನು ಪಡೆಯಲು ಸಹಾಯ ಮಾಡಲು ಮುಂದಾಗಿದೆ. ಆ ಅಭ್ಯರ್ಥಿಗೆ ದಯವಿಟ್ಟು ಮತ ಹಾಕಬೇಡಿ ಎಂದು ಮನವಿ ಮಾಡಿದ್ದಾರೆ.
ರಾಜ್ಯದಲ್ಲಿ ಸಿಪಿಐ (ಎಂ) ಹಾಗೂ ಕಾಂಗ್ರೆಸ್ ಕೂಡ ಬಿಜೆಪಿ ಜೊತೆ ಸೇರಿಕೊಂಡಿವೆ ಎಂದು ದೂರಿದ ಅವರು, ತೃಣಮೂಲ ಕಾಂಗ್ರೆಸ್‌ನಿಂದ ಮಾತ್ರ ಪಶ್ಚಿಮ ಬಂಗಾಳದಲ್ಲಿ ಸಿಎಎ ಹಾಗೂ ಎನ್‌ಪಿಆರ್ ಅನುಷ್ಠಾನವನ್ನು ತಡೆಯಲು ಸಾಧ್ಯ ಹಾಗೂ ಭಿನ್ನ ಸಮುದಾಯಗಳೊಂದಿಗೆ ಸೌಹಾರ್ದತೆ ಮೂಡಿಸಲು ಸಾಧ್ಯ ಎಂದು ಹೇಳಿದ್ದಾರೆ.
ಪಶ್ಚಿಮ ಬಂಗಾಳದಲ್ಲಿ 294 ಕ್ಷೇತ್ರಗಳಿಗೆ ಎಂಟು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಮಾರ್ಚ್ 27ರಿಂದ ಚುನಾವಣೆ ಆರಂಭವಾಗಲಿದ್ದು, ಟಿಎಂಸಿ ಹಾಗೂ ಬಿಜೆಪಿ ನಡುವೆ ನೇರ ಹಣಾಹಣಿ ಇದೆ.