• search
  • Live TV
ಕೋಲ್ಕತಾ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಕೋಲ್ಕತ್ತಾದಲ್ಲಿ ಲಾಕ್ ಡೌನ್ ದಿನ ವಿಮಾನ ಹಾರಾಟ ಬಂದ್

|

ಕೋಲ್ಕತ್ತಾ, ಜುಲೈ 30 : ಪಶ್ಚಿಮ ಬಂಗಾಳ ರಾಜಧಾನಿ ಕೋಲ್ಕತ್ತಾದ ವಿಮಾನ ನಿಲ್ದಾಣದಿಂದ ವಿಮಾನ ಸೇವೆ ಲಾಕ್ ಡೌನ್ ದಿನಗಳಲ್ಲಿ ಇರುವುದಿಲ್ಲ. ಆಗಸ್ಟ್‌ನಲ್ಲಿ 7 ದಿನಗಳ ಲಾಕ್ ಡೌನ್ ಮಾಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.

ಜಾಗತಿಕ ವ್ಯಾಕ್ಸಿನ್ ವಾರ್: ಭಾರತವೇ ಯುದ್ಧ ಕೇಂದ್ರ..!

ಮಮತಾ ಬ್ಯಾನರ್ಜಿ ನೇತೃತ್ವದ ಸರ್ಕಾರ ಕೊರೊನಾ ವೈರಸ್ ಸೋಂಕು ಹರಡುವಿಕೆ ತಡೆಯಲು ಆಗಸ್ಟ್‌ನಲ್ಲಿ ಏಳು ದಿನಗಳ ಲಾಕ್ ಡೌನ್ ಘೋಷಣೆ ಮಾಡಲಿದೆ. ವಾರಾಂತ್ಯದಲ್ಲಿ ಈ ಲಾಕ್ ಡೌನ್ ಜಾರಿಗೆ ಬರುವ ಸಾಧ್ಯತೆ ಇದೆ.

ಪಶ್ಚಿಮ ಬಂಗಾಳದಲ್ಲಿ ವಾರಕ್ಕೆ ಎರಡು ದಿನ ಸಂಪೂರ್ಣ ಲಾಕ್‌ಡೌನ್

ಲಾಕ್ ಡೌನ್ ಜಾರಿಯಲ್ಲಿರುವ ದಿನದಲ್ಲಿ ಕೋಲ್ಕತ್ತಾದ ನೇತಾಜಿ ಸುಭಾಷ್ ಚಂದ್ರ ಬೋಸ್ ವಿಮಾನ ನಿಲ್ದಾಣ ಕಾರ್ಯಾಚರಣೆ ನಡೆಸುವುದಿಲ್ಲ. ಟಿಕೆಟ್ ಬುಕ್ ಮಾಡಿರುವ ಪ್ರಯಾಣಿಕರು ವಿಮಾನಯಾನ ಸಂಸ್ಥೆಗಳನ್ನು ಸಂಪರ್ಕಿಸಬೇಕು ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ಮನವಿ ಮಾಡಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಲಾಕ್ ಡೌನ್ ಆ.31ರ ತನಕ ವಿಸ್ತರಣೆ

ಲಾಕ್ ಡೌನ್ ದಿನಾಂಕ: ಪಶ್ಚಿಮ ಬಂಗಾಳ ಸರ್ಕಾರದ ಮಾಹಿತಿಯಂತೆ 5, 8,16,17, 23, 24 ಮತ್ತು 31ರಂದು ಲಾಕ್ ಡೌನ್ ಜಾರಿಯಲ್ಲಿರುತ್ತದೆ. ಕಂಟೈನ್ಮೆಂಟ್ ಪ್ರದೇಶಗಳಲ್ಲಿ ಆಗಸ್ಟ್ 31ರ ತನಕ ಲಾಕ್ ಡೌನ್ ವಿಸ್ತರಣೆ ಮಾಡಿ ಆದೇಶ ಹೊರಡಿಸಲಾಗಿದೆ.

ವಾರದಲ್ಲಿ ಎರಡು ದಿನ ಕೊಲ್ಕತ್ತ ವಿಮಾನ ನಿಲ್ದಾಣ ಬಂದ್

ಪಶ್ಚಿಮ ಬಂಗಾಳ ಸರ್ಕಾರದ ಮನವಿಯಂತೆ ಕೇಂದ್ರ ವಿಮಾನಯಾನ ಸಚಿವಾಲಯ ಕೋವಿಡ್ ಸೋಂಕು ಹೆಚ್ಚಿರುವ ದೆಹಲಿ, ಮುಂಬೈ, ಪುಣೆ, ಚೆನ್ನೈ, ನಾಗ್ಪುರ ಮತ್ತು ಅಹಮದಾಬಾದ್‌ನಿಂದ ಕೋಲ್ಕತ್ತಾಗೆ ಜುಲೈ 31ರ ತನಕ ವಿಮಾನ ಹಾರಾಟ ರದ್ದುಗೊಳಿಸಿದೆ.

ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 65,258ಕ್ಕೆ ಏರಿಕೆಯಾಗಿದೆ. 1,490 ಜನರು ಇದುವರೆಗೂ ಮೃತಪಟ್ಟಿದ್ದಾರೆ. ಕಂಟೈನ್ಮೆಂಟ್ ಝೋನ್‌ಗಳಲ್ಲಿ ಲಾಕ್ ಡೌನ್ ನಿಯಮ ಕಡ್ಡಾಯವಾಗಿ ಪಾಲಿಸಬೇಕು ಎಂದು ಸರ್ಕಾರ ಹೇಳಿದೆ.

English summary
West Bengal government announced seven days of lockdown in the month of August to control spread of Coronavirus. Flight operations at Kolkata’s Netaji Subhas Chandra Bose international airport have been suspended on lockdown days.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X