ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪಶ್ಚಿಮ ಬಂಗಾಳದಲ್ಲಿ 4 ಹಂತ ಸೇರಿಸಿ ಒಂದೇ ದಿನ ಚುನಾವಣೆ ನಡೆಸುವ ಚಿಂತನೆ ಇಲ್ಲ: ಚುನಾವಣಾ ಆಯೋಗ

|
Google Oneindia Kannada News

ನವದೆಹಲಿ, ಏಪ್ರಿಲ್ 15: ಪಶ್ಚಿಮ ಬಂಗಾಳದಲ್ಲಿ ಉಳಿದೆಲ್ಲಾ ಹಂತಗಳನ್ನು ಸೇರಿಸಿ ಒಟ್ಟಿಗೆ ಚುನಾವಣೆ ನಡೆಸುವ ಯಾವುದೇ ಚಿಂತನೆ ಇಲ್ಲ ಎಂದು ಭಾರತೀಯ ಚುನಾವಣಾ ಆಯೋಗ ತಿಳಿಸಿದೆ.

ಪಶ್ಚಿಮ ಬಂಗಾಳದಲ್ಲಿ ಒಟ್ಟು 8 ಹಂತಗಳಲ್ಲಿ ವಿಧಾನಸಭೆ ಚುನಾವಣೆ ನಡೆಯುತ್ತಿದೆ. ಅದರಲ್ಲಿ ನಾಲ್ಕು ಹಂತದ ಚುನಾವಣೆ ಈಗಾಗಲೇ ಮುಗಿದಿದ್ದು, ಇನ್ನುಳಿದ ನಾಲ್ಕು ಹಂತದ ಚುನಾವಣೆಗಳನ್ನು ಒಟ್ಟಿಗೆ ನಡೆಸುವ ಯಾವುದೇ ನಿರ್ಧಾರವನ್ನು ಆಯೋಗ ಮಾಡಿಲ್ಲ ಎಂದು ಸ್ಪಷ್ಟಪಡಿಸಿದೆ.

ಬಿಜೆಪಿ ಪರ ಪಕ್ಷಪಾತ: ಚುನಾವಣಾ ಆಯೋಗದ ವಿರುದ್ಧ ಟಿಎಂಸಿ ಆರೋಪಬಿಜೆಪಿ ಪರ ಪಕ್ಷಪಾತ: ಚುನಾವಣಾ ಆಯೋಗದ ವಿರುದ್ಧ ಟಿಎಂಸಿ ಆರೋಪ

ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಉಳಿದ ನಾಲ್ಕು ಹಂತಗಳ ಚುನಾವಣೆಯನ್ನು ಒಂದೇ ದಿನ ಮಾಡುವುದಾಗಿ ಸಾಮಾಜಿಕ ಜಾಲತಾಣಗಳಲ್ಲಿ ಊಹಾಪೋಹಗಳು ಹರಿದಾಡಿದ್ದವು. ಇದಕ್ಕೆ ಚುನಾವಣಾ ಆಯೋಗ ಸ್ಪಷ್ಟನೆ ನೀಡಿದೆ.

 No Such Plan Of Clubbing Phases: EC On Speculations Of Reducing Phases

ಕೊರೊನಾ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಪಾಲಿಸುವ ಕುರಿತು ಚುನಾವಣಾ ಆಯೋಗವು ಎಲ್ಲಾ ಪಕ್ಷಗಳ ಸಭೆ ಕರೆದಿದೆ. ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ನ ಶಮ್‌ಶೇರ್ ಗುಂಜ್ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರೆಜೌಲ್ ಹಕ್ ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ.

ಚಿಕಿತ್ಸೆಗೆ ಸ್ಪಂದಿಸದೇ, ಗುರುವಾರ ಮುಂಜಾನೆ 5 ಗಂಟೆ ವೇಳೆಗೆ ನಿಧನರಾದರು. ಸಂಶೇರ್‌ಗಂಜ್‌ನಲ್ಲಿ ಏಪ್ರಿಲ್ 26ಕ್ಕೆ ಚುನಾವಣೆ ನಿಗದಿಯಾಗಿತ್ತು. ಏಪ್ರಿಲ್ 26 ರಂದು 7 ನೇ ಹಂತದಲ್ಲಿ ಮತದಾನ ನಡೆಯಲಿದೆ.

ಕೊರೊನಾ‌ ಸೋಂಕು ಇರುವುದು ದೃಢಪಟ್ಟ ನಂತರ, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪಶ್ಚಿಮ ಬಂಗಾಳದ ಸಂಶೇರ್‌ಗಂಜ್ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ರೆಜೌಲ್‌ ಹಕ್ ಗುರುವಾರ ಮುಂಜಾನೆ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಇಲಾಖೆ ಮೂಲಗಳು ತಿಳಿಸಿವೆ.

English summary
No such plan of clubbing phases: Election Commission of India (ECI) on speculations about the Commission clubbing remaining Assembly election phases in West Bengal into one.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X