ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಿಎಂ ಆಗಿ 24 ಗಂಟೆಯೂ ಕಳೆದಿಲ್ಲ ಆಗಲೇ ಕೇಂದ್ರ ತಂಡ ಬರುತ್ತಿದೆ: ಮಮತಾ

|
Google Oneindia Kannada News

ಕೋಲ್ಕತ್ತಾ, ಮೇ 06: ನಾನು ಮುಖ್ಯಮಂತ್ರಿಯಾಗಿ 24 ಗಂಟೆಯೂ ಕಳೆದಿಲ್ಲ ಆಗಲೇ ಕೇಂದ್ರದ ತಂಡವು ಬರಲು ಸಿದ್ಧವಿದೆ ಎಂದು ಮಮತಾ ಬ್ಯಾನರ್ಜಿ ವ್ಯಂಗ್ಯವಾಡಿದ್ದಾರೆ.

ವಿಧಾನಸಭಾ ಚುನಾವಣೆ ನಂತರ ನಡೆದ ಹಿಂಸಾಚಾರದಲ್ಲಿ 16 ಜನರು ಮೃತಪಟ್ಟಿರುವುದಾಗಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ ತಿಳಿಸಿದ್ದು, ಮೃತರ ಕುಟುಂಬ ಸದಸ್ಯರಿಗೆ 2 ಲಕ್ಷ ರೂ. ಪರಿಹಾರವನ್ನು ಘೋಷಿಸಿದ್ದಾರೆ.

ಪಶ್ಚಿಮ ಬಂಗಾಳ ಚುನಾವಣೋತ್ತರ ಹಿಂಸಾಚಾರ: ತನಿಖೆಗೆ ಸಮಿತಿ ರಚಿಸಿದ ಗೃಹ ಸಚಿವಾಲಯ ಪಶ್ಚಿಮ ಬಂಗಾಳ ಚುನಾವಣೋತ್ತರ ಹಿಂಸಾಚಾರ: ತನಿಖೆಗೆ ಸಮಿತಿ ರಚಿಸಿದ ಗೃಹ ಸಚಿವಾಲಯ

ಏಪ್ರಿಲ್ 10 ರಂದು ನಾಲ್ಕನೇ ಹಂತದ ಚುನಾವಣೆ ನಡೆಯುವಾಗ ಕೂಚ್ ಬೆಹಾರ್ ನಲ್ಲಿ ನಡೆದ ಗುಂಡಿನ ದಾಳಿ ಘಟನೆ ಕುರಿತು ಸಿಐಡಿ ತಂಡವೊಂದು ತನಿಖೆಯನ್ನು ಆರಂಭಿಸಿದೆ ಎಂದು ಮಮತಾ ಬ್ಯಾನರ್ಜಿ ಹೇಳಿದರು.

Not Even 24 Hours Since I Took Oath As CM, Central Teams Have Started Arriving

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಮತಾ ಬ್ಯಾನರ್ಜಿ, ಕಳೆದ ತಿಂಗಳು ಕೂಚ್ ಬೆಹಾರ್ ನ ಸಿತಾಲ್ ಕುಚಿ ಪ್ರದೇಶದಲ್ಲಿ ಸಿಆರ್ ಪಿಎಫ್ ಗುಂಡಿನ ದಾಳಿಯಲ್ಲಿ ಮೃತಪಟ್ಟ ಐವರು ಕುಟುಂಬದ ಸದಸ್ಯರೊಬ್ಬರಿಗೆ ಹೋಮ್ ಗಾರ್ಡ್ಸ್ ಉದ್ಯೋಗ ನೀಡುವುದಾಗಿ ತಿಳಿಸಿದರು.

ಜನಸಾಮಾನ್ಯರ ಆದೇಶವನ್ನು ಬಿಜೆಪಿ ಇನ್ನೂ ಸಹಿಸಿಕೊಳ್ಳಲು ಆಗುತ್ತಿಲ್ಲ. ಜನಾದೇಶವನ್ನು ಒಪ್ಪಿಕೊಳ್ಳುವಂತೆ ಕಮಲ ನಾಯಕಲ್ಲಿ ಮನವಿ ಮಾಡಿದರು.

ಚುನಾವಣೆ ನಂತರದ ಹಿಂಸಾಚಾರದ ಕಾರಣವನ್ನು ಪರಿಶೀಲಿಸಲು ಕೇಂದ್ರ ಗೃಹ ಸಚಿವಾಲಯದ ನಾಲ್ವರು ಸದಸ್ಯರನ್ನೊಳಗೊಂಡ ಸತ್ಯ ಶೋಧನಾ ತಂಡ ಗುರುವಾರ ಪಶ್ಚಿಮ ಬಂಗಾಳಕ್ಕೆ ಆಗಮಿಸಿದೆ.

ಗೃಹ ಸಚಿವಾಲಯದ ಹೆಚ್ಚುವರಿ ಕಾರ್ಯದರ್ಶಿ ನೇತೃತ್ವದ ತಂಡ ರಾಜ್ಯ ಸಚಿವಾಲಯಕ್ಕೆ ಭೇಟಿ ನೀಡಿದ್ದು, ಡಿಜಿಪಿ ಮತ್ತು ಗೃಹ ಕಾರ್ಯದರ್ಶಿಯೊಂದಿಗೆ ಸಭೆ ನಡೆಸಿದೆ ಎಂಬುದು ಮೂಲಗಳಿಂದ ತಿಳಿದುಬಂದಿದೆ.

ಪಶ್ಚಿಮ ಬಂಗಾಳದಲ್ಲಿ ಚುನಾವಣೆ ನಂತರ ನಡೆದ ಹಿಂಸಾಚಾರದಲ್ಲಿ ಕೇಂದ್ರ ನಾಯಕರ ಕುಮ್ಮಕ್ಕು ಇದೆ ಎಂದು ಆರೋಪಿಸಿದ ಮಮತಾ ಬ್ಯಾನರ್ಜಿ, ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿ 24 ಗಂಟೆ ಕಳೆದಿಲ್ಲ, ಪತ್ರಗಳು, ಕೇಂದ್ರ ತಂಡವೊಂದು ಬರಲು ಆರಂಭಿಸಿದೆ.

English summary
West Bengal Chief Minister Mamata Banerjee on Thursday said 16 people have lost their lives in post-poll violence in the state, and announced a compensation of Rs 2 lakh each for their families.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
Metrics Calculation