ಡಿ.24 ರಂದು ವಿಶ್ವ ಭಾರತಿ ವಿವಿ ಶತಮಾನೋತ್ಸವ, ಮೋದಿ ಭಾಷಣ
ನವದೆಹಲಿ, ಡಿ. 22: ಡಿಸೆಂಬರ್ 24 ರಂದು ವಿಶ್ವ ಭಾರತಿ ವಿಶ್ವವಿದ್ಯಾಲಯದ ಶತಮಾನೋತ್ಸವ ಸಮಾರಂಭ ಉದ್ದೇಶಿಸಿ ಪ್ರಧಾನಿ ಭಾಷಣ ಮಾಡಲಿದ್ದಾರೆ.
ಪ್ರಧಾನಮಂತ್ರಿ ನರೇಂದ್ರ ಮೋದಿ 2020ರ ಡಿಸೆಂಬರ್ 24ರಂದು ಬೆಳಗ್ಗೆ 11 ಗಂಟೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಶಾಂತಿನಿಕೇತನದ ವಿಶ್ವ ಭಾರತಿ ವಿಶ್ವವಿದ್ಯಾಲಯದ ಶತಮಾನೋತ್ಸವ ಸಮಾರಂಭವನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಪಶ್ಚಿಮ ಬಂಗಾಳದ ರಾಜ್ಯಪಾಲರು ಮತ್ತು ಕೇಂದ್ರ ಶಿಕ್ಷಣ ಸಚಿವರು ಭಾಗವಹಿಸಲಿದ್ದಾರೆ ಎಂದು ಪ್ರಧಾನಿ ಸಚಿವಾಲಯ ಪ್ರಕಟಣೆ ಹೊರಡಿಸಿದೆ.
ಅಲಿಘಢ ಮುಸ್ಲಿಂ ವಿಶ್ವವಿದ್ಯಾಲಯದ (ಎಎಂಯು) ಶತಮಾನೋತ್ಸವ ಸಮಾರಂಭವನ್ನು ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಅವರು ಡಿಸೆಂಬರ್ 22ರಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿದರು ನಂತರ ವಿಶ್ವವಿದ್ಯಾಲಯದ ಶತಮಾನೋತ್ಸವ ಸ್ಮರಣಾರ್ಥ ಅಂಚೆ ಚೀಟಿಯನ್ನು ಸಹ ಬಿಡುಗಡೆ ಮಾಡಿದ್ದನ್ನು ಇಲ್ಲಿ ಸ್ಮರಿಸಬಹುದು.

ವಿಶ್ವ ಭಾರತಿ ಕುರಿತು:
ಗುರುದೇವ ರವೀಂದ್ರನಾಥ್ ಠ್ಯಾಗೂರ್ ಅವರು 1921ರಲ್ಲಿ ಇದನ್ನು ಸ್ಥಾಪಿಸಿದರು. ವಿಶ್ವ ಭಾರತಿ ದೇಶದ ಅತ್ಯಂತ ಹಳೆಯ ಕೇಂದ್ರೀಯ ವಿಶ್ವವಿದ್ಯಾಲಯವಾಗಿದೆ. 1951ರ ಮೇ ತಿಂಗಳಿನಲ್ಲಿ ವಿಶ್ವಭಾರತಿಯನ್ನು ಕೇಂದ್ರೀಯ ವಿಶ್ವವಿದ್ಯಾಲಯ ಎಂದು ಘೋಷಿಸಲಾಯಿತು ಮತ್ತು ಸಂಸತ್ತಿನ ಕಾಯ್ದೆಯ ಅನುಸಾರ 'ಆ ಸಂಸ್ಥೆಯನ್ನು ರಾಷ್ಟ್ರೀಯ ಪ್ರಾಮುಖ್ಯತಾ ಸಂಸ್ಥೆಯನ್ನಾಗಿ' ಮಾಡಲಾಯಿತು.

ಈ ವಿಶ್ವವಿದ್ಯಾಲಯ ಗುರುದೇವ ಠ್ಯಾಗೂರ್ ಅವರು ರೂಪಿಸಿದ ಶಿಕ್ಷಣ ಶಾಸ್ತ್ರದ ಮೇಲೆ ನಡೆಯುತ್ತಿದ್ದು, ಕ್ರಮೇಣ ಅದು ಬೇರೆಡೆ ಅಭಿವೃದ್ಧಿಗೊಂಡಿರುವ ಆಧುನಿಕ ವಿಶ್ವವಿದ್ಯಾಲಯಗಳಲ್ಲಿ ಅನುಸರಿಸುತ್ತಿರುವ ಮಾದರಿಗಳನ್ನು ಅನುಸರಿಸಲಾರಂಭಿಸಿತು. ಪ್ರಧಾನಮಂತ್ರಿ ಅವರು ಈ ವಿಶ್ವವಿದ್ಯಾಲಯದ ಕುಲಾಧಿಪತಿಯಾಗಿದ್ದಾರೆ.












Click it and Unblock the Notifications