Breaking; ಶಿಕ್ಷಕರ ನೇಮಕಾತಿ ಹಗರಣ: ಅರ್ಪಿತಾ ಮುಖರ್ಜಿ ಇಡಿ ಕಸ್ಟಡಿಗೆ
ಕೋಲ್ಕತ್ತಾ, ಜುಲೈ 25; ಪಶ್ಚಿಮ ಬಂಗಾಳದ ಸಂಪುಟ ಸಚಿವ ಪಾರ್ಥ ಚಟರ್ಜಿ ಅವರ ಆಪ್ತ ಸಹಾಯಕಿ ಅರ್ಪಿತಾ ಮುಖರ್ಜಿಯನ್ನು ಆಗಸ್ಟ್ 3 ರವರೆಗೆ ತನಿಖಾ ಸಂಸ್ಥೆ ಕಸ್ಟಡಿಗೆ ಕಳುಹಿಸಲಾಗಿದೆ.
ಪಶ್ಚಿಮ ಬಂಗಾಳದ ಸಂಪುಟ ಸಚಿವ ಪಾರ್ಥ ಚಟರ್ಜಿ ಆಪ್ತ ಸಹಾಯಕಿ ಅರ್ಪಿತಾ ಮುಖರ್ಜಿಯನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಶಿಕ್ಷಕರ ನೇಮಕಾತಿ ಹಗರಣದ ಸಂಬಂಧ ಶನಿವಾರ ಬಂಧಿಸಿದ್ದರು.
ಶುಕ್ರವಾರ ಅರ್ಪಿತಾ ಮುಖರ್ಜಿ ನಿವಾಸದ ಮೇಲೆ ದಾಳಿ ಮಾಡಿದ್ದ ಇಡಿ. ಅಧಿಕಾರಿಗಳು 21 ಕೋಟಿ ರುಪಾಯಿಗೂ ಹೆಚ್ಚು ಮೌಲ್ಯದ ಹಣವನ್ನು ವಶಪಡಿಸಿಕೊಂಡಿರುವುದಾಗಿ ಹೇಳಿದ್ದರು. ದಾಳಿ ಮಾಡಿದ ಒಂದು ದಿನದ ಬಳಿಕ ಅವರನ್ನು ಬಂಧಿಸಿರುವುದಾಗಿ ಇಡಿ ಹೇಳಿದೆ.

ಶುಕ್ರವಾರ ಇಡಿ ಅಧಿಕಾರಿಗಳು ದಕ್ಷಿಣ ಕೋಲ್ಕತ್ತಾ ವಸತಿ ಕ್ಯಾಂಪಸ್‌ನಲ್ಲಿರುವ ಅರ್ಪಿತಾ ಮುಖರ್ಜಿ ನಿವಾಸದ ಮೇಲೆ ದಾಳಿ ಮಾಡಿದ್ದರು. ಈ ವೇಳೆ 500 ರು. ಮತ್ತು 2000 ರು. ಮುಖಬೆಲೆಯ ಹಣದ ರಾಶಿ ಮತ್ತು ಬಂಡಲ್ ಮಾಡಿದ್ದ ಹಣವನ್ನು ವಶಕ್ಕೆ ಪಡೆದಿದ್ದಾರೆ. ಜೊತೆಗೆ ಜಾರಿ ನಿರ್ದೇಶನಾಲಯ ಸುಮಾರು 26 ಗಂಟೆಗಳ ಕಾಲ ವಿಚಾರಣೆ ನಡೆಸಿದ ನಂತರ ಸಚಿವ ಪಾರ್ಥ ಚಟರ್ಜಿ ಬಂಧಿಸಿತ್ತು.
ಅರ್ಪಿತಾ ಮುಖರ್ಜಿ ವಿಚಾರಣೆಗೆ ಸಹಕರಿಸುತ್ತಿಲ್ಲ ಮತ್ತು ಹಣದ ಮೂಲದ ಬಗ್ಗೆ ಕೇಳಿದ ಪ್ರಶ್ನೆಗಳಿಗೆ ಸರಿಯಾಗಿ ಉತ್ತರ ನೀಡುತ್ತಿಲ್ಲ. ಪ್ರಶ್ನೆಗಳಿಂದ ತಪ್ಪಿಸಿಕೊಳ್ಳುತ್ತಿದ್ದಾರೆ ಎಂದು ಇಡಿ ಅಧಿಕಾರಿಗಳು ಹೇಳಿದ್ದಾರೆ. ಇದೇ ಪ್ರಕರಣದಲ್ಲಿ ಬಂಗಾಳದ ಸಚಿವ ಪಾರ್ಥ ಚಟರ್ಜಿಯನ್ನು ಕೋಲ್ಕತ್ತಾ ನ್ಯಾಯಾಲಯವು ಎರಡು ದಿನಗಳ ಕಾಲ ಇಡಿ ಕಸ್ಟಡಿಗೆ ಕಳುಹಿಸಿತ್ತು.

ಚಟರ್ಜಿ 2014 ರಿಂದ 2021 ರವರೆಗೆ ರಾಜ್ಯ ಶಿಕ್ಷಣ ಸಚಿವರಾಗಿದ್ದರು. ಹಗರಣಕ್ಕೆ ಸಂಬಂಧಿಸಿದಂತೆ ಅವರನ್ನು ಈ ವರ್ಷದ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಕೇಂದ್ರೀಯ ತನಿಖಾ ದಳ (ಸಿಬಿಐ) ವಿಚಾರಣೆ ನಡೆಸಿತ್ತು. ಸರ್ಜಾಪುರ ರಸ್ತೆಯಲ್ಲಿ ಶಿಕ್ಷಕರ ನೇಮಕಾತಿಯಲ್ಲಿ ಅವ್ಯವಹಾರ ನಡೆದಿರುವ ಸಂದರ್ಭದಲ್ಲಿ ರಾಜ್ಯ ಶಿಕ್ಷಣ ಸಚಿವರಾಗಿದ್ದ ಟಿಎಂಸಿ ನಾಯಕ ಪಾರ್ಥ ಚಟರ್ಜಿಯನ್ನು ಇಂದು ವಿಶೇಷ ಇಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ನ್ಯಾಯಾಲಯ ವಿಚಾರಣೆ ಬಳಿಕ ಆಗಸ್ಟ್ 3 ರವರೆಗೆ ಜಾರಿ ನಿರ್ದೇಶನಾಲಯದ ಕಸ್ಟಡಿಗೆ ಕಳುಹಿಸಲಾಗಿದೆ.

ಅರ್ಪಿತಾ ಮುಖರ್ಜಿ ನಿವಾಸದಲ್ಲಿ ವಶಪಡಿಸಿಕೊಂಡ ನಗದನ್ನು ಸಾಗಿಸಲು ಇಡಿ ಅಧಿಕಾರಿಗಳು ಟ್ರಕ್ ಒಂದನ್ನು ಬಳಸಿಕೊಂಡರು. ಬಾಕ್ಸ್‌ಗಳನ್ನು ಹೊತ್ತ ಟ್ರಕ್ ಅರ್ಪಿತಾ ಮುಖರ್ಜಿ ಅವರ ನಿವಾಸವನ್ನು ತಲುಪಿತ್ತು. ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿಯಾಗಿರುವ ಚಟರ್ಜಿ, ಹಗರಣ ನಡೆದಾಗ ರಾಜ್ಯದ ಶಿಕ್ಷಣ ಸಚಿವರಾಗಿದ್ದರು. ಶುಕ್ರವಾರ ಬೆಳಿಗ್ಗೆಯಿಂದ ತನಿಖೆಗೆ ಸಂಬಂಧಿಸಿದಂತೆ ಸುಮಾರು 26 ಗಂಟೆಗಳ ವಿಚಾರಣೆ ನಂತರ ಅವರನ್ನು ಬಂಧಿಸಲಾಯಿತು. ಸಚಿವ ಪರೇಶ್ ಅಧಿಕಾರಿ, ಹಿರಿಯ ಅಧಿಕಾರಿಗಳು ಸೇರಿದಂತೆ ಹಲವರ ಮನೆಗಳ ಮೇಲೂ ಶುಕ್ರವಾರದಿಂದ ದಾಳಿ ನಡೆದಿದೆ.












Click it and Unblock the Notifications