ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪ.ಬಂಗಾಳದಲ್ಲಿ ಆರು ಬಿಜೆಪಿ ಕಾರ್ಯಕರ್ತರ ಮೇಲೆ ಬಾಂಬ್ ದಾಳಿ

|
Google Oneindia Kannada News

ಕೋಲ್ಕತ್ತಾ, ಮಾರ್ಚ್ 6: ಕೆಲವು ದುಷ್ಕರ್ಮಿಗಳು ನಡೆಸಿದ ಕಚ್ಚಾ ಬಾಂಬ್ ದಾಳಿಯಲ್ಲಿ ಆರು ಮಂದಿ ಬಿಜೆಪಿ ಕಾರ್ಯಕರ್ತರು ಗಾಯಗೊಂಡಿರುವ ಘಟನೆ ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯಲ್ಲಿ ನಡೆದಿದೆ. ಗಾಯಗೊಂಡವರಲ್ಲಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ.

ಶುಕ್ರವಾರ ರಾತ್ರಿ ಈ ಘಟನೆ ನಡೆದಿದೆ. ಮದುವೆಯಿಂದ ಬಿಜೆಪಿ ಕಾರ್ಯಕರ್ತರು ಹಿಂದಿರುಗುತ್ತಿದ್ದ ಸಂದರ್ಭ ಗುಂಪಿನ ಮೇಲೆ ದುಷ್ಕರ್ಮಿಗಳು ಏಕಾಏಕಿ ಬಾಂಬ್ ಎಸೆದಿದ್ದಾರೆ. ಗಾಯಗೊಂಡರವನ್ನು ತಕ್ಷಣವೇ ಆಸ್ಪತ್ರೆಗೆ ಸೇರಿಸಲಾಗಿದೆ.

 ಮತ ಹಾಕದ ಜನರನ್ನು ಮುಂದೆ ನೋಡಿಕೊಳ್ಳುತ್ತೇವೆ; ಟಿಎಂಸಿ ಶಾಸಕನ ಬೆದರಿಕೆ ಮತ ಹಾಕದ ಜನರನ್ನು ಮುಂದೆ ನೋಡಿಕೊಳ್ಳುತ್ತೇವೆ; ಟಿಎಂಸಿ ಶಾಸಕನ ಬೆದರಿಕೆ

ಶೋವನ್ ದೇವನಾಥ್, ವಿಕ್ರಮ್ ಶಿಲ್, ಅರ್ಪಣ್ ದೇವನಾಥ್, ಸ್ವಪನ್ ಕುರಾಲಿ, ಮಹಾದೇವ ನಾಯಕ್ ಹಾಗೂ ಇತರರು ಗಾಯಗೊಂಡಿದ್ದಾರೆ. ಇಬ್ಬರ ಸ್ಥಿತಿ ಗಂಭೀರವಾಗಿದೆ.

Six BJP Workers Injured In Crude Bomb Attack At West Bengal

ಈ ಬಾಂಬ್ ದಾಳಿ ಹಿಂದೆ ತೃಣಮೂಲ ಕಾಂಗ್ರೆಸ್‌ ಕೈವಾಡ ಇದೆ ಎಂದು ಬಿಜೆಪಿ ಕಾರ್ಯಕರ್ತರು ದೂರಿದ್ದಾರೆ. ಪೊಲೀಸರು ತನಿಖೆ ಮುಂದುವರೆಸಿದ್ದಾರೆ. ಇನ್ನು ಕೆಲವೇ ದಿನಗಳಲ್ಲಿ ಪಶ್ಚಿಮ ಬಂಗಾಳದಲ್ಲಿ ಚುನಾವಣೆ ಆರಂಭವಾಗಲಿದೆ. ಈ ಬಾರಿ ಟಿಎಂಸಿ ಹಾಗೂ ಬಿಜೆಪಿ ನಡುವೆ ಕಠಿಣ ಸ್ಪರ್ಧೆ ಏರ್ಪಟ್ಟಿದ್ದು, ಎಂಟು ಹಂತಗಳಲ್ಲಿ ಚುನಾವಣೆ ನಡೆಯಲಿದೆ. 294 ಕ್ಷೇತ್ರಗಳು ಚುನಾವಣೆ ಎದುರಿಸುತ್ತಿವೆ.

English summary
Six BJP workers injured in crude bomb attack at west Bengal’s South 24 Parganas district,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X