• search
  • Live TV
ಕೋಲ್ಕತಾ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಚುನಾವಣೆಗೂ ಮುನ್ನ ಗಂಗೂಲಿಗೇನು ರಾಜಕೀಯದಲ್ಲಿ ಆಸಕ್ತಿ!

|

ಕೋಲ್ಕತಾ, ಡಿ. 28: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಹಾಗೂ ಟೀಂ ಇಂಡಿಯಾದ ಮಾಜಿ ನಾಯಕ ಸೌರವ್ ಗಂಗೂಲಿ ಅವರು ಪಶ್ಚಿಮ ಬಂಗಾಳದ ರಾಜ್ಯಪಾಲ ಜಗದೀಪ್ ಧಂಖರ್ ಅವರನ್ನು ಭೇಟಿ ಮಾಡಿದ್ದಾರೆ. ಇವರಿಬ್ಬರ ಭೇಟಿ ಈಗ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ.

ಗಂಗೂಲಿ ಅವರು ರಾಜಕೀಯ ಪ್ರವೇಶಿಸಬಹುದೇ? ಯಾವ ಪಕ್ಷಕ್ಕೆ ಬೆಂಬಲ ವ್ಯಕ್ತಪಡಿಸಬಹುದು? ಎಂಬ ಪ್ರಶ್ನೆ ಮತ್ತೊಮ್ಮೆ ಮೂಡಿದೆ. ಆದರೆ, ರಾಜಭವನದ ಮೂಲಗಳ ಪ್ರಕಾರ, ಯಾವುದೇ ರಾಜಕೀಯ ಉದ್ದೇಶಿತ ಭೇಟಿ ಇದಾಗಿಲ್ಲ ಎಂದು ತಿಳಿದು ಬಂದಿದೆ. ಆದರೆ, ಇಬ್ಬರು ಒಂದು ಗಂಟೆಗೂ ಅಧಿಕ ಕಾಲ ಅನೇಕ ವಿಷಯಗಳ ಬಗ್ಗೆ ಚರ್ಚೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

1864ರಲ್ಲಿ ಸ್ಥಾಪನೆಯಾದ ಈಡನ್ ಗಾರ್ಡನ್ಸ್ ಮೈದಾನಕ್ಕೆ ಆಗಮಿಸುವಂತೆ ದಾದಾ(ಗಂಗೂಲಿ) ಆಹ್ವಾನ ನೀಡಿದ್ದು, ಸಂತಸದಿಂದ ಒಪ್ಪಿಕೊಂಡಿದ್ದೇನೆ ಎಂದು ರಾಜ್ಯಪಾಲರು ಟ್ವೀಟ್ ಮಾಡಿದ್ದಾರೆ.

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗಾಗಿ ಎಡಪಕ್ಷಗಳ ಜೊತೆ ಚುನಾವಣಾ ಮೈತ್ರಿ ಸಾಧಿಸಿವೆ. ಇನ್ನೊಂದೆಡೆ ಆಡಳಿತಾರೂಢ ಟಿಎಂಸಿ ವಿರುದ್ಧ ಬಿಜೆಪಿ ಸಮರ ಸಾರಿದೆ. ಈ ನಡುವೆ ಯಾವ ಪಕ್ಷ ಯಾವ ಸೆಲೆಬ್ರಿಟಿಗಳನ್ನು ಸೆಳೆಯಬಹುದು ಎಂಬ ಕುತೂಹಲ ಎಲ್ಲರಲ್ಲೂ ಮನೆ ಮಾಡಿದೆ. 2021ರಲ್ಲಿ ತಮಿಳುನಾಡು, ಕೇರಳ, ಅಸ್ಸಾಂ ಹಾಗೂ ಪುದುಚೇರಿ ಜೊತೆಗೆ ಮಾರ್ಚ್ -ಏಪ್ರಿಲ್ ತಿಂಗಳಲ್ಲಿ ಪಶ್ಚಿಮ ಬಂಗಾಳ ರಾಜ್ಯದ ವಿಧಾನಸಭೆಗೆ ಚುನಾವಣೆ ನಡೆಯಬೇಕಿದೆ.

English summary
BCCI president and former Indian cricket captain Sourav Ganguly held meeting with West Bengal Governor Jagdeep Dhankhar amid speculation of Ganguly joining politics.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X