• search
 • Live TV
ಕೋಲ್ಕತಾ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಪಶ್ಚಿಮ ಬಂಗಾಳದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ಲಾಕ್‌ಡೌನ್‌

|

ಕೊಲ್ಕತ್ತಾ, ಜುಲೈ 9: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ, ಪಶ್ವಿಮ ಬಂಗಾಳದಲ್ಲಿ ಮುಂದಿನ ಏಳು ದಿನಗಳ ಕಾಲ ಲಾಕ್‌ಡೌನ್ ಮಾಡಲು ಸಿಎಂ ಮಮತಾ ಬ್ಯಾನರ್ಜಿ ಘೋಷಿಸಿದ್ದಾರೆ.

   Eng vs WI 1st test : 4 ತಿಂಗಳುಗಳ ಬಳಿಕ ಅಂತಾರಾಷ್ಟ್ರೀಯ ಕ್ರಿಕೆಟ್ | Oneindia Kannada

   ಕಂಟೈನ್‌ಮೆಂಟ್ ಜೋನ್ ಮತ್ತು ಹೆಚ್ಚು ಸೋಂಕಿತರನ್ನು ಹೊಂದಿರುವ ಪ್ರದೇಶಗಳಲ್ಲಿ ಏಳು ದಿನಗಳ ಕಾಲ ಕಟ್ಟುನಿಟ್ಟಿನ ಲಾಕ್‌ಡೌನ್‌ ಜಾರಿ ಮಾಡಿ, ಸರ್ಕಾರಿ ನಿಯಮಗಳನ್ನು ಉಲ್ಲಂಘಿಸಿದವರ ವಿರುದ್ಧ ಕ್ರಮ ಜರುಗಿಸಿ ಎಂದು ಬುಧವಾರ ಪೊಲೀಸ್ ಇಲಾಖೆಗೆ ಮಮತಾ ಸೂಚಿಸಿದ್ದಾರೆ.

   ವಲಸೆ ಕಾರ್ಮಿಕರು ಬಂಗಾಳ ತೊರೆಯಲ್ಲ ಏಕೆ? ಕಾರಣ ಹೇಳಿದ ಮಮತಾ ಬ್ಯಾನರ್ಜಿ

   ಗುರುವಾರ ಸಂಜೆ 5 ಗಂಟೆಯಿಂದ ಈ ಆದೇಶ ಜಾರಿಯಾಗಲಿದ್ದು, ಅಗತ್ಯ ವಸ್ತುಗಳ ಪೂರೈಕೆ ಹಾಗೂ ವೈದ್ಯಕೀಯ ತುರ್ತು ಸೇವೆಗೆ ಮಾತ್ರ ಅವಕಾಶ ನೀಡಲು ಆದೇಶಿಸಿದ್ದಾರೆ.

   ಕಳೆದ ಒಂದು ವಾರದಿಂದ ಪಶ್ಚಿಮ ಬಂಗಾಳದಲ್ಲಿ ಹೊಸ ಕೇಸ್‌ಗಳ ಸಂಖ್ಯೆ ಹೆಚ್ಚಿದೆ. ಸತತ ಮೂರನೇ ದಿನ 800ಕ್ಕೂ ಅಧಿಕ ಸೋಂಕಿತರು ವರದಿಯಾಗಿದ್ದಾರೆ.

   ಜುಲೈ 8 ರಂದು ಪಶ್ಚಿಮ ಬಂಗಾಳದಲ್ಲಿ 986 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. 23 ಜನರು ಮೃತಪಟ್ಟಿದ್ದಾರೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 24823ಕ್ಕೆ ಏರಿಕೆಯಾಗಿದೆ. ಅದರಲ್ಲಿ 16,291 ಜನರು ಗುಣಮುಖರಾಗಿದ್ದಾರೆ. ರಾಜ್ಯದಲ್ಲಿ ಇನ್ನು 7,705 ಪ್ರಕರಣಗಳು ಸಕ್ರಿಯವಾಗಿದೆ. ರಾಜ್ಯದಲ್ಲಿ ಒಟ್ಟು 827 ಜನರು ಕೊರೊನಾಗೆ ಬಲಿಯಾಗಿದ್ದಾರೆ.

   English summary
   Lockdown will be imposed in containment zones in West Bengal for 7 days, starting 5 pm Thursday, says CM Mamata Banerjee.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X