ಪಶ್ಚಿಮ ಬಂಗಾಳ ಬಿಜೆಪಿ ಶಾಸಕನ ಸಾವಿನ ಪ್ರಕರಣಕ್ಕೆ ಟ್ವಿಸ್ಟ್

ಕೊಲ್ಕತ್ತಾ, ಜುಲೈ 13: ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ದೇಬೇಂದ್ರ ನಾಥ್ ರೇ ಸಾವಿನ ಪ್ರಕರಣಕ್ಕೆ ತಿರುವು ಸಿಕ್ಕಿದೆ. ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಶವ ಪತ್ತೆಯಾಗಿತ್ತು. ಕುಟುಂಬಸ್ಥರು, ಸ್ಥಳಿಯರು ಇದು ಕೊಲೆ ಎಂದು ದೂರಿದ್ದರು.

Recommended Video

      Rashid Khan : ಅಫ್ಘಾನಿಸ್ತಾನ ವಿಶ್ವಕಪ್ ಗೆದ್ದ ನಂತರವೇ ಮದುವೆಯಾಗುತ್ತೇನೆ | Oneindia Kannada

      ಆದ್ರೆ, ದೇಬೇಂದ್ರ ನಾಥ್ ರೇ ಅವರ ಶರ್ಟ್ ಜೇಬಿನಲ್ಲಿ ಡೆತ್ ನೋಟ್ ಲಭ್ಯವಾಗಿದೆ ಎಂದು ಪಶ್ಚಿಮ ಬಂಗಾಳ ಪೊಲೀಸರು ಮಾಹಿತಿ ನೀಡಿದ್ದಾರೆ.

      ಡೆತ್‌ನೋಟ್‌ನಲ್ಲಿ ತನ್ನ ಸಾವಿಗೆ ಮೂವರು ಕಾರಣ ಎಂದು ಹೆಸರುಗಳನ್ನು ಸೂಚಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಆದರೆ, ಆ ಮೂವರು ಯಾರು ಎಂದು ಹೆಸರು ಬಹಿರಂಗಪಡಿಸಿಲ್ಲ.

      ಸಾವಿನ ಕುರಿತು ಹೆಚ್ಚಿನ ತನಿಖೆ ಮಾಡುತ್ತಿರುವ ಪೊಲೀಸರು ಶ್ವಾನವನ್ನು ಬಳಸಿ ಪರಿಶೀಲನೆ ಮಾಡಿದ್ದಾರೆ. ಸ್ಥಳಕ್ಕೆ ವಿಧಿವಿಜ್ಞಾನ ತಜ್ಞರ ಭೇಟಿ ನೀಡಿ ಎಲ್ಲಾ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ. ಸದ್ಯಕ್ಕೆ ಮರಣೋತ್ತರ ಪರೀಕ್ಷೆ ಮಾಡಿಲ್ಲ.

      ಸದ್ಯಕ್ಕೆ ಇದು ಕೊಲೆನಾ ಅಥವಾ ಆತ್ಮಹತ್ಯೆನಾ ಎಂಬುದು ಸ್ಪಷ್ಟವಾಗಿಲ್ಲ. ಆದರೆ, ಸ್ಥಳಿಯರು, ಕುಟುಂಬಸ್ಥರು ಕೊಲೆ ಎಂದು ದೂರಿದ್ದಾರೆ. ಈ ಕಡೆ ದೇಬೇಂದ್ರ ನಾಥ್ ರೇ ಜೇಬಿನಲ್ಲಿ ಡೆತ್‌ನೋಟ್ ಸಿಕ್ಕಿದೆ. ಇದೆಲ್ಲವನ್ನು ಆಧರಿಸಿ ಹೆಚ್ಚಿನ ತನಿಖೆ ಮಾಡಲಾಗುತ್ತಿದೆ ಎಂದು ರಾಯಗಂಜ್ ಎಸ್ಪಿ ಸುಮಿತ್ ಕುಮಾರ್ ತಿಳಿಸಿದ್ದಾರೆ.

      suicide note found in MLA Debendra Nath Roy pocket

      ಈ ಕುರಿತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಹಾಗೂ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ಅವರು ದೇಬೇಂದ್ರ ನಾಥ್ ರೇ ಸಾವನ್ನು ಕ್ರೂರ ಹತ್ಯೆ ಎಂದು ಖಂಡಿಸಿದ್ದಾರೆ.

      ದೇಬೇಂದ್ರ ನಾಥ್ ರೇ ಅವರು 2016 ರಲ್ಲಿ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್ವಾದಿ) ಪಕ್ಷದಿಂದ ಟಿಕೆಟ್ ಪಡೆದು ಹೆಮ್ತಾಬಾದ್ ವಿಧಾನಸಭಾ ‌ಕ್ಷೇತ್ರದಲ್ಲಿಸ ಸ್ಪರ್ಧಿಸಿ ಜಯಗಳಿಸಿದ್ದರು. ಆದರೆ 2019ರ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಸೇರ್ಪಡೆಯಾಗಿ ಗೆದ್ದಿದ್ದರು.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+