ನಾಮಪತ್ರದಲ್ಲಿ ಕ್ರಿಮಿನಲ್ ಪ್ರಕರಣಗಳನ್ನು ಮುಚ್ಚಿಟ್ಟರೇ ಮಮತಾ ಬ್ಯಾನರ್ಜಿ?
ಕೋಲ್ಕತ್ತಾ, ಮಾರ್ಚ್ 15: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಾಮಪತ್ರದಲ್ಲಿ ಕ್ರಿಮಿನಲ್ ಪ್ರಕರಣಗಳನ್ನು ಮುಚ್ಚಿಟ್ಟಿದ್ದಾರೆಂದು ಚುನಾವಣಾ ಆಯೋಗಕ್ಕೆ ಸುವೇಂದು ಅಧಿಕಾರಿ ದೂರು ನೀಡಿದ್ದಾರೆ.
ಮಮತಾ ಬ್ಯಾನರ್ಜಿ ವಿರುದ್ಧ ದಾಖಲಾಗಿರುವ 6 ಪ್ರಕರಣದ ಎಫ್‌ಐಆರ್‌ಗಳನ್ನು ಮುಚ್ಚಿಡಲಾಗಿದೆ. ನಂದಿಗ್ರಾಮ ವಿಧಾನಸಭಾ ಕ್ಷೇತ್ರಕ್ಕೆ ಅವರು ಸಲ್ಲಿಸಿರುವ ನಾಮಪತ್ರದಲ್ಲಿ ಈ ಬಗ್ಗೆ ಯಾವುದೇ ಮಾಹಿತಿಯನ್ನು ನೀಡಿಲ್ಲ.
ಉದ್ದೇಶಪೂರ್ವಕವಾಗಿ ಚುನಾವಣಾ ನೀತಿ ಸಂಹಿತೆ ವಿರುದ್ಧ ಮಮತಾ ಬ್ಯಾನರ್ಜಿ ನಡೆದುಕೊಂಡಿದ್ದಾರೆ ಎಂದು ಸುವೇಂದು ತಿಳಿಸಿದ್ದಾರೆ.

ಸುವೇಂದು ಅಧಿಕಾರಿ ನಂದಿಗ್ರಾಮ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿದ್ದಾರೆ. ಈ ಬಗ್ಗೆ ಹೇಳಿಕೆ ನೀಡಿರುವ ಅವರು, 2018ರಲ್ಲಿ ಅಸ್ಸಾಂನಲ್ಲಿ ದಾಖಲಾಗಿರುವ ಐದು ಹಾಗೂ ಸಿಬಿಐ ದಾಖಲಿಸಿರುವ ಒಂದು ಪ್ರಕರಣವನ್ನು ಮುಚ್ಚಿಡುತ್ತಿದ್ದಾರೆ.
ಈ ಪ್ರಕರಣಗಳ ರದ್ದು ಕುರಿತು ಕೋಲ್ಕತ್ತಾ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರೂ, ಕೋರ್ಟ್ ಮಾನ್ಯ ಮಡಿಲ್ಲ, ಎಂದು ಸುವೇಂದು ಅಧಿಕಾರಿ ಹೇಳಿದ್ದು ಈ ಕುರಿತು ಎಲ್ಲಾ ದಾಖಲೆಗಳನ್ನು ಚುನಾವಣಾ ಆಯೋಗಕ್ಕೆ ಸಲ್ಲಿದ್ದಾರೆ.
ತಾನು ನೀಡಿರುವ ದಾಖಲೆಗಳನ್ನು ಆಯೋಗ ಪರಿಶೀಲಿಸಿ ಮುಂದಿನ ಕ್ರಮ ತೆಗೆದುಕೊಳ್ಳಬೇಕು, ಮೋದಿ ಅಥವಾ ಮಮತಾ ಯಾರೇ ಇದ್ದರೂ ನಿಯಮಗಳು ಎಲ್ಲರಿಗೂ ಒಂದೇ, ಹೀಗಾಗಿ ಆಯೋಗ ಈ ಬಗ್ಗೆ ಕ್ರಮ ತೆಗೆದುಕೊಳ್ಳುವ ಭರವಸೆ ಇದೆ ಎಂದು ಸುವೇಂದು ತಿಳಿಸಿದ್ದಾರೆ.
ಒಂದು ಕಾಲದಲ್ಲಿ ಸುವೇಂದು ಅಧಿಕಾರಿ ಮಮತಾ ಅವರ ಆಪ್ತರಾಗಿದ್ದರು ಆದರೆ, ಮಮತಾ ಬ್ಯಾನರ್ಜಿ ಅಳಿಯ ಅಭಿಷೇಕ್ ಬ್ಯಾನರ್ಜಿ ನಡುವಿನ ಭಿನ್ನಾಭಿಪ್ರಾಯಗಳಿಂದಾಗಿ ಟಿಎಂಸಿಯಿಂದ ಹೊರಬಂದು ಬಿಜೆಪಿಯಿಂದ ಸ್ಪರ್ಧಿಸಿದ್ದಾರೆ.












Click it and Unblock the Notifications