Breaking: ಶಿಕ್ಷಕರ ನೇಮಕಾತಿ ಹಗರಣ; ಪಶ್ಚಿಮ ಬಂಗಾಳ ಸಚಿವನ ಬಂಧನ
ಕೋಲ್ಕತ್ತಾ,ಜುಲೈ. 23: ಪಶ್ಚಿಮ ಬಂಗಾಳದ ಶಿಕ್ಷಕರ ನೇಮಕಾತಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಮಾಡಿದ ಆರೋಪದ ಮೇಲೆ ಜಾರಿ ನಿರ್ದೇಶನಾಲಯವು ಪಶ್ಚಿಮ ಬಂಗಾಳದ ಸಚಿವ ಪಾರ್ಥ ಚಟರ್ಜಿ ಅವರನ್ನು ಶನಿವಾರ ಬಂಧಿಸಿದೆ.
ಸಚಿವರ ಆಪ್ತೆ ಅರ್ಪಿತಾ ಮುಖರ್ಜಿಯಿಂದ 20 ಕೋಟಿ ನಗದು ಹಣ ವಶಪಡಿಸಿಕೊಂಡ ಒಂದು ದಿನದ ನಂತರ ಈ ಬಂಧನ ನಡೆದಿದೆ. ಶುಕ್ರವಾರ ರಾತ್ರಿಯ ವಿಚಾರಣೆಯ ನಂತರ ಪಾರ್ಥ ಚಟರ್ಜಿ ಅವರನ್ನು ಬಂಧಿಸಲಾಗಿದೆ. ಅವರನ್ನು ಇಡಿ ಕಚೇರಿಗೆ ಕರೆದೊಯ್ಯಲಾಗುತ್ತಿದೆ ಎಂದು ಮೂಲಗಳು ತಿಳಿದಿವೆ.
ಪ್ರಸ್ತುತ ಕೈಗಾರಿಕೆಗಳು ಮತ್ತು ವಾಣಿಜ್ಯ ಸಚಿವರಾಗಿರುವ ಪಾರ್ಥ ಚಟರ್ಜಿ ಅವರು ಶಿಕ್ಷಕರ ನೇಮಕಾತಿ ಹಗರಣ ನಡೆದಾಗ ಶಿಕ್ಷಣ ಖಾತೆಯನ್ನು ಹೊಂದಿದ್ದರು. ಪಾರ್ಥ ಚಟರ್ಜಿ ಅವರ ಆಪ್ತೆ ಅರ್ಪಿತಾ ಮುಖರ್ಜಿ ಮನೆಯಿಂದ ಜಾರಿ ನಿರ್ದೇಶನಾಲಯ ಶುಕ್ರವಾರ 20 ಕೋಟಿ ರಾಶಿ ರಾಶಿ ಹಣ ವಶಪಡಿಸಿಕೊಂಡಿದೆ.

ಈ ಹಣವು ಎಸ್‌ಎಸ್‌ಸಿ ಹಗರಣದ ಅಪರಾಧದ ಆದಾಯ ಎಂದು ಶಂಕಿಸಲಾಗಿದೆ. ಅರ್ಪಿತಾ ಮುಖರ್ಜಿ ಅವರ ಮನೆಯಿಂದ ದಾಳಿಯ ವೇಳೆ 20 ಕ್ಕೂ ಹೆಚ್ಚು ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತನಿಖಾ ಸಂಸ್ಥೆ ಹೇಳಿಕೆಯಲ್ಲಿ ತಿಳಿಸಿದೆ. ಪಾರ್ಥ ಚಟರ್ಜಿಯ ಹೊರತಾಗಿ ಇಡಿ ಪ್ರಸ್ತುತ ಶಿಕ್ಷಣ ರಾಜ್ಯ ಸಚಿವ ಪರೇಶ್ ಸಿ ಅಧಿಕಾರಿ, ಶಾಸಕ ಮಾಣಿಕ್ ಭಟ್ಟಾಚಾರ್ಯ ಮತ್ತು ಇತರರ ಮೇಲೂ ದಾಳಿ ನಡೆಸಿತ್ತು.

ಪಶ್ಚಿಮ ಬಂಗಾಳದ ಸಚಿವ ಪಾರ್ಥ ಚಟರ್ಜಿ ಆಪ್ತರಾದ ಅರ್ಪಿತಾ ಮುಖರ್ಜಿ ಮನೆ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ಮಾಡಿ ಸುಮಾರು 20 ಕೋಟಿ ಹಣ ವಶಪಡಿಸಿಕೊಂಡ ನಂತರ ಸಚಿವ ಪಾರ್ಥ ಚಟರ್ಜಿ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಜೊತೆ ಅರ್ಪಿತಾ ಮುಖರ್ಜಿ ಇರುವ ಪೋಟೋಗಳನ್ನು ಹಂಚಿಕೊಂಡು ಬಿಜೆಪಿಯ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಟಿಎಂಸಿ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ವಿರುದ್ಧ ಟೀಕೆ ಮಾಡಿದ್ದರು. s












Click it and Unblock the Notifications