ಶಿಕ್ಷಕರ ನೇಮಕಾತಿ ಹಗರಣ: ಸಚಿವ ಪಾರ್ಥ ಚಟರ್ಜಿ ಆಪ್ತ ಸಹಾಯಕಿ ಅರ್ಪಿತಾ ಮುಖರ್ಜಿ ಬಂಧನ

ಕೋಲ್ಕತ್ತಾ, ಜುಲೈ 23: ಪಶ್ಚಿಮ ಬಂಗಾಳದ ಸಂಪುಟ ಸಚಿವ ಪಾರ್ಥ ಚಟರ್ಜಿ ಅವರ ಆಪ್ತ ಸಹಾಯಕಿ ಅರ್ಪಿತಾ ಮುಖರ್ಜಿ ಅವರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಶನಿವಾರ ಬಂಧಿಸಿದ್ದಾರೆ.

ಶುಕ್ರವಾರ ಅರ್ಪಿತಾ ಮುಖರ್ಜಿ ನಿವಾಸದ ಮೇಲೆ ದಾಳಿ ಮಾಡಿದ್ದ ಇ.ಡಿ. ಅಧಿಕಾರಿಗಳು 21 ಕೋಟಿ ರುಪಾಯಿಗೂ ಹೆಚ್ಚು ಮೌಲ್ಯದ ಹಣವನ್ನು ವಶಪಡಿಸಿಕೊಂಡಿರುವುದಾಗಿ ಹೇಳಿದ್ದರು. ದಾಳಿ ಮಾಡಿದ ಒಂದು ದಿನದ ಬಳಿಕ ಅವರನ್ನು ಬಂಧಿಸಿರುವುದಾಗಿ ಇ.ಡಿ. ಹೇಳಿದೆ.

ಶುಕ್ರವಾರ, ಇ.ಡಿ ಅಧಿಕಾರಿಗಳು ದಕ್ಷಿಣ ಕೋಲ್ಕತ್ತಾ ವಸತಿ ಕ್ಯಾಂಪಸ್‌ನಲ್ಲಿರುವ ಅರ್ಪಿತಾ ಮುಖರ್ಜಿ ನಿವಾಸದ ಮೇಲೆ ದಾಳಿ ಮಾಡಿದ್ದರು. 500 ರು. ಮತ್ತು 2000 ರು. ಮುಖಬೆಲೆಯ ಹಣದ ರಾಶಿ ಮತ್ತು ಬಂಡಲ್ ಮಾಡಿದ್ದ ಹಣವನ್ನು ಕಂಡು ಅಧಿಕಾರಿಗಳೇ ದಂಗಾಗಿದ್ದರು.

The ED Arrested Bengal Minister Partha Chatterjees Aide Arpita Mukherjee

ಅರ್ಪಿತಾ ಮುಖರ್ಜಿ ಅವರು ವಿಚಾರಣೆಗೆ ಸಹಕರಿಸುತ್ತಿಲ್ಲ ಮತ್ತು ಹಣದ ಮೂಲದ ಬಗ್ಗೆ ಕೇಳಿದ ಪ್ರಶ್ನೆಗಳಿಗೆ ಸರಿಯಾಗಿ ಉತ್ತರ ನೀಡುತ್ತಿಲ್ಲ. ಪ್ರಶ್ನೆಗಳಿಂದ ತಪ್ಪಿಸಿಕೊಳ್ಳುತ್ತಿದ್ದಾರೆ ಎಂದು ಇಡಿ ಅಧಿಕಾರಿಗಳು ಹೇಳಿದ್ದಾರೆ.

ಇದೇ ಪ್ರಕರಣದಲ್ಲಿ ಬಂಗಾಳದ ಸಚಿವ ಪಾರ್ಥ ಚಟರ್ಜಿ ಅವರನ್ನು ಕೋಲ್ಕತ್ತಾ ನ್ಯಾಯಾಲಯವು ಎರಡು ದಿನಗಳ ಕಾಲ ಇ.ಡಿ. ಕಸ್ಟಡಿಗೆ ಕಳುಹಿಸಿದೆ. ಜಾರಿ ನಿರ್ದೇಶನಾಲಯ ಸುಮಾರು 26 ಗಂಟೆಗಳ ಕಾಲ ವಿಚಾರಣೆ ನಡೆಸಿದ ನಂತರ ಸಚಿವ ಪಾರ್ಥ ಚಟರ್ಜಿ ಅವರನ್ನು ಬಂಧಿಸಲಾಯಿತು.

ವಿಚಾರಣೆಗೆ ಸಹಕರಿಸದ ಪಾರ್ಥ ಚಟರ್ಜಿ

ಶುಕ್ರವಾರ ಬೆಳಗ್ಗೆಯಿಂದ ವಿಚಾರಣೆ ನಡೆಸುತ್ತಿದ್ದ ಇಡಿ ಅಧಿಕಾರಿಗಳಿಗೆ ಚಟರ್ಜಿ ಸಹಕರಿಸುತ್ತಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅವರನ್ನು ಜೋಕಾದಲ್ಲಿರುವ ಇಎಸ್‌ಐ ಆಸ್ಪತ್ರೆಗೆ ಕರೆದೊಯ್ದು ವೈದ್ಯಕೀಯ ತಪಾಸಣೆ ನಡೆಸಲಾಯಿತು.

The ED Arrested Bengal Minister Partha Chatterjees Aide Arpita Mukherjee

ಚಟರ್ಜಿ ಅವರು 2014 ರಿಂದ 2021 ರವರೆಗೆ ರಾಜ್ಯ ಶಿಕ್ಷಣ ಸಚಿವರಾಗಿದ್ದರು. ಹಗರಣಕ್ಕೆ ಸಂಬಂಧಿಸಿದಂತೆ ಅವರನ್ನು ಈ ವರ್ಷದ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಕೇಂದ್ರೀಯ ತನಿಖಾ ದಳ (ಸಿಬಿಐ) ಗ್ರಿಲ್ ಮಾಡಿತ್ತು.

ಶಿಕ್ಷಕರ ನೇಮಕಾತಿಯಲ್ಲಿ ಅವ್ಯವಹಾರ ನಡೆದಿರುವ ಸಂದರ್ಭದಲ್ಲಿ ರಾಜ್ಯ ಶಿಕ್ಷಣ ಸಚಿವರಾಗಿದ್ದ ಟಿಎಂಸಿ ನಾಯಕ ಪಾರ್ಥ ಚಟರ್ಜಿಯನ್ನು ಸೋಮವಾರ ವಿಶೇಷ ಇಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು.

ವಶ ಪಡಿಸಿಕೊಂಡ ಹಣ ಟ್ರಕ್‌ನಲ್ಲಿ ಸಾಗಿಸಿದ ಇ.ಡಿ

ಅರ್ಪಿತಾ ಮುಖರ್ಜಿ ನಿವಾಸದಲ್ಲಿ ವಶಪಡಿಸಿಕೊಂಡ ನಗದನ್ನು ಸಾಗಿಸಲು ಇ.ಡಿ. ಅಧಿಕಾರಿಗಳು ಟ್ರಕ್ ಒಂದನ್ನು ಬಳಸಿಕೊಂಡರು. ಬಾಕ್ಸ್‌ಗಳನ್ನು ಹೊತ್ತ ಟ್ರಕ್ ಅರ್ಪಿತಾ ಮುಖರ್ಜಿ ಅವರ ನಿವಾಸವನ್ನು ತಲುಪಿತ್ತು.

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿಯಾಗಿರುವ ಚಟರ್ಜಿ, ಹಗರಣ ನಡೆದಾಗ ರಾಜ್ಯದ ಶಿಕ್ಷಣ ಸಚಿವರಾಗಿದ್ದರು. ಶುಕ್ರವಾರ ಬೆಳಿಗ್ಗೆಯಿಂದ ತನಿಖೆಗೆ ಸಂಬಂಧಿಸಿದಂತೆ ಸುಮಾರು 26 ಗಂಟೆಗಳ ಗ್ರಿಲ್ಲಿಂಗ್ ನಂತರ ಅವರನ್ನು ಬಂಧಿಸಲಾಯಿತು. ಸಚಿವ ಪರೇಶ್ ಅಧಿಕಾರಿ, ಹಿರಿಯ ಅಧಿಕಾರಿಗಳು ಸೇರಿದಂತೆ ಹಲವರ ಮನೆಗಳ ಮೇಲೂ ಶುಕ್ರವಾರದಿಂದ ದಾಳಿ ನಡೆದಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+