ಮಮತಾ ಸಂಬಂಧಿ ಮುಂದಿನ ಸಿಎಂ ಎಂದು ಹೇಳಿ ಗೊಂದಲ ಸೃಷ್ಟಿಗೆ ಯತ್ನ
ಕೋಲ್ಕತ್ತ, ಫೆಬ್ರವರಿ 01: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋದರಳಿಯ ಮುಂದಿನ ಮುಖ್ಯಮಂತ್ರಿ ಎಂದು ಹೇಳುವ ಮೂಲಕ ಗೊಂದಲ ಸೃಷ್ಟಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ತೃಣಮೂಲ ಕಾಂಗ್ರೆಸ್ ಆರೋಪಿಸಿದೆ.
ಸುದ್ದಿಗಾರರೊಂದಿಗೆ ಮಾತನಾಡಿದ ಹಿರಿಯ ಟಿಎಂಸಿ ಸಂಸದ ಹಾಗೂ ವಕ್ತಾರ ಸೌಗತ ರಾಯ್, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ ಸ್ಪರ್ಧಿಸುವುದರೊಂದಿಗೆ ಅವರೇ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಮತ್ತೆ ಪಕ್ಷ ಸ್ಪಷ್ಟಪಡಿಸುತ್ತಿದೆ ಎಂದರು.
ಬಿಜೆಪಿ ಮುಖಂಡ ರಾಜಿಬ್ ಬ್ಯಾನರ್ಜಿ ಯಂತಹ ದ್ರೋಹಿಗಳು, ಅಧಿಕಾರದಲ್ಲಿದ್ದಾಗ ಎಲ್ಲಾ ಅನುಕೂಲ ಪಡೆದು, ಚುನಾವಣೆ ಹತ್ತಿರ ಬರುತ್ತಿದ್ದಂತೆಯೇ ಇದೀಗ ಪಕ್ಷವನ್ನು ಹಾಳು ಮಾಡುವ ದೃಷ್ಟಿಯಿಂದ ಬಿಜೆಪಿ ಸೇರಿದ್ದಾರೆ ಎಂದು ರಾಯ್ ವಾಗ್ದಾಳಿ ನಡೆಸಿದರು. ಚುನಾವಣೆ ಉದ್ದೇಶದಿಂದ ರಾಜ್ಯಕ್ಕೆ ಬರುತ್ತಿರುವ ಮುಖಂಡರು ಜನರನ್ನು ಹಾದಿ ತಪಿಸುತ್ತಿದ್ದಾರೆ ಎಂದು ಟಿಎಂಸಿ ಮುಖಂಡ ಚಂದ್ರಿಮಾ ಭಟ್ಟಾಚಾರ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಮತಾ ಬ್ಯಾನರ್ಜಿ ಮೂರನೇ ಬಾರಿಗೆ ಮುಖ್ಯಮಂತ್ರಿಯಾಗಲಿದ್ದಾರೆ ಎಂಬುದು ಪ್ರತಿಯೊಬ್ಬರಿಗೂ ಗೊತ್ತಿದೆ. ಆ ರೀತಿಯಲ್ಲಿ ಅಮಿತ್ ಶಾ ಹೇಗೆ ಹೇಳುತ್ತಾರೆ? ಅಭಿಷೇಕ್ ಅವರನ್ನು ಮುಂದಿನ ಮುಖ್ಯಮಂತ್ರಿ ಮಾಡುವ ಬಗ್ಗೆ ಪಕ್ಷದಲ್ಲಿ ಯಾವುದೇ ರೀತಿಯ ಮಾತುಕತೆಗಳು ನಡೆದಿಲ್ಲ. ಗೊಂದಲ ಸೃಷ್ಟಿಸುವ ಉದ್ದೇಶದಿಂದ ಇಂತಹ ಹೇಳಿಕೆಗಳನ್ನು ನೀಡಲಾಗುತ್ತಿದೆ ಎಂದು ರಾಯ್ ಹೇಳಿದರು.
ಹೌರಾದಲ್ಲಿ ಭಾನುವಾರ ಬಿಜೆಪಿ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅಮಿತ್ ಶಾ, ಮಮತಾ ಬ್ಯಾನರ್ಜಿ ಅವರ ಸೋದರಳಿಯನ್ನು ಮುಂದಿನ ಬಂಗಾಳದ ಮುಖ್ಯಮಂತ್ರಿ ಮಾಡುವುದು ಟಿಎಂಸಿಯ ಅಜೆಂಡವಾಗಿದೆ ಎಂದು ಹೇಳಿದ್ದರು.












Click it and Unblock the Notifications