ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಟೈಮ್ಸ್ ಸಿ-ವೋಟರ್ ಚುನಾವಣಾ ಪೂರ್ವ ಸಮೀಕ್ಷೆ: ಪಶ್ಚಿಮ ಬಂಗಾಳದಲ್ಲಿ ಟಿಎಂಸಿಗೆ ಅಧಿಕಾರ

|
Google Oneindia Kannada News

ಕೋಲ್ಕತ್ತಾ, ಮಾರ್ಚ್.08: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ತೃಣಮೂಲ ಕಾಂಗ್ರೆಸ್ ಪಕ್ಷವು ಅಧಿಕಾರ ಉಳಿಸಿಕೊಳ್ಳಲಿದೆ ಎಂದು ಟೈಮ್ಸ್ ನೌ ಮತ್ತು ಸಿ-ವೋಟರ್ ನಡೆಸಿದ ಚುನಾವಣಾ ಸಮೀಕ್ಷೆ ವರದಿ ಮಾಡಿದೆ.

ಪಶ್ಚಿಮ ಬಂಗಾಳದಲ್ಲಿ ಆಡಳಿತ ನಡೆಸುತ್ತಿರುವ ಟಿಎಂಸಿ ಪಕ್ಷವು 2021ನೇ ವಿಧಾನಸಭಾ ಚುನಾವಣೆಯಲ್ಲಿ 294 ಕ್ಷೇತ್ರಗಳ ಪೈಕಿ 146 ರಿಂದ 162 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಚುನಾವಣಾ ಪೂರ್ವ ಸಮೀಕ್ಷಾ ವರದಿ ಹೇಳಿದೆ. ಕಳೆದ 2016ರ ವಿಧಾನಸಭಾ ಚನಾವಣೆಯಲ್ಲಿ ಇದೇ ಟಿಎಂಸಿ ಪಕ್ಷವು 211 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿತ್ತು.

ABP-CNX ಚುನಾವಣಾಪೂರ್ವ ಸಮೀಕ್ಷೆ: ಪಶ್ಚಿಮ ಬಂಗಾಳದಲ್ಲಿ ಹೇಗಿದೆ ಜನಾಭಿಪ್ರಾಯ?ABP-CNX ಚುನಾವಣಾಪೂರ್ವ ಸಮೀಕ್ಷೆ: ಪಶ್ಚಿಮ ಬಂಗಾಳದಲ್ಲಿ ಹೇಗಿದೆ ಜನಾಭಿಪ್ರಾಯ?

294 ವಿಧಾನಸಭಾ ಕ್ಷೇತ್ರಗಳ ಪೈಕಿ ತೃಣಮೂಲ ಕಾಂಗ್ರೆಸ್ ಪಕ್ಷವು 291 ಕ್ಷೇತ್ರಗಳಿಗೆ ತನ್ನ ಎಲ್ಲ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ಭಾರತೀಯ ಜನತಾ ಪಕ್ಷ 57 ವಿಧಾನಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗಿದೆ. ರಾಜ್ಯದಲ್ಲಿ ಎಡಪಕ್ಷಗಳ ಜೊತೆ ಮೈತ್ರಿ ಮಾಡಿಕೊಂಡಿರುವ ಕಾಂಗ್ರೆಸ್ 13 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಿದೆ.

Times Now And C-Voter Survey: TMC Likely To Retain power In West Bengal

ಬಂಗಾಳದಲ್ಲಿ ಬಿಜೆಪಿಗೆ 99 ರಿಂದ 115 ಸ್ಥಾನ:

ಪಶ್ಚಿಮ ಬಂಗಾಳದಲ್ಲಿ 2016ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಕೇವಲ 3 ಸ್ಥಾನಗಳನ್ನು ಮಾತ್ರ ಗೆದ್ದಿತ್ತು. 2021ರ ಚುನಾವಣೆಯಲ್ಲಿ ಟಿಎಂಸಿಗೆ ಪೈಪೋಟಿ ನೀಡುವ ಮಟ್ಟಕ್ಕೆ ರಾಜ್ಯದಲ್ಲಿ ಬಿಜೆಪಿ ಪ್ರಬಲವಾಗಿದೆ. ಈ ಬಾರಿ ಚುನಾವಣೆಯಲ್ಲಿ ಬಿಜೆಪಿಗೆ 99 ರಿಂದ 115 ಸ್ಥಾನಗಳಲ್ಲಿ ಗೆಲುವು ಸಾಧಿಸಬಹುದು ಎಂದು ಸಮೀಕ್ಷೆಯು ತಿಳಿಸಿದೆ.

ಪಶ್ಚಿಮ ಬಂಗಾಳದಲ್ಲಿ 8 ಹಂತದ ಮತದಾನ:

ಪಶ್ಚಿಮ ಬಂಗಾಳದಲ್ಲಿ ಪಶ್ಚಿಮ ಬಂಗಾಳದಲ್ಲಿ ಎಂಟು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಮಾರ್ಚ್.27, ಏಪ್ರಿಲ್.1, ಏಪ್ರಿಲ್.6, ಏಪ್ರಿಲ್.10, ಏಪ್ರಿಲ್.17, ಏಪ್ರಿಲ್.22, ಏಪ್ರಿಲ್.26 ಮತ್ತು ಏಪ್ರಿಲ್.29ರಂದು ಮತದಾನ ನಡೆಯಲಿದೆ. ಚುನಾವಣೆಯ ಅಂತಿಮ ಫಲಿತಾಂಶ ಮೇ.2ರಂದು ಹೊರ ಬೀಳಲಿದೆ.

English summary
Times Now And C-Voter Survey Told Mamata Banerjee Likely To Retain power In West Bengal.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X