ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆ; ತೃಣಮೂಲಕ್ಕೆ ಬಲ ತುಂಬಲು ಆರ್‌ಜೆಡಿ ಜೊತೆ ಮೈತ್ರಿ?

|
Google Oneindia Kannada News

ಕೋಲ್ಕತ್ತಾ, ಮಾರ್ಚ್ 01: ಮಾರ್ಚ್ 27ರಂದು ಪಶ್ಚಿಮ ಬಂಗಾಳದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು, ಚುನಾವಣೆಗೆ ಭರದ ಸಿದ್ಧತೆ ಸಾಗುತ್ತಿದೆ. ಪಶ್ಚಿಮ ಬಂಗಾಳದಲ್ಲಿ ಈ ಬಾರಿ ಎಂಟು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ರಾಜ್ಯದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ.

ಈ ಬಾರಿ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್ ಹಾಗೂ ಬಿಜೆಪಿ ಹಣಾಹಣಿಯಲ್ಲಿವೆ. ತೃಣಮೂಲ ಕಾಂಗ್ರೆಸ್‌ಗೆ ಬಿಜೆಪಿಯಿಂದ ಭಾರೀ ಪೈಪೋಟಿ ಎದುರಾಗಿದ್ದು, ಪಕ್ಷವನ್ನು ಸೋಲಿಸಲು ಹಲವು ಕಾರ್ಯತಂತ್ರಗಳನ್ನು ಟಿಎಂಸಿ ಹೂಡುತ್ತಿದೆ.

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆ 2021 ದಿನಾಂಕ ಪ್ರಕಟ...ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆ 2021 ದಿನಾಂಕ ಪ್ರಕಟ...

ಸೋಮವಾರದಂದು ಬಿಹಾರ ಆರ್ ಜೆಡಿ ಮುಖಂಡ ತೇಜಸ್ವಿ ಯಾದವ್ ಕೂಡ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರನ್ನು ಭೇಟಿ ಮಾಡಲಿದ್ದು, ಚುನಾವಣಾ ಪೂರ್ವ ಮೈತ್ರಿ ಕುರಿತು ಚರ್ಚೆ ನಡೆಸುವುದಾಗಿ ತಿಳಿದುಬಂದಿದೆ. ಬಿಹಾರದ ವಿರೋಧ ಪಕ್ಷದ ನಾಯಕ ಹಾಗೂ ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಈ ಚುನಾವಣೆಯಲ್ಲಿ ಸೀಟು ಹಂಚಿಕೆ ಮಾಡಿಕೊಳ್ಳುವ ಕುರಿತು ಮಾತುಕತೆ ನಡೆಸುವುದಾಗಿ ತಿಳಿದುಬಂದಿದೆ.

TMC And RJD May Form Pre Poll Alliance In Upcoming West Bengal Assembly Elections

ಪಶ್ಚಿಮ ಬಂಗಾಳದ ಅಸನ್ಸೋಲ್, ಹೌರಾ, ಕೋಲ್ಕತ್ತಾಗಳಲ್ಲಿ ಬಿಹಾರಿ ಜನರು ನೆಲೆಸಿರುವುದನ್ನೂ ಇಲ್ಲಿ ಗಮನಿಸಬೇಕಿದೆ. ಈ ಎರಡೂ ಪಕ್ಷಗಳು ಮೈತ್ರಿಯಾದರೆ ಬಿಜೆಪಿ ಪೈಪೋಟಿ ಎದುರಿಸಲು ಟಿಎಂಸಿಗೆ ಬಲ ಬಂದಂತೆ ಆಗುತ್ತದೆ.

ಇದೇ ಮಾರ್ಚ್ 27ರಂದು ಅಸ್ಸಾಂ ವಿಧಾನಸಭೆ ಚುನಾವಣೆ 2021 ನಡೆಯಲಿದ್ದು, ಆರ್ ಜೆಡಿ ಸ್ಪರ್ಧಿಸುವುದಾಗಿ ತಿಳಿಸಿದೆ. ಪಶ್ಚಿಮ ಬಂಗಾಳದಲ್ಲಿ ಎಂಟು ಹಂತಗಳಲ್ಲಿ ಚುನಾವಣೆ ನಡೆಯಲಿರುವುದಾಗಿ ತಿಳಿಸಿದ್ದು, ಮಾರ್ಚ್ 27ಕ್ಕೆ ಮೊದಲ ಹಂತದಲ್ಲಿ ಚುನಾವಣೆ ಆರಂಭಗೊಳ್ಳಲಿದೆ. ಏಪ್ರಿಲ್ 29ಕ್ಕೆ ಅಂತಿಮ ಹಂತದ ಚುನಾವಣೆ ನಡೆಯಲಿರುವುದಾಗಿ ಆಯೋಗ ತಿಳಿಸಿದೆ. ಮೇ 2ಕ್ಕೆ ಚುನಾವಣಾ ಫಲಿತಾಂಶ ಹೊರಬೀಳಲಿದೆ.

English summary
RJD leader Tejaswi Yadav is expected to meet West Bengal Chief Minister Mamata Banerjee today to discuss over the pre-poll alliance
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X