• search
  • Live TV
ಕೋಲ್ಕತಾ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಪಶ್ಚಿಮ ಬಂಗಾಳ; ಪ್ರಚಾರ ಮುಗಿಸಿ ಬರುತ್ತಿದ್ದ ಟಿಎಂಸಿ ಅಭ್ಯರ್ಥಿ ಮೇಲೆ ಹಲ್ಲೆ

|

ಕೋಲ್ಕತ್ತಾ, ಏಪ್ರಿಲ್ 9: dಪಶ್ಚಿಮ ಬಂಗಾಳದಲ್ಲಿ ಗುರುವಾರ ರಾತ್ರಿ ಮತ್ತೆ ಗಲಭೆ ನಡೆದಿದ್ದು, ಟಿಎಂಸಿ ಅಭ್ಯರ್ಥಿ ಗಿರೀಂದ್ರ ನಾಥ್ ಬರ್ಮಾನ್ ಅವರ ಮೇಲೆ ದಾಳಿ ನಡೆಸಿ ಹಲ್ಲೆ ಮಾಡಲಾಗಿದೆ.

ಉತ್ತರ ಬಂಗಾಳದ ಕೂಚ್ ಬೇಹರ್ ಜಿಲ್ಲೆಯಲ್ಲಿ ಗುರುವಾರ ಚುನಾವಣಾ ಪ್ರಚಾರದಿಂದ ವಾಪಸ್ಸಾಗುವ ಸಂದರ್ಭ ಬಿಜೆಪಿ ಕಾರ್ಯಕರ್ತರು ಟಿಎಂಸಿ ಅಭ್ಯರ್ಥಿ ಗಿರೀಂದ್ರ ನಾಥ್ ಬರ್ಮಾನ್ ಮೇಲೆ ದಾಳಿ ನಡೆಸಿರುವುದಾಗಿ ವರದಿ ತಿಳಿಸಿದೆ. ಬಿಜೆಪಿಯ ಕಾರ್ಯಕರ್ತರು ಅವರ ಕಾರುಗಳನ್ನು ಜಖಂಗೊಳಿಸಿ ಅವರ ಮೇಲೆ ದಾಳಿ ನಡೆಸಿದ್ದಾರೆ. ಗಿರೀಂದ್ರ ಅವರ ತಲೆಗೆ ಗಂಭೀರ ಪೆಟ್ಟಾಗಿದೆ. ಈ ಘಟನೆ ಕುರಿತು ಸೂಕ್ತ ಕ್ರಮ ಕೈಗೊಳ್ಳಲೇಬೇಕು ಎಂದು ಟಿಎಂಸಿ ಆಗ್ರಹಿಸಿದೆ. ಈ ವಿಷಯದಲ್ಲಿ ಚುನಾವಣಾ ಆಯೋಗ ಮಧ್ಯಪ್ರವೇಶಿಸಬೇಕು ಎಂದು ಒತ್ತಾಯಿಸಿದೆ.

ಪ್ರತಿದಿನವೂ ಹಿಂದೂ-ಮುಸ್ಲಿಂ ಎನ್ನುವ ಮೋದಿ ವಿರುದ್ಧ ಏಕೆ ದೂರು ದಾಖಲಾಗಿಲ್ಲ?

ಗುರುವಾರ ರಾತ್ರಿ ದಾಳಿ ನಡೆಸಿದ ಫೋಟೊಗಳನ್ನು ಟಿಎಂಸಿ ಹಂಚಿಕೊಂಡಿದೆ. ರಾಜಭಂಗ್ಶಿ ಸಮುದಾಯದ ಬೆಂಬಲವನ್ನು ಕಳೆದುಕೊಂಡಿರುವ ಕುರಿತು ಆತಂಕಗೊಂಡಿದ್ದ BJPFBengal ಕಾರ್ಯಕರ್ತರು ಟಿಎಂಸಿ ಅಭ್ಯರ್ಥಿ ವಿರುದ್ಧ ದಾಳಿ ನಡೆಸಿದ್ದಾರೆ. ನರೇಂದ್ರ ಮೋದಿ ಹಾಗೂ ಗೃಹ ಸಚಿವರು ಈ ಘಟನೆಗೆ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದೆ.

ಎರಡು ದಿನಗಳ ಮುನ್ನ ಟಿಎಂಸಿ ಕಾರ್ಯಕರ್ತರು ತಮ್ಮ ಕಾರಿನ ಮೇಲೆ ಬಾಂಬ್ ಹಾಗೂ ಇಟ್ಟಿಗೆಗಳಿಂದ ದಾಳಿ ನಡೆಸಿದ್ದಾರೆ ಎಂದು ಬಿಜೆಪಿ ಪಶ್ಚಿಮ ಬಂಗಾಳ ಅಧ್ಯಕ್ಷ ದಿಲೀಪ್ ಘೋಷ್ ಆರೋಪಿಸಿದ್ದರು. ಪಶ್ಚಿಮ ಬಂಗಾಳದಲ್ಲಿ 294 ಕ್ಷೇತ್ರಗಳಿಗೆ ಎಂಟು ಹಂತಗಳಲ್ಲಿ ಚುನಾವಣೆ ನಡೆಯುತ್ತಿದ್ದು, ಮೂರು ಹಂತದ ಚುನಾವಣೆ ಮುಗಿದಿದೆ. ಚುನಾವಣೆ ಆರಂಭವಾದಾಗಿನಿಂದಲೂ ರಾಜ್ಯದಲ್ಲಿ ಗಲಭೆಗಳು ನಡೆಯುತ್ತಲೇ ಇವೆ.

English summary
Trinamool Congress (TMC) candidate Girindra Nath Barman has been allegedly attacked while campaigning for the assembly elections in the Cooch Behar district of North Bengal
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X