ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪಶ್ಚಿಮ ಬಂಗಾಳ 4 ಪಾಲಿಕೆ ಚುನಾವಣೆಯಲ್ಲಿ ಟಿಎಂಸಿ ಗೆಲುವು, ಮಮತಾ ಅಭಿನಂದನೆ

|
Google Oneindia Kannada News

ಕೋಲ್ಕತ್ತಾ, ಫೆಬ್ರವರಿ 14: ಪಶ್ಚಿಮ ಬಂಗಾಳದ 4 ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಗೆಲುವಿನ ನಗೆ ಬೀರಿದೆ. ಚಂದರ್‌ನಗೊರ್, ಅಸನ್ಸೋಲ್, ಸಿಲಿಗುರಿ, ಬಿಧನ್‌ನಗರ ಈ ನಾಲ್ಕು ಪಾಲಿಕೆ ಚುನಾವಣೆಯಲ್ಲಿ ಟಿಎಂಸಿ ಗೆಲುವು ಸಾಧಿಸಿದೆ.

ಅಸನ್ಸೋಲ್‌ನಲ್ಲಿ ಟಿಎಂಸಿ ಜಯಭೇರಿ ಬಾರಿಸಿದೆ, ಇಲ್ಲಿನ 106 ವಾರ್ಡ್‌ಗಳ ಪೈಕಿ 66ರಲ್ಲಿ ಟಿಎಂಸಿ ಅಭ್ಯರ್ಥಿಗಳು ಗೆದಿದ್ದಾರೆ, ಬಿಜೆಪಿ 5 ವಾರ್ಡ್‌ಗಳಲ್ಲಿ ಗೆದ್ದರೆ, ಕಾಂಗ್ರೆಸ್ ಹಾಗೂ ಸಿಪಿಎಂ ತಲಾ ಎರಡರಲ್ಲಿ ಗೆಲುವು ಸಾಧಿಸಿದೆ.

ಮಮತಾ, ಪ್ರಶಾಂತ್ ಕಿಶೋರ್ ನಡುವೆ ವೈಮನಸ್ಸು, ಸಭೆ ಕರೆದ ದೀದಿಮಮತಾ, ಪ್ರಶಾಂತ್ ಕಿಶೋರ್ ನಡುವೆ ವೈಮನಸ್ಸು, ಸಭೆ ಕರೆದ ದೀದಿ

ಬಿಧರ್‌ನಗರದ ಪಾಲಿಕೆಯ 41 ವಾರ್ಡ್‌ಗಳ ಪೈಕಿ 39ರಲ್ಲಿ ಗೆಲುವು ಸಾಧಿಸುವ ಮೂಲಕ ಟಿಎಂಸಿ ಅಧಿಕಾರವನ್ನು ಉಳಿಸಿಕೊಂಡಿದೆ. ಇಲ್ಲಿನ ಒಂದೇ ಒಂದು ವಾರ್ಡ್‌ನಲ್ಲಿ ಸಿಪಿಐ(ಎಂ) ಜಯ ಸಾಧಿಸಿದೆ.

TMC Clean Sweeps WB Municipal Corporation Polls, Wins Big in All 4 Civic Bodies

ಚಂದರ್‌ನಗೋರ್‌ನ 32 ವಾರ್ಡ್‌ಗಳ ಪೈಕಿ 31ರಲ್ಲಿ ಮಮತಾ ಪಕ್ಷದ ಅಭ್ಯರ್ಥಿಗಳು ಜಯ ಸಾಧಿಸಿದ್ದಾರೆ. 4 ಪಾಲಿಕೆ ಚುನಾವಣೆಗಳಲ್ಲಿ ತಮ್ಮ ಪಕ್ಷವೂ ಅಭೂತಪೂರ್ವ ಗೆಲುವು ಸಾಧಿಸಲು ನೆರವಾದ ಮತದಾರರಿಗೆ ಸಿಎಂ ಮಮತಾ ಬ್ಯಾನರ್ಜಿ ಧನ್ಯವಾದ ಹೇಳಿದ್ದಾರೆ. ಇದು ಜನರ ಗೆಲುವು ಎಂದು ಬಣ್ಣಿಸಿದ್ದಾರೆ.

ಸಿಲಿಗುರಿ ಪಾಲಿಕೆಯನ್ನು ಸಿಪಿಐ(ಎಂ)ನಿಂದ ಕಸಿದುಕೊಂಡಿರುವ ಟಿಎಂಸಿ 47 ವಾರ್ಡ್‌ಗಳ ಪೈಕಿ 37ರಲ್ಲಿ ಗೆದ್ದಿದೆ. 5 ವಾರ್ಡ್‌ಗಳಲ್ಲಿ ಗೆಲ್ಲುವ ಮೂಲಕ ಬಿಜೆಪಿ ವಿಪಕ್ಷ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡರೆ , ಎಡಪಕ್ಷ 4 ವಾರ್ಡ್‌ಗಳಲ್ಲಿ ಜಯಗಳಿಸಿದೆ. ಇಲ್ಲಿ ಶೇ.78.72 ಮತಗಳನ್ನು ಟಿಎಂಸಿ ಪಡೆದಿದೆ. 3 ಸಾವಿರ ಮತಗಳ ಅಂತರದಿಂದ ಗೆದ್ದ ಗೌತಮ್ ದೇವ್ ಅವರನ್ನು ಸಿಲಿಗುರಿಯ ಮೇಯರ್ ಎಂದು ಪಕ್ಷದ ವರಿಷ್ಠೆ ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ನಾಲ್ಕೂ ಪಾಲಿಕೆಯಲ್ಲಿ ಗೆಲುವು ಸಾಧಿಸಿದ ಅಭ್ಯರ್ಥಿಗಳಿಗೆ ಮಮತಾ ಬ್ಯಾನರ್ಜಿ ಶುಭಾಶಯ ತಿಳಿಸಿದ್ದಾರೆ. ಪಶ್ಚಿಮ ಬಂಗಾಳದ ನಾಲ್ಕು ಪುರಸಭೆ ಕಾರ್ಪೊರೇಷನ್ ಗಳಲ್ಲಿ ಫೆ.12 ರಂದು ನಡೆದ ಚುನಾವಣೆಯಲ್ಲಿ ತಮ್ಮ ಪಕ್ಷದ ಪರ ಒಲವು ತೋರಿರುವ ಜನತೆಗೆ ಸಿಎಂ ಮಮತಾ ಬ್ಯಾನರ್ಜಿ ಧನ್ಯವಾದ ತಿಳಿಸಿದ್ದಾರೆ. ರಾಜ್ಯ ಸರ್ಕಾರ ಜನಸಾಮಾನ್ಯರಿಗಾಗಿ ಕೆಲಸ ಮಾಡುವುದನ್ನು ಮುಂದುವರೆಸಲಿದೆ ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಕಳೆದ ವಾರ ಉತ್ತರ ಪ್ರದೇಶದಲ್ಲಿ ಸಮಾಜವಾದಿ ಪಕ್ಷದ ಪರ ಚುನಾವಣಾ ಪ್ರಚಾರಕ್ಕೆ ತೆರಳಿದ್ದ ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿ, ತಮ್ಮ ಪಕ್ಷ ರಾಜ್ಯದಲ್ಲಿ ದೂರದೃಷ್ಟಿಯಿಂದ ಚುನಾವಣೆಗೆ ಸ್ಪರ್ಧಿಸದಿರಲು ನಿರ್ಧರಿಸಿತು.

ಅಖಿಲೇಶ್ ಯಾದವ್ (ಎಸ್ ಪಿ ಮುಖ್ಯಸ್ಥ) ಯಾವುದೇ ಕ್ಷೇತ್ರದಲ್ಲಿಯೂ ಹಿನ್ನೆಡೆ ಎದುರಿಸಬಾರದು ಎಂಬ ಕಾರಣಕ್ಕಾಗಿ ನಾವು ರಾಜ್ಯದಲ್ಲಿ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲಿಲ್ಲ. ಮೊದಲ ಹಂತದಲ್ಲಿ ಅಖಿಲೇಶ್ ಅವರ ಪಕ್ಷ 37 ರಿಂದ 57 ಸ್ಥಾನಗಳಲ್ಲಿ ಗೆಲ್ಲಲಿದೆ ಎಂದು ಮಮತಾ ಬ್ಯಾನರ್ಜಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಮಾ.03 ರಂದು ಉತ್ತರ ಪ್ರದೇಶಕ್ಕೆ ಭೇಟಿ ನೀಡಿ ವಾರಣಾಸಿಯಲ್ಲಿ ರ್ಯಾಲಿ ನಡೆಸುವುದಾಗಿ ತಿಳಿಸಿದ್ದಾರೆ. ಇದೇ ವೇಳೆ ಕಾಂಗ್ರೆಸ್ ವಿರುದ್ಧವೂ ದೀದಿ ವಾಗ್ದಾಳಿ ನಡೆಸಿದ್ದು, ಕಾಂಗ್ರೆಸ್ ಪಕ್ಷದೊಂದಿಗೆ ಯಾವುದೇ ಪ್ರಾದೇಶಿಕ ಪಕ್ಷಗಳೂ ಮೈತ್ರಿಯನ್ನು, ಸೌಹಾರ್ದಯುತ ಸಂಬಂಧವನ್ನು ಉಳಿಸಿಕೊಂಡಿಲ್ಲ. ಕಾಂಗ್ರೆಸ್ ದಾರಿ ಕಾಂಗ್ರೆಸ್ ಗೆ ನಮ್ಮ ದಾರಿ ನಮಗೆ ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ದೊಡ್ಡ ಮಟ್ಟದ ಉದ್ದೇಶಕ್ಕಾಗಿ ಕೈ ಜೋಡಿಸುವಂತೆ ಸಿಪಿಐ(ಎಂ) ಹಾಗೂ ಕಾಂಗ್ರೆಸ್ ನ್ನೂ ಮನವಿ ಮಾಡಿದ್ದೆ. ಆದರೆ ಅವರು ಮಾತು ಕೇಳಲಿಲ್ಲ. ಈಗ ನಾನೇನು ಮಾಡುವುದಕ್ಕೆ ಸಾಧ್ಯವಿಲ್ಲ. ನನಗೆ ಯಾರ ವಿರುದ್ಧವೂ ವೈಯಕ್ತಿಕ ದ್ವೇಷ ಇಲ್ಲ" ಎಂದು ದೀದಿ ಹೇಳಿದ್ದಾರೆ.

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದಿಂದ ದೇಶದ ಸಂವಿಧಾನ ಹಾನಿಗೊಳಗಾಗುತ್ತಿದೆ. "ನಾನು ತಮಿಳುನಾಡಿನ ಸಿಎಂ ಎಂ. ಕೆ ಸ್ಟಾಲಿನ್ ಹಾಗೂ ತೆಲಂಗಾಣ ಸಿಎಂ ಕೆಸಿಆರ್ ಅವರೊಂದಿಗೆ ಮಾತನಾಡಿದ್ದೇನೆ ಜೊತೆಯಾಗಿ ನಾವು ಒಕ್ಕೂಟ ವ್ಯವಸ್ಥೆಯನ್ನು ರಕ್ಷಿಸಲು ಯತ್ನಿಸುತ್ತಿದ್ದೇವೆ" ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಪಶ್ಚಿಮ ಬಂಗಾಳದ ನಾಲ್ಕು ಪುರಸಭೆ ಕಾರ್ಪೊರೇಷನ್ ಗಳಲ್ಲಿ ಫೆ.12 ರಂದು ನಡೆದ ಚುನಾವಣೆಯಲ್ಲಿ ತಮ್ಮ ಪಕ್ಷದ ಪರ ಒಲವು ತೋರಿರುವ ಜನತೆಗೆ ಸಿಎಂ ಮಮತಾ ಬ್ಯಾನರ್ಜಿ ಧನ್ಯವಾದ ತಿಳಿಸಿದ್ದಾರೆ. ರಾಜ್ಯ ಸರ್ಕಾರ ಜನಸಾಮಾನ್ಯರಿಗಾಗಿ ಕೆಲಸ ಮಾಡುವುದನ್ನು ಮುಂದುವರೆಸಲಿದೆ ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಕಳೆದ ವಾರ ಉತ್ತರ ಪ್ರದೇಶದಲ್ಲಿ ಸಮಾಜವಾದಿ ಪಕ್ಷದ ಪರ ಚುನಾವಣಾ ಪ್ರಚಾರಕ್ಕೆ ತೆರಳಿದ್ದ ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿ, ತಮ್ಮ ಪಕ್ಷ ರಾಜ್ಯದಲ್ಲಿ ದೂರದೃಷ್ಟಿಯಿಂದ ಚುನಾವಣೆಗೆ ಸ್ಪರ್ಧಿಸದಿರಲು ನಿರ್ಧರಿಸಿತು. ಅಖಿಲೇಶ್ ಯಾದವ್ (ಎಸ್ ಪಿ ಮುಖ್ಯಸ್ಥ) ಯಾವುದೇ ಕ್ಷೇತ್ರದಲ್ಲಿಯೂ ಹಿನ್ನೆಡೆ ಎದುರಿಸಬಾರದು ಎಂಬ ಕಾರಣಕ್ಕಾಗಿ ನಾವು ರಾಜ್ಯದಲ್ಲಿ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲಿಲ್ಲ. ಮೊದಲ ಹಂತದಲ್ಲಿ ಅಖಿಲೇಶ್ ಅವರ ಪಕ್ಷ 37 ರಿಂದ 57 ಸ್ಥಾನಗಳಲ್ಲಿ ಗೆಲ್ಲಲಿದೆ ಎಂದು ಮಮತಾ ಬ್ಯಾನರ್ಜಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

"ದೊಡ್ಡ ಮಟ್ಟದ ಉದ್ದೇಶಕ್ಕಾಗಿ ಕೈ ಜೋಡಿಸುವಂತೆ ಸಿಪಿಐ(ಎಂ) ಹಾಗೂ ಕಾಂಗ್ರೆಸ್ ನ್ನೂ ಮನವಿ ಮಾಡಿದ್ದೆ. ಆದರೆ ಅವರು ಮಾತು ಕೇಳಲಿಲ್ಲ. ಈಗ ನಾನೇನು ಮಾಡುವುದಕ್ಕೆ ಸಾಧ್ಯವಿಲ್ಲ. ನನಗೆ ಯಾರ ವಿರುದ್ಧವೂ ವೈಯಕ್ತಿಕ ದ್ವೇಷ ಇಲ್ಲ" ಎಂದು ಮಮತಾ ಹೇಳಿದ್ದಾರೆ.

ಮಾ.03 ರಂದು ಉತ್ತರ ಪ್ರದೇಶಕ್ಕೆ ಭೇಟಿ ನೀಡಿ ವಾರಣಾಸಿಯಲ್ಲಿ ಪ್ರಚಾರ ನಡೆಸುವುದಾಗಿ ತಿಳಿಸಿದ್ದಾರೆ. ಇದೇ ವೇಳೆ ಕಾಂಗ್ರೆಸ್ ವಿರುದ್ಧವೂ ದೀದಿ ವಾಗ್ದಾಳಿ ನಡೆಸಿದ್ದು, ಕಾಂಗ್ರೆಸ್ ಪಕ್ಷದೊಂದಿಗೆ ಯಾವುದೇ ಪ್ರಾದೇಶಿಕ ಪಕ್ಷಗಳೂ ಮೈತ್ರಿಯನ್ನು, ಸೌಹಾರ್ದಯುತ ಸಂಬಂಧವನ್ನು ಉಳಿಸಿಕೊಂಡಿಲ್ಲ. ಕಾಂಗ್ರೆಸ್ ದಾರಿ ಕಾಂಗ್ರೆಸ್‌ಗೆ ನಮ್ಮ ದಾರಿ ನಮಗೆ ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದಿಂದ ದೇಶದ ಸಂವಿಧಾನ ಹಾನಿಗೊಳಗಾಗುತ್ತಿದೆ. "ನಾನು ತಮಿಳುನಾಡಿನ ಸಿಎಂ ಎಂ. ಕೆ ಸ್ಟಾಲಿನ್ ಹಾಗೂ ತೆಲಂಗಾಣ ಸಿಎಂ ಕೆಸಿಆರ್ ಅವರೊಂದಿಗೆ ಮಾತನಾಡಿದ್ದೇನೆ ಜೊತೆಯಾಗಿ ನಾವು ಒಕ್ಕೂಟ ವ್ಯವಸ್ಥೆಯನ್ನು ರಕ್ಷಿಸಲು ಯತ್ನಿಸುತ್ತಿದ್ದೇವೆ" ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.

English summary
The Trinamool Congress continued their winning ways in West Bengal on Monday, 14 February, after a clean sweep of the polls to four municipal corporations of Asansol, Bidhannagar, Chandernagore, and Siliguri.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X