ರಾಜ್ಯಸಭಾ ಸ್ಥಾನಕ್ಕೆ ಟಿಎಂಸಿ ಸಂಸದ ದಿನೇಶ್ ತ್ರಿವೇದಿ ರಾಜೀನಾಮೆ
ಕೋಲ್ಕತ್ತಾ, ಫೆಬ್ರವರಿ.12: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ ಹೊಸ್ತಿಲಿನಲ್ಲಿ ತೃಣಮೂಲ ಕಾಂಗ್ರೆಸ್ ಪಕ್ಷದ ಮೇಲ್ಮನೆ ಸದಸ್ಯ ದಿನೇಶ್ ತ್ರಿವೇದಿ ಅವರು ತಮ್ಮ ಸಂಸದ ಸ್ಥಾನಕ್ಕೆ ಶುಕ್ರವಾರ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ.
ಪಶ್ಚಿಮ ಬಂಗಾಳದಲ್ಲಿ ಹಿಂಸಾಚಾರ ನಡೆಯುತ್ತಿದ್ದರೆ ಅದರ ಬಗ್ಗೆ ನಾವಿಲ್ಲಿ ಕುಣಿತು ಏನನ್ನೂ ಮಾತನಾಡದ ಸ್ಥಿತಿಯಲ್ಲಿದ್ದೇವೆ. ನಮ್ಮ ರಾಜ್ಯದಲ್ಲಿ ಇಂದು ಹಿಂಸಾಚಾ ನಡೆಯುತ್ತಿದೆ. ಅದರ ಬಗ್ಗೆ ನಾವಿಲ್ಲ ಮಾತನಾಡದಂತೆ ಆಗಿದೆ. ಈ ಕಾರಣಕ್ಕಾಗಿಯೇ ನಾನು ನನ್ನ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ರಾಜ್ಯಸಭೆಯಲ್ಲಿ ದಿನೇಶ್ ತ್ರಿವೇದಿ ಹೇಳಿದ್ದಾರೆ.
"ರಾಜ್ಯಸಭೆಗೆ ನನ್ನನ್ನು ಕಳುಹಿಸಿ ಕೊಟ್ಟ ಟಿಎಂಸಿ ಪಕ್ಷಕ್ಕೆ ನಾವು ಆಭಾರಿಯಾಗಿದ್ದೇನೆ. ರಾಜ್ಯದಲ್ಲಿ ಹಿಂಸಾಚಾರ ನಡೆಯುತ್ತಿದ್ದರೂ ನಾನೇನೂ ಮಾಡದ ಸ್ಥಿತಿಯಲ್ಲಿರುವುದು ಸಾಕಷ್ಟು ನೋವು ಉಂಟು ಮಾಡಿದೆ. ಈ ಸ್ಥಾನದಲ್ಲಿ ಇದ್ದರೂ ನಿನ್ನಿಂದ ಏನನ್ನೂ ಮಾಡಲಾಗದಿದ್ದರೆ, ನೀನೇಕೆ ರಾಜೀನಾಮೆ ಸಲ್ಲಿಸಬಾರದು ಎಂದು ನನ್ನ ಮನಸ್ಸು ಹೇಳುತ್ತಿದೆ. ಹಾಗಾಗಿ ನಾನು ಪಶ್ಚಿಮ ಬಂಗಾಳದ ಜನರೊಂದಿಗೆ ಸೇರಿ ಕೆಲಸ ಮಾಡುವುದಕ್ಕಾಗಿ ಈ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ" ಎಂದು ಸಂಸದ ದಿನೇಶ್ ತ್ರಿವೇದಿ ಹೇಳಿದ್ದಾರೆ.

2021ರಲ್ಲಿ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ:
ಪಶ್ಚಿಮ ಬಂಗಾಳದಲ್ಲಿ ಇದೇ ವರ್ಷ 294 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ಇತ್ತೀಚಿಗಷ್ಟೇ ರಾಜ್ಯದಲ್ಲಿ ಸಚಿವರು, ಶಾಸಕರು ಮತ್ತು ಸಂಸದರ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಹಲವು ಟಿಎಂಸಿ ನಾಯಕರು ಬೇರೆ ಪಕ್ಷದ ಕಡೆಗೆ ಮುಖ ಮಾಡಿದ್ದರು. ಇದೀಗ ದಿನೇಶ್ ತ್ರಿವೇದಿ ಸಹ ರಾಜೀನಾಮೆ ಸಲ್ಲಿಸಿರುವುದು ಮುಂದೆ ಯಾವ ಕಡೆಗೆ ಹೋಗುತ್ತಾರೆ ಎನ್ನುವುದು ಸದ್ಯದ ಮಟ್ಟಿದೆ ಕುತೂಹಲ ಕೆರಳಿಸಿದೆ.












Click it and Unblock the Notifications