• search
  • Live TV
ಕೋಲ್ಕತಾ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಟಿಎಂಸಿ ನನ್ನನ್ನು ಹತ್ಯೆ ಮಾಡಲು ಯತ್ನಿಸುತ್ತಿದೆ: ಅರ್ಜುನ್ ಸಿಂಗ್

|
Google Oneindia Kannada News

ಕೋಲ್ಕತ್ತಾ, ಸೆಪ್ಟೆಂಬರ್ 14: ಟಿಎಂಸಿ ನನ್ನನ್ನು ಹತ್ಯೆ ಮಾಡಲು ಯತ್ನಿಸುತ್ತಿದೆ ಎಂದು ಬಿಜೆಪಿ ಸಂಸದ ಅರ್ಜುನ್ ಸಿಂಗ್ ಹೇಳಿದ್ದಾರೆ.

ಪಶ್ಚಿಮ ಬಂಗಾಳದ ಉತ್ತರ 24 ಪರಗಣದಲ್ಲಿರುವ ಬಿಜೆಪಿ ಸಂಸದ ಅರ್ಜುನ್ ಸಿಂಗ್ ಅವರ ನಿವಾಸದ ಮೇಲೆ ದುಷ್ಕರ್ಮಿಗಳು ಬಾಂಬ್‌ ಎಸೆದ ಒಂದು ವಾರದ ನಂತರ, ಮಂಗಳವಾರ ಬೆಳಗ್ಗೆ ಅವರ ಮನೆಯ ಹೊರಗೆ ಮತ್ತೊಂದು ಬಾಂಬ್ ಸ್ಫೋಟ ವರದಿಯಾಗಿದ್ದು, ಆಡಳಿತ ಪಕ್ಷ ಟಿಎಂಸಿ ನನ್ನನ್ನು ಹತ್ಯೆ ಮಾಡಲು ಪ್ರಯತ್ನಿಸಿದೆ ಎಂದು ಅರ್ಜುನ್ ಸಿಂಗ್ ಆರೋಪ ಮಾಡಿದ್ದಾರೆ.

Video: ಬಿಜೆಪಿ ಸಂಸದ ಅರ್ಜುನ್ ಸಿಂಗ್ ಮನೆ ಹಿಂಭಾಗದಲ್ಲಿ ಬಾಂಬ್ ಸ್ಫೋಟVideo: ಬಿಜೆಪಿ ಸಂಸದ ಅರ್ಜುನ್ ಸಿಂಗ್ ಮನೆ ಹಿಂಭಾಗದಲ್ಲಿ ಬಾಂಬ್ ಸ್ಫೋಟ

ಸೆಪ್ಟೆಂಬರ್ 8 ರಂದು ನಡೆದ ದಾಳಿಯಲ್ಲಿ ಬಿಜೆಪಿ ಸಂಸದರ ನಿವಾಸದ ಗೇಟ್ ಭಾಗಶಃ ಹಾನಿಯಾಗಿದ್ದು, ಈ ಕುರಿತು ಎನ್ಐಎ ತನಿಖೆ ನಡೆಸುತ್ತಿದೆ.

ತೃಣಮೂಲ ಕಾಂಗ್ರೆಸ್ ತನ್ನನ್ನು, ತಮ್ಮ ಕುಟುಂಬ ಸದಸ್ಯರನ್ನು ಮತ್ತು ತನ್ನ ಹತ್ತಿರದ ಜನರನ್ನು ಕೊಲ್ಲಲು ನಡೆಸಿದ ಯೋಜಿತ ದಾಳಿ ಇದಾಗಿದೆ ಎಂದು ಸಿಂಗ್ ಆರೋಪಿಸಿದ್ದಾರೆ.

"ಇದೊಂದು ಯೋಜಿತ ದಾಳಿ. ಟಿಎಂಸಿ ಇದರ ಹಿಂದಿದೆ... ಅವರು ನನ್ನನ್ನು ಮತ್ತು ನನ್ನ ಜನರನ್ನು ಕೊಲ್ಲಲು ಪ್ರಯತ್ನಿಸುತ್ತಿದ್ದಾರೆ. ಇದು ಬಂಗಾಳದ ಗೂಂಡಾರಾಜ್ ಎಂದು ಸಿಂಗ್ ಹೇಳಿದ್ದಾರೆ.

ಇಂದು ಬೆಳಗ್ಗೆ 9:10 ರ ಸುಮಾರಿಗೆ, ಸಿಂಗ್ ಅವರ ಭಟ್ಪರಾ ನಿವಾಸದಿಂದ ಕೇವಲ 200 ಮೀಟರ್ ದೂರದಲ್ಲಿರುವ ಖಾಲಿ ಜಾಗದಲ್ಲಿ ಬಾಂಬ್ ಸ್ಫೋಟಗೊಂಡಿದೆ. "ನಾವು ಈ ಕುರಿತು ತನಿಖೆ ಮಾಡುತ್ತಿದ್ದೇವೆ. ನಮ್ಮ ಅಧಿಕಾರಿಗಳು ಅಲ್ಲಿದ್ದಾರೆ" ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿದಾರೆ.

ಇದೊಂದು ಯೋಜಿತ ದಾಳಿ. ಟಿಎಂಸಿ ಇದರ ಹಿಂದಿದೆ ಅವರು ನನ್ನನ್ನು ಮತ್ತು ನನ್ನ ಜನರನ್ನು ಕೊಲ್ಲಲು ಪ್ರಯತ್ನಿಸುತ್ತಿದ್ದಾರೆ. ಇದು ಬಂಗಾಳದಲ್ಲಿ ಗೂಂಡಾರಾಜ್ ಎಂದು ಸಿಂಗ್ ಆರೋಪಿಸಿದ್ದಾರೆ. ಟಿಎಂಸಿಯ ಉತ್ತರ 24 ಪರಗಣಗಳ ಅಧ್ಯಕ್ಷ ಪಾರ್ಥ ಭೌಮಿಕ್ ಈ ಆರೋಪಗಳನ್ನು ಅಲ್ಲಗಳೆದರು ಮತ್ತು ಅವರ ಮನೆಯ ಹೊರಗಿನ ಸ್ಫೋಟಗಳಿಗೆ ಬಿಜೆಪಿ ಸಂಸದರೇ ಕಾರಣ ಎಂದು ಹೇಳಿದರು.

ಅರ್ಜುನ್ ಸಿಂಗ್, ಟಿಎಂಸಿ ವಿರುದ್ಧ ಆರೋಪ ಮಾಡಿದ್ದು, ದಾಳಿಗೆ ಕಾರಣರಾದ ಗೂಂಡಾಗಳಿಗೆ ಟಿಎಂಸಿ ರಕ್ಷಣೆ ನೀಡುತ್ತಿದೆ ಎಂದು ದೂರಿದ್ದಾರೆ. ಟಿಎಂಸಿ ಅರ್ಜುನ್ ಸಿಂಗ್ ಅವರ ಆರೋಪವನ್ನು ನಿರಾಕರಿಸಿದ್ದು, "ರಾಜಕೀಯವಾಗಿ ಚಾಲ್ತಿಯಲ್ಲಿರುವುದಕ್ಕೆ ಸಂಸದರೇ ಬಾಂಬ್ ಸ್ಫೋಟದ ನಾಟಕವಾಡಿದ್ದಾರೆ" ಎಂದು ಪ್ರತ್ಯಾರೋಪ ಮಾಡಿದೆ.

ಬುಧವಾರ ರಾಜ್ಯದ ಬಿಜೆಪಿ ಸಂಸದ ಅರ್ಜುನ್ ಸಿಂಗ್ ನಿವಾಸದ ಎದುರು ಬಾಂಬ್ ಸ್ಫೋಟಗೊಂಡಿದ್ದ ಪ್ರಕರಣವನ್ನು ರಾಜ್ಯಪಾಲರು ಗಂಭೀರವಾಗಿ ಪರಿಗಣಿಸಿ ಘಟನೆಯನ್ನು ಖಂಡಿಸಿದ್ದರು.

ಪ. ಬಂಗಾಳದಲ್ಲಿ ಹಿಂಸಾಚಾರ ಮತ್ತು ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದನ್ನು ಈ ಘಟನೆ ಸೂಚಿಸುತ್ತದೆ ಎಂದು ಜಗ್ ದೀಪ್ ಧನ್ಕರ್ ರಾಜ್ಯ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದರು.

"ಪಶ್ಚಿಮ ಬಂಗಾಳದಲ್ಲಿ ಉದ್ದೇಶಪೂರ್ವಕ ಹಿಂಸಾಚಾರವು ಕಡಿಮೆಯಾಗುವ ಲಕ್ಷಣಗಳಿಲ್ಲ. ಸಂಸತ್ ಸದಸ್ಯರ ಅರ್ಜುನ್ ಸಿಂಗ್ ಅವರ ನಿವಾಸದ ಹೊರಗೆ ಇಂದು ಬೆಳಿಗ್ಗೆ ಬಾಂಬ್ ಸ್ಫೋಟಗಳ ನಡೆದಿದ್ದು ಇದು ಕಾನೂನು ಮತ್ತು ಸುವ್ಯವಸ್ಥೆಯ ಬಗ್ಗೆ ಚಿಂತಾಜನಕವಾಗಿದೆ.

ಪಶ್ಚಿಮ ಬಂಗಾಳ ಪೊಲೀಸರಿಂದ ತ್ವರಿತ ಕ್ರಮ ನಿರೀಕ್ಷಿಸಲಾಗಿದೆ. ಅವರ ಭದ್ರತೆಗೆ ಸಂಬಂಧಿಸಿದಂತೆ ಮಮತಾ ಬ್ಯಾನರ್ಜಿ ಕ್ರಮ ಕೈಗೊಳ್ಳಬೇಕು ಎಂದು ಧನ್ಖರ್ ಸೆ.8ರಂದು ಟ್ವೀಟ್ ಮಾಡಿದ್ದರು.

ಯಾರಿಗೂ ಗಾಯವಾಗದಿದ್ದರೂ, ಬ್ಯಾರಕ್‌ನ ಗೇಟ್ ಮತ್ತು ಭಾಗವು ಹಾನಿಗೊಳಗಾಗಿದೆ. ಅಪರಾಧಿಗಳನ್ನು ಗುರುತಿಸಲು ನಾವು ಸಿಸಿಟಿವಿ ದೃಶ್ಯಗಳನ್ನು ನೋಡುತ್ತಿದ್ದೇವೆ. ಎಂಪಿಎ ಭದ್ರತೆಯನ್ನು ಕೂಡ ಬಿಗಿಗೊಳಿಸಲಾಗಿದೆ" ಎಂದು ಬರಾಕ್‌ಪೋರ್ ಪೊಲೀಸ್ ಕಮಿಷನರೇಟ್‌ನ ಹಿರಿಯ ಪೊಲೀಸ್ ಅಧಿಕಾರಿ ಹೇಳಿದರು.

ಬಿಜೆಪಿ ಸಂಸದರ ಮನೆ ಮೇಲೆ ನಡೆದ ದಾಳಿಯನ್ನು ಪಶ್ಚಿಮ ಬಂಗಾಳ ರಾಜ್ಯಪಾಲ ಜಗದೀಪ್ ಧನ್ಖರ್ ಖಂಡಿಸಿದ್ದರು ಮತ್ತು ಆದಷ್ಟು ಬೇಗ ಕ್ರಮ ಕೈಗೊಳ್ಳುವಂತೆ ಪೊಲೀಸರನ್ನು ಕೋರಿದ್ದರು. ರಾಜ್ಯದಲ್ಲಿ ಹಿಂಸಾತ್ಮಕ ಅಪರಾಧಗಳು ನಿರಂತರವಾಗಿ ಮುಂದುವರಿಯುತ್ತಿವೆ ಎಂದೂ ಅವರು ಹೇಳಿದ್ದರು.

English summary
BJP's Lok Sabha MP from Barrackpore Arjun Singh has accused the ruling TMC government in West Bengal of attempting to kill him after another crude bomb was hurled at his residence in North 24 Parganas on Tuesday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X