• search
  • Live TV
ಕೋಲ್ಕತಾ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಸೋಲು ನಿಶ್ಚಿತ: ಸ್ಮೃತಿ ಇರಾನಿ

|

ಕೋಲ್ಕತ್ತಾ, ಫೆಬ್ರವರಿ.26: ಪಶ್ಚಿಮ ಬಂಗಾಳದಲ್ಲಿ ಈ ಬಾರಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್ ಪಕ್ಷವನ್ನು ಪ್ರಜೆಗಳು ತಿರಸ್ಕರಿಸಲಿದ್ದಾರೆ ಎಂದು ಕೇಂದ್ರ ಸಚಿವೆ ಸ್ಮೃತಿ ಇರಾನಿ ಹೇಳಿದ್ದಾರೆ.

ಪಂಚಪೋಟಾದಲ್ಲಿ ಬಿಜೆಪಿ ಚುನಾವಣಾ ರ್ಯಾಲಿ ಉದ್ದೇಶಿಸಿ ಅವರು ಮಾತನಾಡಿದ್ದಾರೆ. ರಾಜ್ಯದಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು ನಡೆಸುತ್ತಿರುವ ಆಡಳಿತವನ್ನು ಹಿಂಸಾಚಾರದ ಸಂಕೇತ ಎಂದು ವ್ಯಾಖ್ಯಾನಿಸಿದ್ದಾರೆ. ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯಲ್ಲಿ ಈ ಬಾರಿ ಟಿಎಂಸಿ ಪಕ್ಷಕ್ಕೆ ತೀವ್ರ ಹಿನ್ನಡೆಯಾಗಲಿದೆ. ತೃಣಮೂಲ ಕಾಂಗ್ರೆಸ್ ಪಕ್ಷವನ್ನು ಪ್ರಜೆಗಳು ತಿರಸ್ಕರಿಸಲಿದ್ದಾರೆ ಎಂದು ಸಚಿವೆ ಸ್ಮೃತಿ ಇರಾನಿ ಭವಿಷ್ಯ ನುಡಿದಿದ್ದಾರೆ.

ಟ್ರಂಪ್‌ಗಿಂತ ಅತಿ ಕೆಟ್ಟ ಗತಿ ಮೋದಿಗೆ ಕಾದಿದೆ; ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಭಾರತೀಯ ಜನತಾ ಪಕ್ಷಕ್ಕೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ. ಬಿಜೆಪಿಗೆ ಬೆಂಬಲಿಸುವುದಕ್ಕಾಗಿ ಸಾವಿರಾರು ಸಂಖ್ಯೆಯಲ್ಲಿ ಜನರು ಮುಂದೆ ಬರುತ್ತಿದ್ದಾರೆ. ಇದನ್ನೆಲ್ಲ ನೋಡುತ್ತಿದ್ದರೆ ಈ ಬಾರಿ ರಾಜ್ಯದಲ್ಲಿ ಕಮಲ ಅರಳುವುದು ನಿಶ್ಚಿತ ಎಂದು ಸಚಿವೆ ಸ್ಮೃತಿ ಇರಾನಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಕುತೂಹಲ ಕೆರಳಿಸಿದ ಚುನಾವಣೆ:

ದೇಶದಲ್ಲೇ ತೀವ್ರ ಕುತೂಹಲ ಕೆರಳಿಸಿರುವ ಪಶ್ಚಿಮ ಬಂಗಾಳ ವಿಧಾನಸಭೆಗೆ 6-7 ಹಂತಗಳಲ್ಲಿ ಚುನಾವಣೆ ನಡೆಸಲಾಗುವುದು ಎಂದು ತಿಳಿದು ಬಂದಿದೆ. ಕಳೆದ ಬಾರಿ 2016ರಲ್ಲಿ ನಡೆದ 294 ವಿಧಾನಸಭಾ ಕ್ಷೇತ್ರಗಳ ಚುನಾವಣೆಯಲ್ಲಿ ಕಾಂಗ್ರೆಸ್ 44, ಎಡಪಕ್ಷ 33, ಟಿಎಂಸಿ 211 ಕ್ಷೇತ್ರಗಳಲ್ಲಿ ಗೆಲುವು ದಾಖಲಿಸಿದ್ದರೆ, ಬಿಜೆಪಿ 3 ಸ್ಥಾನದಲ್ಲಿ ಗೆಲುವು ಸಾಧಿಸಿತ್ತು. ಆದರೆ ಇತ್ತೀಚಿಗೆ ನಡೆದ 2019ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ 18 ಅಭ್ಯರ್ಥಿಗಳು ಜಯ ಸಾಧಿಸಿದ್ದರು. ಈ ಹಿನ್ನೆಲೆ ರಣರೋಚಕ ಕದನಕ್ಕೆ ಕೇಂದ್ರ ಚುನಾವಣಾ ಆಯೋಗವು ಶುಕ್ರವಾರ ಮುಹೂರ್ತ ನಿಗದಿಗೊಳಿಸುವ ಸಾಧ್ಯತೆ ಹೆಚ್ಚಾಗಿದೆ.

English summary
TMC Will Defeat In West Bengal Assembly Election This Time, Says Union Minister Smriti Irani.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X