ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೊರೊನಾ ಲಸಿಕೆ ಪ್ರಮಾಣ ಪತ್ರದಲ್ಲಿ ಮೋದಿ ಭಾವಚಿತ್ರ: ಟಿಎಂಸಿ ಆಕ್ಷೇಪ

|
Google Oneindia Kannada News

ಕೋಲ್ಕತ್ತಾ, ಮಾರ್ಚ್ 03: ಕೋವಿಡ್ 19 ಲಸಿಕಾ ಪ್ರಮಾಣ ಪತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾವಚಿತ್ರವಿರುವುದಕ್ಕೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಆಕ್ಷೇಪ ವ್ಯಕ್ತಪಡಿಸಿದೆ.

ಲಸಿಕೆ ಪಡೆದ ವ್ಯಕ್ತಿಗಳಿಗೆ ಆನ್‌ಲೈನ್‌ನಲ್ಲಿ ನೀಡುತ್ತಿರುವ ಪ್ರಮಾಣಪತ್ರದಲ್ಲಿ ಮೋದಿ ಭಾವಚಿತ್ರವಿದೆ. ಚುನಾವಣೆ ನಡೆಯುತ್ತಿರುವ ರಾಜ್ಯಗಳಲ್ಲಿ ಇದು ನೀತಿ ಸಂಹಿತೆಗೆ ವಿರುದ್ಧವಾದ ಕ್ರಮವಾಗಿದೆ ಎಂದಿದೆ.

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆ 2021 ದಿನಾಂಕ ಪ್ರಕಟ...ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆ 2021 ದಿನಾಂಕ ಪ್ರಕಟ...

ತೆರಿಗೆದಾರರ ಹಣದಲ್ಲಿ ಹೀಗೆ ನೀತಿ ಸಂಹಿತೆ ವಿರುದ್ಧ ಪ್ರಚಾರ ಪಡೆಯುವುದು ಸೂಕ್ತವಲ್ಲ, ಈ ಬಗ್ಗೆ ಚುನಾವಣಾ ಆಯೋಗ ಕ್ರಮ ತೆಗೆದುಕೊಳ್ಳಬೇಕು ಹಾಗೂ ಕೂಡಲೇ ಮೋದಿ ಭಾವಚಿತ್ರವನ್ನು ಪ್ರಮಾಣಪತ್ರದಿಂದ ತೆಗೆದು ಹಾಕುಬೇಕು ಟಿಎಂಸಿ ರಾಜ್ಯಸಭಾ ಸದಸ್ಯ ಡೆರೆಕ್ ಓ'ಬ್ರಿಯೆನ್ ಆಗ್ರಹಿಸಿದ್ದಾರೆ.

TMC Writes To Election Commission Over PM Modi’s Photo On Covid-19 Vaccination Doc

ಪಶ್ಚಿಮ ಬಂಗಾಳದಲ್ಲಿ ಎಂಟು ಹಂತಗಳಲ್ಲಿ ಚುನಾವಣೆ ನಡೆಯಲಿರುವುದಾಗಿ ಚುನಾವಣಾ ಆಯೋಗ ತಿಳಿಸಿದ್ದು, ಮಾರ್ಚ್ 27ಕ್ಕೆ ಮೊದಲ ಹಂತದಲ್ಲಿ ಚುನಾವಣೆ ಆರಂಭಗೊಳ್ಳಲಿದೆ. ಏಪ್ರಿಲ್ 29ಕ್ಕೆ ಅಂತಿಮ ಹಂತದ ಚುನಾವಣೆ ನಡೆಯಲಿರುವುದಾಗಿ ಚುನಾವಣಾ ಆಯೋಗ ತಿಳಿಸಿದೆ. ಮೇ 2ಕ್ಕೆ ಚುನಾವಣಾ ಫಲಿತಾಂಶ ಹೊರಬೀಳಲಿದೆ.

ತಮಿಳುನಾಡು, ಕೇರಳ, ಅಸ್ಸಾಂ, ಪಶ್ಚಿಮ ಬಂಗಾಳ ಹಾಗೂ ಪುದುಚೇರಿ ವಿಧಾನಸಭೆಗಳಲ್ಲಿ ನೀತಿ ಸಂಹಿತೆ ಜಾರಿಗೆ ಬಂದಿದೆ. 5 ರಾಜ್ಯಗಳಲ್ಲಿನ 824 ಕ್ಷೇತ್ರಗಳಲ್ಲಿ 18.68 ಕೋಟಿ ಮತದಾರರಿದ್ದಾರೆ. ಚುನಾವಣಾ ಆಯೋಗದ ಸಹಾಯವಾಣಿ ಸಂಖ್ಯೆ 1950 ಬಳಸಲು ಸೂಚಿಸಲಾಗಿದೆ.

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆ; ತೃಣಮೂಲಕ್ಕೆ ಬಲ ತುಂಬಲು ಆರ್‌ಜೆಡಿ ಜೊತೆ ಮೈತ್ರಿ?ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆ; ತೃಣಮೂಲಕ್ಕೆ ಬಲ ತುಂಬಲು ಆರ್‌ಜೆಡಿ ಜೊತೆ ಮೈತ್ರಿ?

ಕಳೆದ ಎರಡು ದಿನಗಳ ಹಿಂದಷ್ಟೇ ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಕೊರೊನಾ ಲಸಿಕೆ ಪಡೆದಿದ್ದರು. 'ಕೋವಿನ್' ಪೋರ್ಟಲ್‌ನಲ್ಲಿ ಮಾರ್ಚ್ 1ರ ಬೆಳಗ್ಗೆಯಿಂದ ಇಲ್ಲಿಯವರೆಗೆ 50 ಲಕ್ಷ ಮಂದಿ ಕೊರೊನಾ ಲಸಿಕೆಗಾಗಿ ನೋಂದಣಿ ಮಾಡಿಸಿದ್ದಾರೆ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.

ಮಂಗಳವಾರ ಮಧ್ಯಾಹ್ನದವರೆಗೆ 60 ವರ್ಷಕ್ಕೂ ಮೇಲ್ಪಟ್ಟ ಅಥವಾ ಗಂಭೀರತರದ ಸಮಸ್ಯೆಗಳಿಂದ ಬಳಲುತ್ತಿರುವ 45ರಿಂದ 60 ವರ್ಷಕ್ಕೂ ಕೆಳಗಿನ ಸುಮಾರು 2.08 ಲಕ್ಷ ಫಲಾನುಭವಿಗಳು ಕೋವಿಡ್-19 ಲಸಿಕೆಯ ಮೊದಲ ಡೋಸ್ ಪಡೆದುಕೊಂಡಿರುವುದಾಗಿ ಸರ್ಕಾರ ತಿಳಿಸಿದೆ.

English summary
The Trinamool Congress (TMC) on Tuesday wrote to the Election Commission of India (ECI) in connection with Prime Minister Narendra Modi’s photo, name and message being used on digital Covid-19 vaccination certificates given to beneficiaries.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X