• search
  • Live TV
ಕೋಲ್ಕತಾ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಟ್ರಂಪ್ ಭಾರತವನ್ನು ಚುನಾವಣಾ ಪ್ರಚಾರಕ್ಕೆ ಬಳಸಿಕೊಳ್ಳುತ್ತಿದ್ದಾರೆ: ಚೌಧರಿ

|

ಮುರ್ಷಿದಾಬಾದ್, ಫೆಬ್ರವರಿ 24: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತವನ್ನು ಚುನಾವಣಾ ಪ್ರಚಾರಕ್ಕೆ ಬಳಿಸಿಕೊಳ್ಳುತ್ತಿದ್ದಾರೆ ಎಂದು ಲೋಕಸಭಾ ಸದಸ್ಯ ಅಧಿರ್ ರಂಜನ್ ಚೌಧರಿ ಆರೋಪಿಸಿದ್ದಾರೆ.

ಟ್ರಂಪ್ ಭೇಟಿಯಿಂದ ಭಾರತ ಏನನ್ನು ಪಡೆದುಕೊಳ್ಳಲಿದೆ ಎಂಬುದು ಇನ್ನೂ ಸ್ಪಷ್ಟಗೊಂಡಿಲ್ಲ. ಭಾರತ ನಮಸ್ತೆ ಟ್ರಂಪ್ ನಡೆಸುತ್ತಿದೆ. ಟ್ರಂಪ್ ಅವರನ್ನು ಸಂತೋಷಪಡಿಸಲು ಮೋದಿಯವರು ಕೋಟಿಗಟ್ಟಲೆ ಹಣವನ್ನು ಖರ್ಚು ಮಾಡುತ್ತಿದ್ದಾರೆ.

ನಮಸ್ತೆ ಟ್ರಂಪ್: ಸೋಮವಾರ ಅಮೆರಿಕ ಅಧ್ಯಕ್ಷರ ಕಾರ್ಯಕ್ರಮಗಳ ವೇಳಾಪಟ್ಟಿ

ಮೋದಿಯವರು ನಮಸ್ತೆ ಟ್ರಂಪ್ ಕಾರ್ಯಕ್ರಮಕ್ಕೆ 1 ಕೋಟಿ ಜನರನ್ನು ಸೇರಿಸಲಿದ್ದಾರೆಂದು ಹೇಳಿದ್ದಾರೆಂದು ಟ್ರಂಪ್ ಹೇಳಿಕೆ ನೀಡಿದ್ದಾರೆ. ಇದರ ಅಗತ್ಯವೇನಿದೆ? ಟ್ರಂಪ್ ಏನು ಶ್ರೀರಾಮನಲ್ಲ. ಆದರೂ ಕೇಂದ್ರ ಸರ್ಕಾರವೇಕೆ ಇಷ್ಟು ದೊಡ್ಡ ಮೊತ್ತವನ್ನು ಖರ್ಚು ಮಾಡುತ್ತಿದೆ ಎಂದು ಪ್ರಶ್ನಿಸಿದ್ದಾರೆ.

ಭಾರತಕ್ಕೆ ಭೇಟಿ ನೀಡುತ್ತಿರುವ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕೋಟಿಗಟ್ಟಲೆ ಹಣವನ್ನು ವ್ಯಯಿಸುತ್ತಿದ್ದಾರೆ. ಆದರೆ, ಅಮೆರಿಕಾ ಅಧ್ಯಕ್ಷರು ತಮ್ಮ ಚುನಾವಣಾ ಪ್ರಚಾರಕ್ಕೆ ಭಾರತದ ಮಣ್ಣನ್ನು ಬಳಸಿಕೊಳ್ಳುತ್ತಿದ್ದಾರೆಂದು ಕಾಂಗ್ರೆಸ್ ಹೇಳಿದೆ.

ಟ್ರಂಪ್ ಔತಣಕೂಟದಲ್ಲಿ ಇದೇನು ಮೋದಿ ಸರಕಾರದ ರಾಜಕೀಯ!

ಅಮೆರಿಕಾ ಅಧ್ಯಕ್ಷ ಟ್ರಂಪ್ ಅವರು ಭಾರತದ ಮಣ್ಣನ್ನು ತಮ್ಮ ಚುನಾವಣಾ ಪ್ರಚಾರಕ್ಕೆ ಬಳಸಿಕೊಳ್ಳುತ್ತಿದ್ದಾರೆ. ಅಮೆರಿಕಾದಲ್ಲಿ ಗುಜರಾತ್ ಮೂಲದ ಸಾಕಷ್ಟು ಜನರು ವಾಸವಿದ್ದಾರೆ. ಅವರ ಮತಗಳು ಟ್ರಂಪ್ ಅವರಿಗೆ ಅತ್ಯಂತ ಮುಖ್ಯವಾಗಿದೆ. ಭಾರತ ಭೇಟಿ ವೇಳೆ ವ್ಯಾಪಾರ ಒಪ್ಪಂದಗಳಿಲ್ಲ ಎಂದು ಟ್ರಂಪ್ ಸ್ಪಷ್ಟವಾಗಿ ಹೇಳಿದ್ದಾರೆ ಎಂದು ಹೇಳಿದ್ದಾರೆ.

English summary
Leader Of Congress in Lok Sabha Adhir Ranjan Chowdhury said that PM is spending crores of Money for Donald Trump's Visit and added that the president is using Indian Soil For his election Campaign.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more
X