ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Breaking; ವಿಮಾನ ಲ್ಯಾಂಡ್‌ ಆಗುವಾಗ turbulence, 12 ಜನರಿಗೆ ಗಾಯ

|
Google Oneindia Kannada News

ಕೋಲ್ಕತ್ತಾ, ಮೇ 02; ಮುಂಬೈ-ದುರ್ಗಾಪುರ್ ನಡುವಿನ ಸ್ಪೈಸ್ ಜೆಟ್ ವಿಮಾನ ಲ್ಯಾಂಡ್ ಆಗುವ ಸಂದರ್ಭದಲ್ಲಿ ಟರ್ಬ್ಯೂಲೆನ್ಸ್‌ ಉಂಟಾಗಿದೆ. 12 ಪ್ರಯಾಣಿಕರು ಈ ಘಟನೆಯಲ್ಲಿ ಗಾಯಗೊಂಡಿದ್ದಾರೆ.

ಪ್ರಯಾಣಿಕರು ಮತ್ತು ಸಿಬ್ಬಂದಿ ಸೇರಿ ವಿಮಾನದಲ್ಲಿ 40 ಜನರಿದ್ದರು. ಟರ್ಬ್ಯೂಲೆನ್ಸ್‌ ಉಂಟಾಗಿದ್ದರಿಂದ 12 ಪ್ರಯಾಣಿಕರಿಗೆ ಚಿಕ್ಕಪುಟ್ಟ ಗಾಯವಾಗಿದೆ. ಕೆಲವರಿಗೆ ಹೊಲಿಗೆ ಸಹ ಹಾಕಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

Breaking; ಬೆಂಗಳೂರು ವಿಮಾನ ನಿಲ್ದಾಣದಲ್ಲಿ ತಪ್ಪಿದ ದುರಂತ Breaking; ಬೆಂಗಳೂರು ವಿಮಾನ ನಿಲ್ದಾಣದಲ್ಲಿ ತಪ್ಪಿದ ದುರಂತ

ಸ್ಪೈಸ್ ಜೆಟ್ ವಕ್ತಾರರು ಘಟನೆ ಬಗ್ಗೆ ಮಾಹಿತಿ ನೀಡಿದ್ದಾರೆ. 189 ಆಸನ ಸಾಮರ್ಥ್ಯದ ಬೋಯಿಂಗ್ 737-800 ವಿಮಾನ ಲ್ಯಾಂಡ್ ಆಗುವಾಗ ಚಂಡಮಾರುತದ ಪ್ರಭಾವಕ್ಕೆ ಸಿಲುಕಿದೆ. ಆಗ ಟರ್ಬ್ಯೂಲೆನ್ಸ್‌ ಉಂಟಾಗಿದೆ ಎಂದು ತಿಳಿಸಿದ್ದಾರೆ.

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಯಾವೆಲ್ಲ ಹೆಸರಿಡುವಂತೆ ಒತ್ತಾಯವಿದೆ?ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಯಾವೆಲ್ಲ ಹೆಸರಿಡುವಂತೆ ಒತ್ತಾಯವಿದೆ?

Turbulence In Spicejet Flight 12 Passengers Injured

ಒಮ್ಮೆಯೇ ಟರ್ಬ್ಯೂಲೆನ್ಸ್‌ ಉಂಟಾಗಿದ್ದರಿಂದ ಪ್ರಯಾಣಿಕರು ಗಾಬರಿಯಾದರು. ಬ್ಯಾಗ್‌ಗಳು ಪ್ರಯಾಣಿಕರ ಮೇಲೆ ಬಿದ್ದು, ಅವರಿಗೆ ಗಾಯಗಳಾಗಿವೆ ಎಂದು ಅಧಿಕಾರಿಗಳು ಹೇಳಿದ್ದಾರೆ.

 ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಯಾರ ಹೆಸರು ಸೂಕ್ತ: ಯಡಿಯೂರಪ್ಪ ಪತ್ರದಲ್ಲೇನಿದೆ? ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಯಾರ ಹೆಸರು ಸೂಕ್ತ: ಯಡಿಯೂರಪ್ಪ ಪತ್ರದಲ್ಲೇನಿದೆ?

ವಿಮಾನಯಾನ ಸಚಿವಾಲಯದ ನಿರ್ದೇಶಕ ಅರುಣ್ ಕುಮಾರ್ ಘಟನೆ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, "ಸಿಬ್ಬಂದಿ, ಪ್ರಯಾಣಿಕರು ಸೇರಿ 12 ಜನರಿಗೆ ಗಾಯಗಳಾಗಿವೆ. ಕೆಲವರಿಗೆ ತಲೆಗೆ ಪೆಟ್ಟು ಬಿದ್ದಿದೆ. ಬೆನ್ನಿಗೆ ಹೊಡೆತ ಬಿದ್ದಿದೆ ಎಂದು ಒಬ್ಬರು ಪ್ರಯಾಣಿಕರು ಹೇಳಿದ್ದಾರೆ" ಎಂದರು.

ವಿಮಾನ ಲ್ಯಾಂಡ್ ಆಗುತ್ತಿದ್ದಂತೆಯೇ ಪ್ರಯಾಣಿಕರನ್ನು ಆಸ್ಪತ್ರೆಗೆ ದಾಖಲು ಮಾಡಲಾಯಿತು. ಎಲ್ಲಾ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ದುರ್ಗಾಪುರ್ ವಿಮಾನ ನಿಲ್ದಾಣದ ಸಿಬ್ಬಂದಿಗಳು ಹೇಳಿದ್ದಾರೆ.

English summary
Spicejet flight operating from Mumbai to Durgapur saw severe turbulence. At least 12 passengers injured in the accident.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X