• search
 • Live TV
ಕೋಲ್ಕತಾ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಪಶ್ಚಿಮ ಬಂಗಾಳದಲ್ಲಿ ಶನಿವಾರವೂ ಸರ್ಕಾರಿ ಬ್ಯಾಂಕ್ ಓಪನ್

|

ಕೋಲ್ಕತ್ತಾ, ಸಪ್ಟೆಂಬರ್.04: ಪಶ್ಚಿಮ ಬಂಗಾಳದಲ್ಲಿ ಕೊರೊನಾವೈರಸ್ ಸೋಂಕು ಹರಡುವಿಕೆ ಪ್ರಮಾಣವನ್ನು ಗಮನದಲ್ಲಿಟ್ಟುಕೊಂಡು ಲಾಕ್ ಡೌನ್ ಸಡಿಲಗೊಳಿಸಲಾಗುತ್ತಿದೆ. ರಾಜ್ಯದಲ್ಲಿ ಇನ್ಮುಂದೆ ಪ್ರತಿವಾರದಂತೆ ಶನಿವಾರ ಕೂಡಾ ಬ್ಯಾಂಕ್ ಗಳು ಕಾರ್ಯನಿರ್ವಹಿಸಲು ಸರ್ಕಾರವು ಅನುಮತಿ ನೀಡಿದೆ.

   ಇದ್ದಕ್ಕಿದ್ದಂತೆ ಮತ್ತೆ ಆಸ್ಪತ್ರೆಗೆ ದಾಖಲಾದ DK ಶಿವಕುಮಾರ್ | Oneindia Kannada

   ರಾಜ್ಯದಲ್ಲಿ ಎರಡನೇ ಶನಿವಾರ ಮತ್ತು ನಾಲ್ಕನೇ ಶನಿವಾರ ಹಾಗೂ ಸರ್ಕಾರಿ ರಜಾ ದಿನಗಳನ್ನು ಹೊರತುಪಡಿಸಿದಂತೆ ಉಳಿದ ದಿನಗಳಲ್ಲಿ ಎಲ್ಲಾ ಬ್ಯಾಂಕ್ ಗಳು ಎಂದಿನಂತೆ ಕಾರ್ಯ ನಿರ್ವಹಿಸಲು ಅನುಮತಿ ನೀಡಿ ಸರ್ಕಾರ ಹೊಸ ಅಧಿಸೂಚನೆ ಹೊರಡಿಸಿದೆ.

   ಎಸ್‌ಬಿಐ ಎಟಿಎಂ ಬಳಕೆದಾರರೇ ಗಮನಿಸಿ: ಎಸ್‌ಬಿಐನಿಂದ ಹೊಸ ವೈಶಿಷ್ಟ್ಯ ಪರಿಚಯ

   ಕೊರೊನಾವೈರಸ್ ಸೋಂಕು ಹರಡುವಿಕೆ ಆತಂಕದ ನಡುವೆ ಕಂಟೇನ್ಮೆಂಟ್ ವಲಯಗಳಿಂದ ಹೊರ ಪ್ರದೇಶಗಳಲ್ಲಿ ಹಲವು ಚಟುವಟಿಕೆಗಳಿಗೆ ಅವಕಾಶ ನೀಡಲಾಗಿದೆ. ರಾಜ್ಯದಲ್ಲಿ ಕಳೆದ ವಾರ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ ಹೆಚ್ಚಾದ ಹಿನ್ನೆಲೆ ಶನಿವಾರ ಬ್ಯಾಂಕ್ ಗಳನ್ನು ಬಂದ್ ಮಾಡುವಂತೆ ಸರ್ಕಾರವು ಆದೇಶ ಹೊರಡಿಸಿತ್ತು. ಇದನ್ನು ಹೊರತುಪಡಿಸಿ ಭಾರತೀಯ ರಿಸರ್ವ್ ಬ್ಯಾಂಕ್ ನಿಯಮಗಳ ಪ್ರಕಾರ ವಾರದ ಪ್ರತಿ 2ನೇ ಮತ್ತು 4ನೇ ಶನಿವಾರವು ಬ್ಯಾಂಕ್ ಗಳು ರಜೆಯಿರಲಿವೆ.

   ಪಶ್ಚಿಮ ಬಂಗಾಳದಲ್ಲಿ 3 ದಿನ ಸಂಪೂರ್ಣ ಲಾಕ್ ಡೌನ್:

   ಕೊರೊನಾವೈರಸ್ ಸೋಂಕು ಹರಡುವಿಕೆ ಪ್ರಮಾಣವನ್ನು ತಗ್ಗಿಸುವ ಉದ್ದೇಶದಿಂದ ಪಶ್ಚಿಮ ಬಂಗಾಳದಲ್ಲಿ ಗುರುತಿಸಿರುವ ಕಂಟೇನ್ಮೆಂಟ್ ವಲಯಗಳಲ್ಲಿ ಸಪ್ಟೆಂಬರ್.30ರವರೆಗೂ ಲಾಕ್ ಡೌನ್ ಮುಂದುವರಿಕೆ ಆಗಲಿದೆ. ಇದನ್ನು ಹೊರತುಪಡಿಸಿದಂತೆ ಸಪ್ಟೆಂಬರ್.7, 11, ಮತ್ತು 12ರಂದು ರಾಜ್ಯಾದ್ಯಂತ ಲಾಕ್ ಡೌನ್ ಮಾಡುವುದಾಗಿ ಸರ್ಕಾರವು ತಿಳಿಸಿದೆ.

   ಸೆಪ್ಟೆಂಬರ್ ತಿಂಗಳಲ್ಲಿನ ಬ್ಯಾಂಕ್ ರಜಾದಿನಗಳ ಪಟ್ಟಿ

   ಕಳೆದ ತಿಂಗಳು ರಾಜ್ಯದ ಬ್ಯಾಂಕ್ ಸಿಬ್ಬಂದಿಯಲ್ಲೇ ಅತಿಹೆಚ್ಚು ಕೊರೊನಾವೈರಸ್ ಸೋಂಕಿತ ಪ್ರಕರಣಗಳು ಪತ್ತೆಯಾಗಿದ್ದವು. ಈ ಹಿನ್ನೆಲೆ ಬ್ಯಾಂಕ್ ಚಟುವಟಿಕೆಗಳ ಮೇಲೆ ಹೆಚ್ಚು ನಿಗಾವಹಿಸಿ ವಾರಾಂತ್ಯದಲ್ಲಿ ಬ್ಯಾಂಕ್ ಚಟುವಟಿಕೆಗಳನ್ನು ಬಂದ್ ಮಾಡುವಂತೆ ಆದೇಶಿಸಲಾಗಿತ್ತು.

   ಪಶ್ಚಿಮ ಬಂಗಾಳದಲ್ಲಿ ಗುರುವಾರದ ಅಂಕಿ-ಅಂಶಗಳ ಪ್ರಕಾರ, ಒಂದೇ ದಿನ 2984 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿದ್ದು, ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆಯು 171681ಕ್ಕೆ ಏರಿಕೆಯಾಗಿತ್ತು. ಈ ಪೈಕಿ 24039 ಸಕ್ರಿಯ ಪ್ರಕರಣಗಳಿದ್ದು, ಮಹಾಮಾರಿಗೆ ರಾಜ್ಯದಲ್ಲಿ ಇದುವರೆಗೂ 3394 ಜನರು ಪ್ರಾಣ ಬಿಟ್ಟಿದ್ದಾರೆ.

   English summary
   Unlock 4: West Bengal Govt Allows Banks To Work On Saturdays.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X