ವೈರಲ್ ವಿಡಿಯೋ; ಪೊಲೀಸರು, ಜನರ ನಡುವೆ ಹೊಡೆದಾಟ

ಕೋಲ್ಕತ್ತಾ, ಏಪ್ರಿಲ್ 22 : ಕೊರೊನಾ ಹರಡದಂತೆ ತಡೆಯಲು ಲಾಕ್ ಡೌನ್ ಜಾರಿಯಲ್ಲಿದೆ. ಲಾಕ್ ಡೌನ್ ವೇಳೆ ಅಗತ್ಯ ವಸ್ತಗಳಿಗಾಗಿ ಜನರು ಪರದಾಡುತ್ತಿದ್ದಾರೆ. ಪಡಿತರಗಳನ್ನು ಸರಿಯಾಗಿ ಹಂಚುತ್ತಿಲ್ಲ ಎಂದು ಜನರು ಪೊಲೀಸರ ಜೊತೆಗೆ ಗಲಾಟೆ ಮಾಡಿದ್ದಾರೆ.

ಹೌದು, ಪಶ್ಚಿಮ ಬಂಗಾಳದಲ್ಲಿ ಪೊಲೀಸರು ಮತ್ತು ಸ್ಥಳೀಯ ಜನರ ನಡುವಿನ ಗಲಾಟೆಯ ವಿಡಿಯೋ ವೈರಲ್ ಆಗಿದೆ. ಮಹಿಳೆಯೊಬ್ಬಳು ಪೊಲೀಸರ ಜೊತೆ ಜಗಳಕ್ಕೆ ನಿಂತಿದ್ದಾಳೆ. ಆಗ ಇಬ್ಬರು ಪೊಲೀಸರು ಮಹಿಳೆಯನ್ನು ಅಟ್ಟಾಡಿಸಿಕೊಂಡು ಹೋಗಿದ್ದಾರೆ.

ಪಶ್ಚಿಮ ಬಂಗಾಳದ ಭದುರಿಯಾದಲ್ಲಿ ಈ ಘಟನೆ ನಡೆದಿದೆ. ಸರಿಯಾಗಿ ಪಡಿತರಗಳನ್ನು ಹಂಚುತ್ತಿಲ್ಲ ಎಂದು ಆರೋಪಿಸಿದ ಸ್ಥಳೀಯ ಜನರು ರಸ್ತೆಯನ್ನು ಬ್ಲಾಕ್ ಮಾಡಿ ಪೊಲೀಸರ ಜೊತೆ ಜಗಳಕ್ಕೆ ಇಳಿದಿದ್ದರು. ಆಗ ಪೊಲೀಸರು ಜನರನ್ನು ಚದುರಿಸಲು ಲಾಠಿ ಚಾರ್ಜ್ ಮಾಡಿದ್ದಾರೆ.

Viral Video Locals Clash With Police At West Bengal

ಮಹಿಳೆಯೊಬ್ಬರು ಪೊಲೀಸರ ಲಾಠಿಯನ್ನು ಕಸಿದುಕೊಳ್ಳಲು ಪ್ರಯತ್ನ ನಡೆಸಿದ್ದಾಳೆ. ಆಗ ಪೊಲೀಸರು ಆಕೆಯನ್ನು ಓಡಿಸಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಕೊರೊನಾ ವಿರುದ್ಧದ ಹೋರಾಟದಲ್ಲಿ ಪಶ್ಚಿಮ ಬಂಗಾಳ ಸದಾ ಸುದ್ದಿಯಲ್ಲಿದೆ. ಕೇಂದ್ರ ಸರ್ಕಾರ ತಮಗೆ ಅಗತ್ಯ ಸಹಕಾರ ನೀಡುತ್ತಿಲ್ಲ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.

ಬುಧವಾರ ಸಂಜೆಯ ತನಕ ಪಶ್ಚಿಮ ಬಂಗಾಳದಲ್ಲಿ 423 ಕೊರೊನಾ ಪ್ರಕರಣಗಳು ದಾಖಲಾಗಿವೆ. 15 ಜನರು ಮೃತಪಟ್ಟಿದ್ದಾರೆ. 355 ಸಕ್ರಿಯ ಪ್ರಕರಣಗಳು ರಾಜ್ಯದಲ್ಲಿವೆ.

ವೈರಲ್ ಆಗಿರುವ ವಿಡಿಯೋ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+