ಕತಾರ್ ಏರ್ ವೇಸ್ ವಿಮಾನಕ್ಕೆ ಕೋಲ್ಕತ್ತಾದಲ್ಲಿ ನೀರು ಟ್ಯಾಂಕರ್ ಡಿಕ್ಕಿ

ಕೋಲ್ಕತ್ತಾ (ಪಶ್ಚಿಮ ಬಂಗಾಲ), ನವೆಂಬರ್ 1: ಇಲ್ಲಿನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನೀರಿನ ಟ್ಯಾಂಕರ್ ವೊಂದು ಗುರುವಾರ ಕತಾರ್ ಏರ್ ವೇಸ್ ನ ವಿಮಾನಕ್ಕೆ ಡಿಕ್ಕಿ ಹೊಡೆದಿದೆ. ದೋಹಾಕ್ಕೆ ತೆರಳಬೇಕಿದ್ದ ಆ ವಿಮಾನದಲ್ಲಿ ನೂರಕ್ಕೂ ಹೆಚ್ಚು ಪ್ರಯಾಣಿಕರಿದ್ದರು. ವಿಮಾನ ಟೇಕ್ ಆಫ್ ಆಗುವ ಕೆಲವೇ ನಿಮಿಷಗಳ ಮುನ್ನ ಘಟನೆ ಸಂಭವಿಸಿದೆ.

ನೇತಾಜಿ ಸುಭಾಷ್ ಚಂದ್ರ ಬೋಸ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರು ವಿಮಾನ ಏರುವ ವೇಳೆ ಈ ಘಟನೆ ಸಂಭವಿಸಿದೆ. "ಪ್ರಯಾಣಿಕರನ್ನು ಸುರಕ್ಷಿತವಾಗಿ ತೆರವು ಮಾಡಲಾಗಿದೆ. ನಾಗರಿಕ ವಿಮಾನಯಾನ ಸೇವೆಯ ಮಹಾ ನಿರ್ದೇಶಕರಿಗೆ ಈ ಘಟನೆ ಬಗ್ಗೆ ಮಾಹಿತಿ ನೀಡಿದ್ದೇವೆ ಎಂದು ವಿಮಾನ ನಿಲ್ದಾಣದ ನಿರ್ದೇಶಕ ಅತುಲ್ ದೀಕ್ಷಿತ್ ಹೇಳಿದ್ದಾರೆ.

ಈ ಬಗ್ಗೆ ತನಿಖೆ ಆರಂಭಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ವಿಮಾನ ನಿಲ್ದಾಣದಲ್ಲಿ ಮುಂಚೆಯೇ ನಿರ್ಧಾರವಾದ ಮಾರ್ಗ ಹಾಗೂ ವೇಗದಲ್ಲಿ ವಾಹನಗಳು ಚಲಿಸುತ್ತವೆ. ಅಂಥದ್ದರಲ್ಲಿ ವಾಹನದ ಮೇಲೆ ಚಾಲಕ ನಿಯಂತ್ರಣ ಕಳೆದುಕೊಂಡಿದ್ದು ಹೇಗೆ ಎಂದು ತಿಳಿದುಕೊಳ್ಳಬೇಕಿದೆ ಎಂದು ಹೆಸರು ಹೇಳಲಿಚ್ಛಿಸದ ಅಧಿಕಾರಿಯೊಬ್ಬರು ಹೇಳಿದ್ದಾರೆ.

Water tanker hits Qatar Airways plane at Kolkata airport

ಎಲ್ಲ ಪ್ರಯಾಣಿಕರಿಗೂ ನಗರದ ಹೋಟೆಲ್ ನಲ್ಲಿ ಉಳಿದುಕೊಳ್ಳುವ ವ್ಯವಸ್ಥೆ ಮಾಡಲಾಯಿತು. ಮರು ದಿನ ದೋಹಾಗೆ ತೆರಳುವ ವಿಮಾನದಲ್ಲಿ ಅವರನ್ನೆಲ್ಲ ಕಳುಹಿಸಲಾಗುವುದು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+