ಚುನಾವಣಾ ಆಯೋಗಕ್ಕೆ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಎಚ್ಚರಿಕೆ
ಕೋಲ್ಕತ್ತಾ, ಏಪ್ರಿಲ್ 1: ಪಶ್ಚಿಮ ಬಂಗಾಳದಲ್ಲಿ ಗುರುವಾರ ಎರಡನೇ ಹಂತದ ಚುನಾವಣೆ ನಡೆದಿದ್ದು, ಕೆಲವು ಪ್ರದೇಶಗಳಲ್ಲಿ ಬಿಜೆಪಿ- ಟಿಎಂಸಿ ಕಾರ್ಯಕರ್ತರ ನಡುವೆ ಗಲಭೆ ಏರ್ಪಟ್ಟ ಘಟನೆಯೂ ವರದಿಯಾಗಿದೆ.
Home Minister himself is instructing CRPF, BSF and other jawans to help only BJP and its goons. I apologise to my Election Commission for their silence. We have given so many letters but they are one-sidedly supporting BJP candidates: West Bengal CM Mamata Banerjee pic.twitter.com/eBxNLR2sIU
— ANI (@ANI) April 1, 2021
ಸಿಎಂ ಮಮತಾ ಬ್ಯಾನರ್ಜಿ ಪ್ರತಿನಿಧಿಸಿರುವ ನಂದಿಗ್ರಾಮದಲ್ಲಿ ಬೆಳಿಗ್ಗೆ ಎರಡೂ ಪಕ್ಷಗಳ ನಡುವೆ ಗಲಭೆ ನಡೆದಿದ್ದು, ಈ ಸಂಬಂಧ ಬಿಜೆಪಿ ಮೇಲೆ ಮಮತಾ ಬ್ಯಾನರ್ಜಿ ಕಿಡಿಕಾರಿದ್ದಾರೆ. ಮತಗಟ್ಟೆಗಳ ಮೇಲೆ ಬಿಜೆಪಿ ದಾಳಿ ನಡೆಸಿದೆ ಎಂದು ದೂರಿದ್ದಾರೆ.
ಬಿಹಾರಿಗಳ ಕುರಿತು ಹೇಳಿಕೆ; ಮಮತಾ ಬ್ಯಾನರ್ಜಿ ವಿರುದ್ಧ ದೂರು ದಾಖಲು
ಇದೇ ಸಂದರ್ಭ ಚುನಾವಣಾ ಆಯೋಗದ ಮೇಲೆ ಹರಿಹಾಯ್ದಿರುವ ಅವರು, "ಇಂದು ಬೆಳಿಗ್ಗೆಯಿಂದ ಟಿಎಂಸಿ ಚುನಾವಣಾ ಆಯೋಗಕ್ಕೆ 63 ದೂರುಗಳನ್ನು ಸಲ್ಲಿಸಿದೆ. ಆದರೆ ಒಂದರ ಕುರಿತೂ ಕ್ರಮ ತೆಗೆದುಕೊಂಡಿಲ್ಲ. ಇದನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ. ನಮ್ಮ ದೂರುಗಳ ಬಗ್ಗೆ ಮೌನ ವಹಿಸಿರುವ ಆಯೋಗ ಬಿಜೆಪಿಗೆ ಬೆಂಬಲ ನೀಡುತ್ತಿದೆ. ಇದು ಹೀಗೇ ಮುಂದುವರೆದರೆ ನಾವು ಆಯೋಗದ ವಿರುದ್ಧ ನ್ಯಾಯಾಲಯಕ್ಕೆ ಹೋಗಬೇಕಾಗುತ್ತದೆ" ಎಂದು ಎಚ್ಚರಿಕೆ ನೀಡಿದ್ದಾರೆ.
ಗೃಹ ಸಚಿವ ಅಮಿತ್ ಶಾ ನಿರ್ದೇಶನದಂತೆ ಚುನಾವಣಾ ಆಯೋಗ ನಡೆದುಕೊಳ್ಳುತ್ತಿದೆ. ಜೊತೆಗೆ ಬಿಜೆಪಿ ಹಾಗೂ ಅವರ ಬೆಂಬಲಿಗರಿಗೆ ಮಾತ್ರ ಸಹಾಯ ಮಾಡುವಂತೆ ಸಿಆರ್‌ಪಿಎಫ್, ಬಿಎಸ್‌ಎಫ್ ಹಾಗೂ ಇನ್ನಿತರ ಪೊಲೀಸ್ ಅಧಿಕಾರಿಗಳಿಗೆ ಅಮಿತ್ ಶಾ ಸೂಚಿಸುತ್ತಿದ್ದಾರೆ. ಇವಿಎಂಗಳನ್ನು ನಿಯಂತ್ರಣಕ್ಕೆ ತೆಗೆದುಕೊಳ್ಳಲು ಬಿಜೆಪಿ ಪ್ರಯತ್ನಿಸುತ್ತಿದೆ. ಬೂತ್‌ಗಳಲ್ಲಿ ನಿಯೋಜನೆಗೊಂಡಿರುವ ಸಿಆರ್‌ಪಿಎಫ್ ಸಿಬ್ಬಂದಿ ಕೂಡ ಕ್ರಮ ತೆಗೆದುಕೊಳ್ಳುತ್ತಿಲ್ಲ ಎಂದು ಆರೋಪಿಸಿದ್ದಾರೆ.